ಭಾನುವಾರ, ಏಪ್ರಿಲ್ 21, 2024
ಬಂಟ್ವಾಳದಲ್ಲಿ ಮತ್ತೊಬ್ಬ ಬಿಲ್ಲವ ನಾಯಕನನ್ನು ಸೆಳೆದ ಬಿಜೆಪಿ. ಪುರಸಭಾ ಸದಸ್ಯ ಗಂಗಾಧರ ಪೂಜಾರಿ ಬಿಜೆಪಿ ಸೇರ್ಪಡೆ!-ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ಸುರೇಶ್ ಪರ ಇಂದು ದರ್ಶನ್ ಬೃಹತ್ ರೋಡ್ ಶೋ..!-ನದಿಯಲ್ಲಿ ದೋಣಿ ಮುಳುಗಿ ಇಬ್ಬರ ಸಾವು; 7 ಮಂದಿ ನಾಪತ್ತೆ..!-ಇಂದು ಬೆಂಗಳೂರು ಮತ್ತು ಚಿಕ್ಕಬಳ್ಳಾಪುರಕ್ಕೆ ಮೋದಿ ಆಗಮನ..!-Rain Alert: ಕರಾವಳಿ ಮತ್ತು ಮಲೆನಾಡು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆ ಮುನ್ಸೂಚನೆ..!-ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಯದುವೀರ್ ಒಡೆಯರ್ ನಾಮಪತ್ರ ಸಲ್ಲಿಕೆ; ಒಟ್ಟು ಆಸ್ತಿ ಮೌಲ್ಯ ಎಷ್ಟು.!

Twitter
Facebook
LinkedIn
WhatsApp
ಯದುವೀರ್ ಒಡೆಯರ್ ನಾಮಪತ್ರ ಸಲ್ಲಿಕೆ; ಒಟ್ಟು ಆಸ್ತಿ ಮೌಲ್ಯ ಎಷ್ಟು.!

ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮೈಸೂರು – ಕೊಡಗು ಕ್ಷೇತ್ರದಿಂದ ಕಣಕ್ಕೆ ಇಳಿದಿರುವ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್‌ ಆಸ್ತಿ ವಿಚಾರ ಈಗ ಗಮನಸೆಳೆದಿದೆ. ಯದುವೀರ್ ಅವರು ಸೋಮವಾರ (ಏಪ್ರಿಲ್‌ 1) ನಾಮಪತ್ರ ಸಲ್ಲಿಸಿದರು. ಈ ಹಿಂದೆ, ಏಪ್ರಿಲ್ 3ರಂದು ಯದುವೀರ್ ನಾಮಪತ್ರ ಸಲ್ಲಿಸಲು ನಿರ್ಧರಿಸಿದ್ದರು. ಆದರೆ ಜ್ಯೋತಿಷಿಗಳ ಸಲಹೆಯ ಮೇರೆಗೆ ಸೋಮವಾರವೇ ನಾಮಪತ್ರ ಸಲ್ಲಿಸಿದರು.

ಮೈಸೂರು ಜಿಲ್ಲಾ ಚುನಾವಣಾಧಿಕಾರಿ ಹಾಗು ಜಿಲ್ಲಾಧಿಕಾರಿ ಡಾ ಕೆ ವಿ ರಾಜೇಂದ್ರ ಅವರಿಗೆ ಯದುವೀರ್ ಒಡೆಯರ್ ನಾಮಪತ್ರ ಸಲ್ಲಿಸಿದರು. ಈ ವೇಳೆ ಯದುವೀರ್ ಅವರ ತಾಯಿ ಪ್ರಮೋದಾದೇವಿ ಒಡೆಯರ್ ಮತ್ತು ಶಾಸಕ ಶ್ರೀವತ್ಸ ಉಪಸ್ಥಿತರಿದ್ದರು. ಅಂದಹಾಗೆ ಏಪ್ರಿಲ್ 3ರಂದು ಕೂಡ ಯದುವೀರ್ ಒಡೆಯರ್ ಅವರು ಪಕ್ಷದ ಪ್ರಮುಖರೊಂದಿಗೆ ಮೆರವಣಿಗೆ ಮೂಲಕ ಸಾಗಿ ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ. ಯದುವೀರ್ ಒಡೆಯರ್ ಅವರು ನಾಮಪತ್ರ ಸಲ್ಲಿಸಿದ ವೇಳೆ ತಮಗಿರುವ ಆಸ್ತಿಯನ್ನು ಘೋಷಣೆ ಮಾಡಿದ್ದಾರೆ. ಯದುವೀರ್ ಅವರು ಒಟ್ಟು 4,99,59,303 ಮೌಲ್ಯದ ಆಸ್ತಿಗಳಿರುವುದಾಗಿ ಘೋಷಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಒಡೆಯರ್ ಬಳಿ ಇರೋದಿಷ್ಟೆ ಆಸ್ತಿಪಾಸ್ತಿ

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಯದುವೀರ್ ಒಡೆಯರ್ ಒಟ್ಟು 4.99 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಘೋಷಿಸಿದ್ದಾರೆ. ಯದುವೀರ್ ಹೆಸರಿನಲ್ಲಿ ಸ್ವಂತ ವಾಹನ ಅಥವಾ ಸ್ಥಿರಾಸ್ತಿ ಇಲ್ಲ, ಯದುವೀರ್ ಬಳಿ ಯಾವುದೇ ಕೃಷಿಭೂಮಿ, ಸ್ವಂತಮನೆ ಹೊಂದಿಲ್ಲ. ವಾಣಿಜ್ಯ ಕಟ್ಟಡಗಳಿಲ್ಲ, ಬ್ಯಾಂಕ್‌ಗಳಲ್ಲಿ ಸಾಲ ಪಡೆದಿಲ್ಲ. ಯದುವೀರ್ ವಿರುದ್ಧ ಯಾವುದೇ ಪ್ರಕರಣಗಳು ದಾಖಲಾಗಿಲ್ಲ.

ಯದುವೀರ್, ತ್ರಿಷಿಕಾ ದಂಪತಿ ಪುತ್ರ ಆದ್ಯವೀರ್ ತಾಯಿಗಿಂತಲೂ ಸಿರಿವಂತ. ಯದುವೀರ್ ಕೈಯಲ್ಲಿ ನಗದು 1 ಲಕ್ಷ ರೂ. ಇದ್ದು, ಮಡದಿ ತ್ರಿಷಿಕಾ ಕೈಯಲ್ಲಿ 75 ಸಾವಿರ ರೂಪಾಯಿ ಇದೆ. ವಿವಿಧ ಬ್ಯಾಂಕುಗಳ ಉಳಿತಾಯ ಖಾತೆಗಳಲ್ಲಿ ಯದುವೀರ್ ಒಡೆಯರ್‌ ಹೆಸರಿನಲ್ಲಿ 23.55 ಲಕ್ಷ ರೂಪಾಯಿ, ಮಡದಿ ತ್ರಿಷಿಕಾ ಹೆಸರಲ್ಲಿ 1 ಲಕ್ಷ ರೂಪಾಯಿ ಬ್ಯಾಂಕ್ ಡೆಪಾಸಿಟ್ ಇಡಲಾಗಿದೆ. ಯದುವೀರ್ ಹೆಸರಿನಲ್ಲಿ 1,33,04,303 ರೂಪಾಯಿ ಹೂಡಿಕೆ ಮಾಡಲಾಗಿದೆ. ಅವರ ಮಗನ ಹೆಸರಿನಲ್ಲಿ 1,49,00,343 ರೂಪಾಯಿ ಹೂಡಿಕೆ ಮಾಡಲಾಗಿದೆ.

ಯದುವೀರ್ ಬಳಿ ಚಿನ್ನ ಬೆಳ್ಳಿ ಎಷ್ಟಿದೆ

ಯದುವೀರ್ ಒಡೆಯರ್‌ ಹೆಸರಿನಲ್ಲಿ 3.25 ಕೋಟಿ ರೂ. ಮೌಲ್ಯದ 4 ಕೆಜಿ ಚಿನ್ನವಿದೆ. ಮಡದಿ ತ್ರಿಷಿಕಾ ಹೆಸರಿನಲ್ಲಿ 90 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಹಾಗೂ 5.5 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಗಟ್ಟಿ, ಪುತ್ರನ ಹೆಸರಿನಲ್ಲಿ 12 ಲಕ್ಷ ರೂಪಾಯಿ ಚಿನ್ನ ಹಾಗೂ 5.5 ಲಕ್ಷ ರೂಪಾಯಿ ಚಿನ್ನದ ಗಟ್ಟಿ ಇದೆ.

ಯದುವೀರ್ ಒಡೆಯರ್ ಹೆಸರಿನಲ್ಲಿ 14 ಲಕ್ಷ ರೂ. ಮೌಲ್ಯದ 20 ಕೆಜಿ ಬೆಳ್ಳಿ, ಮಡದಿ ಹೆಸರಿನಲ್ಲಿ 7 ಲಕ್ಷ ರೂ. ಮೌಲ್ಯದ 10 ಕೆಜಿ ಬೆಳ್ಳಿ, ಹಾಗೂ ಮಗನ ಹೆಸರಿನಲ್ಲಿ 7 ಲಕ್ಷರೂ ಮೌಲ್ಯದ 10 ಕೆಜಿ ಬೆಳ್ಳಿ ಇದೆ. ಒಟ್ಟು ಇವೆಲ್ಲ ಸೇರಿಸಿ ಯದುವೀರ್ ಹೆಸರಿನಲ್ಲಿ 3.33 ಕೋಟಿ ರೂಪಾಯಿ, ಮಡದಿ ಹೆಸರಿನಲ್ಲಿ 1 ಕೋಟಿ ಹಾಗೂ ಮಗನ ಹೆಸರಿನಲ್ಲಿ 20 ಲಕ್ಷ ರೂ ಮೌಲ್ಯದ ಚಿನ್ನಾಭರಣಗಳಿವೆ.

ಯದುವೀರ್ ಹೆಸರಿನಲ್ಲಿ 4,90,59,303 ರೂ., ಮಡದಿ ತ್ರಿಷಿಕಾ ಹೆಸರಿನಲ್ಲಿ 1,04,25,000 ರೂ. ಹಾಗೂ ಪುತ್ರನ ಹೆಸರಿನಲ್ಲಿ 3,13,55,343 ರೂಪಾಯಿ ಮೌಲ್ಯದ ಒಟ್ಟು ಆಸ್ತಿ ಹೊಂದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ