ಭಾನುವಾರ, ಸೆಪ್ಟೆಂಬರ್ 15, 2024
20 ವರ್ಷಗಳ ಬಳಿಕ ಹುಕ್ಕೇರಿ ಪುರಸಭೆ ಕಾಂಗ್ರೆಸ್ ತೆಕ್ಕೆಗೆ-ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಿದ್ದರಾಮಯ್ಯರನ್ನು ಇಕ್ಕಟ್ಟಿಗೆ ಸಿಲುಕಿಸಿದ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ; ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಬೇಕು ಎಂದ ಬೊಮ್ಮಾಯಿ

Twitter
Facebook
LinkedIn
WhatsApp
ಯತೀಂದ್ರ ಸಿದ್ದರಾಮಯ್ಯ - ಬೊಮ್ಮಾಯಿ

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ವರುಣಾ (Varuna) ಕ್ಷೇತ್ರದ ಅಭ್ಯರ್ಥಿಯಾಗಿದ್ದ ಸಿದ್ದರಾಮಯ್ಯ (Siddaramaiah) ಅವರು ಕುಕ್ಕರ್, ಐರನ್ ಬಾಕ್ಸ್ ಹಂಚಿಕೆ ಮಾಡಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ ಎಂದು ಅವರ ಪುತ್ರ ಡಾ. ಯತೀಂದ್ರ (Yatindra) ಅವರು ನೀಡಿರುವ ಹೇಳಿಕೆ ನಿಜವಾಗಿದ್ದರೆ ಚುನಾವಣಾ ಆಯೋಗ (Election Commission) ಗಂಭೀರವಾಗಿ ಪರಿಗಣಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಆಗ್ರಹಿಸಿದ್ದಾರೆ.

ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಈ ಕುರಿತು ಯತೀಂದ್ರ ಅವರು ಹೇಳಿದ್ದು ನಿಜವಾಗಿದ್ದರೆ, ಅದನ್ನು ಚುಬಾವಣಾ ಆಯೋಗ ಗಮನಿಸಬೇಕಾಗುತ್ತದೆ. ಈಗಾಗಲೇ ಸಿದ್ದರಾಮಯ್ಯ ವಿರುದ್ಧ ಒಂದು ಚುನಾವಣಾ ತಕರಾರು ಅರ್ಜಿ ಇದೆ ಎಂದರು.

ಮತದಾರರಿಗೆ ಕುಕ್ಕರ್, ಐರನ್ ವಾಕ್ಸ್ ಹಂಚಿದ್ದರಿಂದಲೇ ತಮ್ಮ ತಂದೆ ಸಿದ್ದರಾಮಯ್ಯ ಅವರು ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಾಯಿತು ಎಂದು ಯತಿಂದ್ರ ಅವರು ಬಹಿರಂಗ ಹೇಳಿಕೆ ನೀಡಿದ್ದಾರೆ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬೊಮ್ಮಾಯಿಯವರು, ಈ ಕುರಿತು ಯತೀಂದ್ರ ಅವರು ಹೇಳಿದ್ದು ನಿಜವಾಗಿದ್ದರೆ, ಅದನ್ನು ಚುಬಾವಣಾ ಆಯೋಗ ಗಮನಿಸಬೇಕಾಗುತ್ತದೆ.

ಈಗಾಗಲೇ ಸಿದ್ದರಾಮಯ್ಯ ವಿರುದ್ಧ ಒಂದು ಚುನಾವಣಾ ತಕರಾರು ಅರ್ಜಿ ಇದೆ. ಡಾ. ಯತೀಂದ್ರ ಹೇಳಿದ್ದಕ್ಕೆ ಸಾಕ್ಷ್ಯಾಧಾರ ಇದ್ದರೆ ಆಯೋಗ ಇದನ್ನು ಪರಿಗಣಿಸಬೇಕಾಗುತ್ತದೆ. ಕುಕ್ಕರ್, ಐರನ್ ಬಾಕ್ಸ್ ಹಂಚಿಕೆ ನಿಜ ಆಗಿದ್ದರೆ ಇದು ಗಂಭೀರ ಪ್ರಕರಣ ಆಗಲಿದೆ ಎಂದು ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟರು. 

ಯತೀಂದ್ರ ಹೇಳಿದ್ದೇನು?
ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕು ಮಡಿವಾಳ ಸಮುದಾಯ ಭವನದ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಡಾ. ಯತೀಂದ್ರ ಸಿದ್ದರಾಮಯ್ಯ, ಭಾಷಣದ ವೇಳೆ ಚುನಾವಣಾ ಸತ್ಯ ಬಹಿರಂಗಪಡಿಸಿದ್ದು ಚುನಾವಣಾ ಸಮಯದಲ್ಲಿ ವರುಣಾ ಕ್ಷೇತ್ರದ ಮಡಿವಾಳ ಸಮುದಾಯ ಮತದಾರರಿಗೆ ಸಮುದಾಯದ ರಾಜ್ಯಾಧ್ಯಕ್ಷ ನಂಜಪ್ಪ ಕುಕ್ಕರ್, ಐರನ್ ಬಾಕ್ಸ್ ವಿತರಿಸಲು ಸಿದ್ದ ಮಾಡಿಕೊಂಡಿದ್ದರು. ಕಾರಣಾಂತರಗಳಿಂದ ಎರಡು ಮೂರು ಬಾರಿ ಮುಂದೂಡಲಾಗಿತ್ತು. ನಂತರ ತಂದೆಯವರಿಂದ ದಿನಾಂಕ ಪಡೆದು, ಅವರ ಕೈಯಲ್ಲೇ ಕುಕ್ಕರ್ ಹಾಗೂ ಐರನ್ ಬಾಕ್ಸ್ ಕೊಡಿಸಿದರು ಎಂದಿದ್ದಾರೆ.

ಆ ಕಾರ್ಯಕ್ರಮ ಬಹಳ ಯಶಸ್ವಿಯಾಯಿತು. ಮಡಿವಾಳ ಸಮುದಾಯದ ಹೆಚ್ಚು ಮತ ಬೀಳಲು ಕಾರಣವಾಯಿತು. ಮಡಿವಾಳ ಸಮುದಾಯ ಹೆಚ್ಚಿನ ಬೆಂಬಲ ಕೊಟ್ಟಿದ್ದಕ್ಕೆ ನಿಮಗೆ ಧನ್ಯವಾದ ಎಂದು ಯತೀಂದ್ರ ತಿಳಿಸಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ