ಶನಿವಾರ, ಡಿಸೆಂಬರ್ 21, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಯವರಾಜರೇ ನಿಮಗೆ ನಿಮ್ಮದೇ ಘನತೆ ಇದೆ, ದಯವಿಟ್ಟು ರಾಜಕೀಯಕ್ಕೆ ಬರಬೇಡಿ; ಪೋಸ್ಟರ್‌ ಅಭಿಯಾನ

Twitter
Facebook
LinkedIn
WhatsApp
ಯವರಾಜರೇ ನಿಮಗೆ ನಿಮ್ಮದೇ ಘನತೆ ಇದೆ, ದಯವಿಟ್ಟು ರಾಜಕೀಯಕ್ಕೆ ಬರಬೇಡಿ; ಪೋಸ್ಟರ್‌ ಅಭಿಯಾನ

ರಾಜ್ಯದ ಗಮನ ಸೆಳೆದಿರುವ ಮೈಸೂರು-ಕೊಡಗು (Mysore-Kodagu) ಲೋಕಸಭಾ(Loka Saba) ಕ್ಷೇತ್ರದ ಬಿಜೆಪಿ(BJP) ಅಭ್ಯರ್ಥಿ ವಿಚಾರ ಭಾರೀ ಕುತೂಹಲ ಮೂಡಿಸಿದೆ. ಮಹತ್ವದ ಬೆಳವಣಿಗೆಯಲ್ಲಿ ಸಂಸದ ಪ್ರತಾಪ್‌ ಸಿಂಹ(Prathap Simha) ಬದಲಿಗೆ ರಾಜವಂಶಸ್ಥ ಯದುವೀರ್‌ ಒಡೆಯರ್‌ (Yaduveer) ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಬಿಜೆಪಿ ಮುಂದಾಗಿದೆ. ಇನ್ನೊಂದೆಡೆ ರಾಜವಂಶಸ್ಥ ಯದುವೀರ್‌ ಅವರು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವ ಮೂಲಕ ರಾಜಕೀಯಕ್ಕೆ ಎಂಟ್ರಿಕೊಡುವ ಕುರಿತಂತೆ ಸಾರ್ವಜನಿಕ ವಲಯದಲ್ಲಿ ದೊಡ್ಡಮಟ್ಟದ ಚರ್ಚೆ ನಡೆಯುತ್ತಿದೆ. ಯದುವೀರ್‌ ಒಡೆಯರ್‌ ಅವರು ಅವರು ಚುನಾವಣೆಗೆ ಸ್ಪರ್ಧೆ ಮಾಡುವ ವಿಷಯದ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ(Social Media)ದಲ್ಲಿ ಚರ್ಚೆ ನಡೆಯುತ್ತಿದ್ದು, ದಯವಿಟ್ಟು ರಾಜಕೀಯಕ್ಕೆ ಬರಬೇಡಿ. ರಾಜರಾಗಿರಿ ಕೇವಲ ಮಂತ್ರಿಯಾಗಬೇಡಿ ಎನ್ನುವ ಪೋಸ್ಟರ್ ಅಭಿಯಾನ ಆರಂಭವಾಗಿದೆ.

ರಾಜವಂಶಸ್ಥ ಯದುವೀರ್ ಒಡೆಯರ್ ಬಿಜೆಪಿ ಅಭ್ಯರ್ಥಿ ಆಗುತ್ತಾರೆ ಎಂಬ ಸಂಗತಿ ಹೊರಬೀಳುತ್ತಿದ್ದಂತೆ ಹಲವರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಕೂಡ ಆರಂಭಿಸಿದ್ದಾರೆ. ಯದುವೀರ್‌ ಒಡೆಯರ್‌ ಅವರು ರಾಜಕೀಯಕ್ಕೆ ಬರದಂತೆ ಪೋಸ್ಟರ್ ಅಭಿಯಾನ ಆರಂಭಿಸಿದ್ದು, “ಯವರಾಜರೇ ನಿಮಗೆ ನಿಮ್ಮದೇ ಘನತೆ ಇದೆ, ದಯವಿಟ್ಟು ರಾಜಕೀಯಕ್ಕೆ ಬರಬೇಡಿ. ರಾಜರಾಗಿರಿ ಕೇವಲ ಮಂತ್ರಿಯಾಗಬೇಡಿ” ಎಂದು ಮನವಿ ಮಾಡಿದ್ದಾರೆ.

ಯದುವೀರ್ ಸ್ಪರ್ಧೆಗೆ ಪ್ರತಾಪ್ ಸಿಂಹ ಟಾಂಗ್

ಮೈಸೂರು-ಕೊಡಗು ಲೋಕಸಭೆಯ ಬಿಜೆಪಿ ಟಿಕೆಟ್ ಮೈಸೂರು ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್​ಗೆ ಸಿಗೋದು ಬಹುತೇಕ ಪಕ್ಕಾ ಆಗಿದೆ. ಬಿಜೆಪಿಯ ಪ್ರಬಲ ಟಿಕೆಟ್ ಆಕಾಂಕ್ಷಿ ಆಗಿರುವ ಹಾಲಿ ಸಂಸದ ಪ್ರತಾಪ್​ ಸಿಂಹಗೆ ಕೈತಪ್ಪುತ್ತಿರೋದು ಬಹುತೇಕ ದೃಢವಾಗಿದೆ. ಅದೇ ಕಾರಣಕ್ಕೆ ಯದುವೀರ್ ಒಡೆಯರ್​​ ಅವರಿಗೆ ಪ್ರತಾಪ್ ಸಿಂಹ ತಮ್ಮ ಮೊನಚು ಮಾತುಗಳ ಮೂಲಕ ತಿವಿದಿದ್ದಾರೆ

ಮಾಧ್ಯಮಗಳ ಎದುರು ಬೇಸರಿಂದಲೇ ಮೈಸೂರು ಮಹಾರಾಜರಿಗೆ ಟಾಂಗ್ ನೀಡಿರುವ ಪ್ರತಾಪ್ ಸಿಂಹ, ಪಕ್ಷದಲ್ಲಿ ಒಂದು ಪ್ರೊಟೋಕಾಲ್ ಇರುತ್ತದೆ, ಕಾರ್ಯಕಾರಣಿ ಸಭೆ ನಡೆಯುತ್ತದೆ. ರಾಜ್ಯಾಧ್ಯಕ್ಷರು, ಪ್ರಮುಖರು, ದೊಡ್ಡವರು ಮೇಲೆ ಕೂತಿರುತ್ತಾರೆ. ನಮ್ಮಂಥವರು ಕೆಳಗಡೆ ಕೂತಿರುತ್ತೇವೆ. ಇನ್ಮೇಲೆ ರಾಜರು ಕೆಳಗಡೆ ಕೂರೋದಕ್ಕೂ ರೆಡಿ ಇದ್ದಾರೆ. ಅಷ್ಟೇ ಅಲ್ಲ, ನಮ್ಮ ರಾಜ್ಯಾಧ್ಯಕ್ಷರು ಮೈಸೂರಿಗೆ ಬರುತ್ತಿದ್ದಾರೆ ಅಂದರೆ ನಾವು ಹೋಟೆಲ್ ಮುಂದೆ ಬಿಸಿಲಲ್ಲಿ ಬೊಕ್ಕೆ ಹಿಡಿದು ಕಾಯುತ್ತಿರುತ್ತೇವೆ. ಮಹಾರಾಜರು ಆ ರೀತಿ ಕಾಯೋದಕ್ಕೂ ಸಿದ್ಧರಿದ್ದಾರೆ. ಇದ್ಕಿಂತ ಖುಷಿ ಇನ್ನೇನಿದೆ? ಎಂದು ಪರೋಕ್ಷವಾಗಿ ಯದುವೀರ್ ಕಾಲೆಳೆದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist