ಭಾನುವಾರ, ಸೆಪ್ಟೆಂಬರ್ 15, 2024
20 ವರ್ಷಗಳ ಬಳಿಕ ಹುಕ್ಕೇರಿ ಪುರಸಭೆ ಕಾಂಗ್ರೆಸ್ ತೆಕ್ಕೆಗೆ-ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Yash: ಸುರ್ಯ ಸದಾಶಿವರುದ್ರ ದೇವಸ್ಥಾನ, ಧರ್ಮಸ್ಥಳ, ಸುಬ್ರಹ್ಮಣ್ಯಕ್ಕೆ ಭೇಟಿ ಕೊಟ್ಟ ಯಶ್

Twitter
Facebook
LinkedIn
WhatsApp
Yash visited Surya Sadashivarudra Temple, Dharmasthala, Subrahmanya

Yash: ಸುರ್ಯ ಸದಾಶಿವರುದ್ರ ದೇವಸ್ಥಾನ, ಧರ್ಮಸ್ಥಳ, ಸುಬ್ರಹ್ಮಣ್ಯಕ್ಕೆ ಭೇಟಿ ಕೊಟ್ಟ ಯಶ್. 

ಬೆಳ್ತಂಗಡಿ: ಕೆಜಿಎಫ್ ಸಿನೆಮಾದ ಮೂಲಕ ಮನೆಮಾತಾಗಿರುವ ರಾಕಿಂಗ್ ಸ್ಟಾರ್ ಯಶ್ (Yash) ಅವರು ಕುಟುಂಬ ಸಮೇತರಾಗಿ ಮಂಗಳವಾರ ಬೆಳ್ತಂಗಡಿ ತಾಲೂಕಿನಲ್ಲಿರುವ ಮಣ್ಣಿನ ಹರಕೆಯಿಂದ ಪ್ರಸಿದ್ಧಿ ಪಡೆದಿರುವ ಸುರ್ಯ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ‌ ನೀಡಿದರು.

ಸಿನೆಮಾದ ಸಕ್ಸಸ್ ಗಾಗಿ ಈ ಹಿಂದೆ ಭೇಟಿ ನೀಡಿದ್ದ ಅವರು ಪತ್ನಿ ರಾಧಿಕಾ ಪಂಡಿತ್, ಮಕ್ಕಳೊಂದಿಗೆ ಬಂದು ದೇವರಿಗೆ ಕುಟುಂಬ ಹಾಗೂ ಸಿನೆಮಾ ರೀಲ್ ನ ಮಣ್ಣಿನ ಹರಕೆ ಅರ್ಪಿಸಿ ವಿಶೇಷ ಪೂಜೆ ಸಲ್ಲಿಸಿದರು.

ಈ ವೇಳೆ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾದ ಸುರ್ಯ ಗುತ್ತು ಡಾ.ಸತೀಶ್ಚಂದ್ರ ಎಸ್. ಅವರು ದಂಪತಿಗಳನ್ನು ಕ್ಷೇತ್ರದ ವತಿಯಿಂದ ಗೌರವಿಸಿದರು.
ಬಳಿಕ ನೇರವಾಗಿ ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆದ ಅಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಅಲ್ಲಿಂದ ನೇರವಾಗಿ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ದೇವರ ದರುಶನ ಪಡೆದು, ಪ್ರಾರ್ಥನೆ ಸಲ್ಲಿಸಿದರು. ಅರ್ಚಕರು ಪ್ರಸಾದ ನೀಡಿದರು.

ಅನ್ನದಾನಕ್ಕೆ ಒಂದು ಲಕ್ಷ ರೂ. ದೇಣಿಗೆ ನೀಡಿದ ನಟ ಯಶ್‌: 

ನಟ ಯಶ್‌ ಅವರು ಪತ್ನಿ ರಾಧಿಕಾ ಪಂಡಿತ್‌ ಹಾಗೂ ಮಕ್ಕಳೊಂದಿಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿಶ್ರೀ ಸುಬ್ರಹ್ಮಣ್ಯ ಸ್ವಾಮಿಯ ದೇವರ ದರುಶನ ಪಡೆದು, ಪ್ರಾರ್ಥನೆ ಸಲ್ಲಿಸಿದರು. ಅರ್ಚಕರು ಪ್ರಸಾದ ನೀಡಿದರು.

ಬಳಿಕ ಹೊಸಳಿಗಮ್ಮನ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು. ಕ್ಷೇತ್ರಕ್ಕೆ ಆಗಮಿಸಿದ ನಟ ಯಶ್‌ ಅವರನ್ನು ದೇಗುಲದ ವತಿಯಿಂದ ಸ್ವಾಗತಿಸಲಾಯಿತು. ದೇಗುಲದ ವತಿಯಿಂದ ನಡೆಯುತ್ತಿರುವ ಅನ್ನದಾನಕ್ಕೆ ಯಶ್‌ ಅವರು ಒಂದು ಲಕ್ಷ ರೂ. ದೇಣಿಗೆ ನೀಡಿದರು

ನಟ ಯಶ್‌ ಅವರ ಮುಂದಿನ ಚಿತ್ರದ ಶೂಟಿಂಗ್‌ ಮುಂದಿನ ದಿನಗಳಲ್ಲಿ ಆರಂಭವಾಗಲಿದ್ದು, ಅದಕ್ಕೂ ಮೊದಲು ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆಯಲು ಆಗಮಿಸಿದ್ದಾರೆ ಎಂದು ತಿಳಿದುಬಂದಿದೆ. ಸುಬ್ರಹ್ಮಣ್ಯ ಎಸ್‌ಐ ಕಾರ್ತಿಕ್‌ ನೇತೃತ್ವದಲ್ಲಿ ಪೊಲೀಸರು ಭದ್ರತೆ ಒದಗಿಸಿದ್ದರು.

ಧರ್ಮಸ್ಥಳಕ್ಕೆ ಭೇಟಿ ಕೊಟ್ಟ ಯಶ್:

ಯಶ್ ಅವರು ಧರ್ಮಸ್ಥಳಕ್ಕೆ ತೆರಳಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಬಂದ ವಿಡಿಯೋ ಹಾಗೂ ಫೋಟೋಗಳು ಎಲ್ಲಡೆ ವೈರಲ್ ಆಗುತ್ತಿವೆ. ಪತ್ನಿ ರಾಧಿಕಾ ಪಂಡಿತ್, ನಿರ್ಮಾಪಕ ವೆಂಕಟ್​ ನಾರಾಯಣ್ ಮೊದಲಾದವರು ಯಶ್​ಗೆ ಜೊತೆಯಾಗಿದ್ದಾರೆ. 

ಯಶ್ ಅವರು ಧರ್ಮಸ್ಥಳಕ್ಕೆ ಭೇಟಿ ನೀಡಲು ಒಂದು ಪ್ರಮುಖ ಕಾರಣ ಇದೆ ಎನ್ನಲಾಗಿದೆ. ಆ ಕಾರಣ ಏನು ಎಂಬುದನ್ನು ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಆ ಬಗ್ಗೆ ಈ ಸ್ಟೋರಿಯಲ್ಲಿ ಉತ್ತರ ಇದೆ.

ಯಶ್ ಅವರು ‘ಕೆಜಿಎಫ್ 2’ ಚಿತ್ರದ ಮೂಲಕ ಯಶಸ್ಸು ಕಂಡರು. ಅವರಿಗೆ ದೊಡ್ಡ ಮಟ್ಟದ ಜನಪ್ರಿಯತೆ ಸಿಕ್ಕಿದೆ. ಈಗ ಯಶ್ ಅವರ ಸಂಪೂರ್ಣ ಗಮನ ‘ಟಾಕ್ಸಿಕ್’ ಚಿತ್ರದ ಮೇಲೆ ಇದೆ. ಈ ಸಿನಿಮಾದ ಶೂಟಿಂಗ್ ಆಗಸ್ಟ್ 8ರಂದು ಆರಂಭ ಆಗಲಿದೆ ಎಂದು ವರದಿ ಆಗಿದೆ. ಅದಕ್ಕೂ ಮೊದಲು ಯಶ್ ಅವರು ಧರ್ಮಸ್ಥಳಕ್ಕೆ ತೆರಳಿ ಮಂಜುನಾಥನ ದರ್ಶನ ಪಡೆದಿದ್ದಾರೆ. ಅಷ್ಟೇ ಅಲ್ಲ, ಅಲ್ಲಿ ಪ್ರಸಾದ ರೂಪದಲ್ಲಿ ನೀಡುವ ಊಟವನ್ನು ಮಾಡಿ ಬಂದಿದ್ದಾರೆ. ಸಿನಿಮಾ ಕೆಲಸಗಳು ಆರಂಭ ಆಗುವ ಸನಿಹದಲ್ಲಿ ಇರುವ ಕಾರಣದಿಂದಲೇ ಯಶ್ ಅವರು ಅಲ್ಲಿಗೆ ತೆರಳಿದ್ದಾರೆ ಎಂದು ವರದಿ ಆಗಿದೆ.

ಯಶ್ ಅವರು ಧರ್ಮಸ್ಥಳಕ್ಕೆ ಸಾಕಷ್ಟು ಬಾರಿ ತೆರಳಿದ್ದಾರೆ. ಇದಕ್ಕೆ ಕಾರಣ ಆಗಿರೋದು ಅವರು ತಂದೆ ನೀಡಿದ ಹೇಳಿಕೆ ಎಂದು ಹೇಳಲಾಗುತ್ತಿದೆ. ಯಶ್ ಅವರು ಈ ಮೊದಲು ನೀಡಿದ್ದ ಹೇಳಿಕೆಯನ್ನು ಯಶ್ ಫ್ಯಾನ್ಸ್ ವೈರಲ್ ಮಾಡುತ್ತಿದ್ದಾರೆ. ಅಷ್ಟಕ್ಕೂ ಯಶ್ ಅವರು ಅಂದು ಹೇಳಿದ್ದು ಏನು ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

ನಮ್ಮ ಅಪ್ಪ ಯಾವಾಗಲೂ ಹೇಳುತ್ತಾ ಇರುತ್ತಾರೆ. ಧರ್ಮಸ್ಥಳ ಮಂಜುನಾಥನ ಬೇಡಿಕೋ ಎಲ್ಲದೂ ಆಗುತ್ತದೆ. ಆ ನಂಬಿಕೆಯಲ್ಲಿ ಬೆಳೆದು ಬಂದವರು ನಾವು. ಸಂಪೂರ್ಣ ಕರ್ನಾಟಕ ಆ ನಂಬಿಕೆಯಲ್ಲಿ ಬದುಕುತ್ತಾ ಇದೆ. ನನಗೆ ಇದ್ದಿದ್ದು ಒಂದೇ ನಂಬಿಕೆ ಎಂದರೆ ಮಂಜುನಾಥ ಸ್ವಾಮಿ ಕೈ ಬಿಡಲ್ಲ ಎಂದು’ ಎಂದು ಯಶ್ ಅವರು ಈ ಮೊದಲು ಹೇಳಿಕೊಂಡಿದ್ದರು. ಈಗ ‘ಟಾಕ್ಸಿಕ್’ ಸಿನಿಮಾ ಶೂಟಿಂಗ್ ಆರಂಭ ಆಗುತ್ತಿರುವುದರಿಂದ ಅವರು ಧರ್ಮಸ್ಥಳಕ್ಕೆ ಭೇಟಿ ಕೊಟ್ಟಿದ್ದಾರೆ.

‘ಟಾಕ್ಸಿಕ್’ ಸಿನಿಮಾಗೆ ಮಲಯಾಳಂ ನಿರ್ದೇಶಕಿ ಗೀತು ಮೋಹನ್​ದಾಸ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಕೆವಿಎನ್ ಪ್ರೊಡಕ್ಷನ್​ ಇದನ್ನು ನಿರ್ಮಾಣ ಮಾಡುತ್ತಿದೆ. ಈ ಚಿತ್ರ ಮುಂದಿನ ವರ್ಷ ರಿಲೀಸ್ ಆಗುವ ನಿರೀಕ್ಷೆ ಇದೆ. ಆದರೆ, ಈ ಬಗ್ಗೆ ಇನ್ನಷ್ಟೇ ಮಾಹಿತಿ ಸಿಗಬೇಕು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ