ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಯದುವೀರ್ ಕಾಂಗ್ರೆಸ್ ನಿಂದ ಸ್ಪರ್ಧಿಸುವಂತೆ ಸಿಎಂ ಮತ್ತು ಡಿಸಿಎಂ ನೀಡಿದ ಆಹ್ವಾನ ನಿರಾಕರಿಸಿದ್ದರು; ಬಿವೈ ವಿಜಯೇಂದ್ರ

Twitter
Facebook
LinkedIn
WhatsApp
ಯದುವೀರ್ ಕಾಂಗ್ರೆಸ್ ನಿಂದ ಸ್ಪರ್ಧಿಸುವಂತೆ ಸಿಎಂ ಮತ್ತು ಡಿಸಿಎಂ ನೀಡಿದ ಆಹ್ವಾನ ನಿರಾಕರಿಸಿದ್ದರು; ಬಿವೈ ವಿಜಯೇಂದ್ರ

ಮಡಿಕೇರಿ: ’ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೀಡಿದ ಆಹ್ವಾನವನ್ನೂ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ನಿರಾಕರಿಸಿದ್ದರು’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈವಿಜಯೇಂದ್ರ ಹೇಳಿದರು.

ಬುಧವಾರ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿ, ‘ಬಿಜೆಪಿ ಯದುವೀರ್ ಅವರಿಗೆ ಟಿಕೆಟ್ ಘೋಷಿಸುವ ಮುನ್ನಾ ದಿನ ದೂರವಾಣಿ ಕರೆ ಮಾಡಿದ್ದ ಸಿಎಂ ಮತ್ತು ಡಿಸಿಎಂ, ರಾಜಕಾರಣದಲ್ಲಿ ಆಸಕ್ತಿ ಇದ್ದರೆ ಕಾಂಗ್ರೆಸ್‌ನಿಂದ ಟಿಕೆಟ್ ನೀಡುವುದಾಗಿ ಹೇಳಿದ್ದರು. ಅವರಿಗೆ ‌ಪ್ರತಿಕ್ರಿಯಿಸಿದ್ದ ಯದುವೀರ್, ರಾಜಕಾರಣದಲ್ಲಿ ಆಸಕ್ತಿ ಇದೆ ಎಂದು ಸ್ಪರ್ಧಿಸುತ್ತಿಲ್ಲ. ನರೇಂದ್ರ ಮೋದಿ ಅವರ ಅಪೇಕ್ಷೆಯ ಮೇರೆಗೆ ದೇಶದ ಸೇವೆಗೆ ಬರುತ್ತಿದ್ದೇನೆ ಎಂದಿದ್ದರು’ ಎಂದು ವಿಜಯೇಂದ್ರ ತಿಳಿಸಿದರು.

ಯದುವೀರ್ ಮಾತನಾಡಿ, ‘ಮೋದಿ ಅವರ ಅಪೇಕ್ಷೆಯಂತೆ ಅಭ್ಯರ್ಥಿಯಾಗಿದ್ದೇನೆ. ನಮ್ಮ ಪೂರ್ವಿಕರ ಆಡಳಿತವು ಮೈಸೂರು ಸಂಸ್ಥಾನದ ಇತಿಹಾಸದಲ್ಲಿ ಸುವರ್ಣಯುಗ ಎನಿಸಿತ್ತು. ಹಾಗೆಯೇ, ನರೇಂದ್ರ ಮೋದಿ ಅವರ ಆಡಳಿತವೂ ಈಗ ಸುವರ್ಣಯುಗ ಎನಿಸಿದೆ’ ಎಂದರು.

‘ಹಾಲಿ ಸಂಸದ ಪ್ರತಾಪಸಿಂಹ ಅವರಿಗೆ ರಾಜ್ಯ ರಾಜಕಾರಣದಲ್ಲಿ ಉಜ್ವಲ ಭವಿಷ್ಯವಿದೆ. ನಾನು ಅಧ್ಯಕ್ಷನಾಗಿರುವವರೆಗೂ ಅವರ ಭವಿಷ್ಯದ ಕುರಿತು ಚಿಂತನೆ ಮಾಡುತ್ತೇನೆ’ ಎಂದು ವಿಜಯೇಂದ್ರ ಭರವಸೆ ನೀಡಿದರು.

ಪ್ರಧಾನಿ ಮೋದಿ ಅಲೆ, ಸೋಲಿನ ಭೀತಿಯಿಂದ ಸಚಿವರು ಸ್ಪರ್ಧಿಸುತ್ತಿಲ್ಲ- ಬಿವೈ ವಿಜಯೇಂದ್ರ ಟೀಕೆ

ಮೈಸೂರುಪ್ರಧಾನಿ ಮೋದಿ ಅಲೆ ಮತ್ತು ಸೋಲಿನ ಭೀತಿಯಿಂದ ಲೋಕಸಭೆ ಚುನಾವಣೆಯಲ್ಲಿ ಸಚಿವರು ಸ್ಪರ್ಧಿಸುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಟೀಕಿಸಿದರು.

ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ಬಳಿಕ ಮಾತನಾಡಿದ ಬಿವೈ ವಿಜಯೇಂದ್ರ,  ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಸಚಿವರನ್ನ ಕಣಕ್ಕಿಳಿಸಬೇಕು ಎಂಬುದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಯೋಜನೆಯಾಗಿತ್ತು. ಆದರೆ, ಪ್ರಧಾನಿ ನರೇಂದ್ರ ಮೋದಿ ಅಲೆಗೆ ಹೆದರಿ  ಸಚಿವರು ಸ್ಪರ್ಧಿಸಲು ಮುಂದೆ ಬರಲೇ ಇಲ್ಲ. 18 ಮಂದಿ ಸಚಿವರನ್ನು ಲೋಕಸಭೆ ಚುನಾವಣೆಯಲ್ಲಿ ಕಣಕ್ಕಿಳಿಸಲು ಸಿಎಂ ಹಾಗೂ ಡಿಸಿಎಂ ಮುಂದಾಗಿದ್ದರು. ಆದರೆ, ಸೋಲಿನ ಭೀತಿಯಿಂದ ಸಚಿವರು ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ ಎಂದು ಲೇವಡಿ ಮಾಡಿದರು.

ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ಶಾಪ ಎನ್ನುವ ರೀತಿಯಾಗಿದೆ. ಕಡಿಮೆ ಅವಧಿಯಲ್ಲಿ  ಸರ್ಕಾರ ಜನಪ್ರಿಯತೆ ಕಳೆದುಕೊಂಡಿದೆ. ಯಾರ ಪರವಾಗಿಯೂ ಈ ಸರ್ಕಾರವಿಲ್ಲ ಎಂದು ಜನ ಬೇಸತ್ತಿದ್ದಾರೆ. ಜನಪ್ರಿತೆ ಕಳೆದುಕೊಂಡಿರುವ ಕಾಂಗ್ರೆಸ್ ಪಕ್ಷವೀಗ ನಮ್ಮ ಮುಖಂಡರನ್ನು ಸೆಳೆಯುವ ಕೆಲಸ ಮಾಡುತ್ತಿದೆ ಎಂದು ವಿಜಯೇಂದ್ರ  ಹರಿಹಾಯ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ