ಯಡಿಯೂರಪ್ಪ ಮತ್ತು ಬಿ ವೈ ವಿಜಯೇಂದ್ರ ಗೆ ಹೈಕಮಾಂಡ್ ಬುಲಾವ್ ; ಶೋಭಾ ಕರಂದ್ಲಾಜೆ ಗೆ ಟಿಕೆಟ್ ಫಿಕ್ಸ್..?
ಲೋಕಸಭಾ ಚುನಾವಣೆಗೆ (Parliament Election) ಸಂಬಂಧಿಸಿ ದೇಶದಲ್ಲಿ 195 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೊಳಿಸಿದ್ದರೂ ಬಿಜೆಪಿ ರಾಜ್ಯದಲ್ಲಿ ತನ್ನ ಮೊದಲ ಪಟ್ಟಿಯನ್ನು (BJP Candidates list) ಬಿಡುಗಡೆಗೊಳಿಸಿಲ್ಲ. ರಾಜ್ಯದ ಬಿಜೆಪಿ ಅಭ್ಯರ್ಥಿಗಳ ಕುರಿತ ಒಂದು ಹಂತದ ಚರ್ಚೆ ಬುಧವಾರವೇ ನಡೆದಿತ್ತಾದರೂ ಅಭ್ಯರ್ಥಿಗಳನ್ನು ಅಂತಿಮ ಮಾಡಿರಲಿಲ್ಲ. ಇದೀಗ ಎರಡನೇ ಹಂತದ ಸಭೆ ಸೋಮವಾರ (ಮಾರ್ಚ್ 11) ಪ್ರಧಾನಿ ನರೇಂದ್ರ ಮೋದಿ (PM Narendra Modi) ನೇತೃತ್ವದಲ್ಲಿ ನಡೆಯಲಿದೆ. ಆ ಸಭೆಯಲ್ಲಿ ಚರ್ಚೆ ನಡೆದು ಮಂಗಳವಾರ ಇಲ್ಲವೇ ಬುಧವಾರ ಪಟ್ಟಿ ಬಿಡುಗಡೆಯ ನಿರೀಕ್ಷೆ ಇದೆ.
ಸೋಮವಾರ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಹಿರಿಯ ನಾಯಕರಾದ ಅಮಿತ್ ಶಾ, ಬಿಎಸ್ ಯಡಿಯೂರಪ್ಪ (BS Yediyurappa) ಸೇರಿದಂತೆ ಬಿಜೆಪಿ ವರಿಷ್ಠರ ಸಭೆ ಆಯೋಜನೆಯಾಗಿದೆ. ಸಭೆಯಲ್ಲಿ ಬಿಜೆಪಿಯ ದೇಶದ ಎರಡನೇ ಪಟ್ಟಿ ರಾಜ್ಯದ ಮೊದಲ ಪಟ್ಟಿಯ ಚರ್ಚೆ ನಡೆಯಲಿದೆ. ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ಸೇರಿದಂತೆ ರಾಜ್ಯ ಪ್ರಮುಖ ನಾಯಕರ ಅಭಿಪ್ರಾಯ ಪಡೆದಿರುವ ವರಿಷ್ಠರು ಮತ್ತೊಂದು ಸುತ್ತಿನ ಚರ್ಚೆಗೆ ಆಹ್ವಾನಿಸಿದ್ದಾರೆ.
ಬಿ.ಎಸ್ ಯಡಿಯೂರಪ್ಪ, ಬಿವೈ ವಿಜಯೇಂದ್ರ, ಆರ್ ಅಶೋಕ್, ಬಸವರಾಜ ಬೊಮ್ಮಾಯಿ ಅವರನ್ನು ಭಾನುವಾರವೇ ದಿಲ್ಲಿಗೆ ಬರುವಂತೆ ಸೂಚಿಸಲಾಗಿದೆ. ಅಂದು ಕೂಡಾ ಒಂದು ಸುತ್ತಿನ ಚರ್ಚೆ ನಡೆದು ಸೋಮವಾರಕ್ಕೆ ವೇದಿಕೆ ಅಣಿ ಮಾಡುವ ಸಾಧ್ಯತೆ ಕಂಡುಬಂದಿದೆ.
ಶೋಭಾ ಕರಂದ್ಲಾಜೆಗೆ ಟಿಕೆಟ್?
ಹೌದು ಇದೀಗ ಯಕ್ಷಪ್ರಶ್ನೆಯಾಗಿ ಉಳಿದಿರುವ ವಿಚಾರ ಏನು ಅಂದ್ರೆ, ಶೋಭಾ ಕರಂದ್ಲಾಜೆ ಅವರಿಗೆ ಈ ಬಾರಿಯ ಉಡುಪಿ & ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಟಿಕೆಟ್ ಸಿಗುತ್ತಾ? ಸಿಗಲ್ವಾ? ಅಂತಾ. ಈಗಿನ ಲೆಕ್ಕಾಚಾರಗಳ ಪ್ರಕಾರ ಉಡುಪಿ & ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಈಗ ಶೋಭಾ ಕರಂದ್ಲಾಜೆ ಅವರ ವಿರುದ್ಧ, ಅಸಮಾಧಾನದ ಹೊಗೆ ಆಡುತ್ತಿದೆ. ಈ ಕಾರಣಕ್ಕೆ 2024 ಲೋಕಸಭೆ ಚುನಾವಣೆಯಲ್ಲಿ, ಬಿಜೆಪಿ ಪಕ್ಷದಿಂದ ಶೋಭಾ ಕರಂದ್ಲಾಜೆ ಅವರಿಗೆ ಉಡುಪಿ & ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಟಿಕೆಟ್ ಸಿಗಲ್ಲ ಎನ್ನಲಾಗುತ್ತಿದೆ. ಹೀಗಿದ್ದಾಗಲೂ ಕರಂದ್ಲಾಜೆ ಅವರಿಗೆ ಟಿಕೆಟ್ ಸಿಕ್ಕೇ ಸಿಗುತ್ತೆ ಎಂಬ ಮಾತು ಕೇಳಿಬಂದಿವೆ.
ಕರ್ನಾಟಕ ಬಿಜೆಪಿ ಒಳಗೆ ಬಣಗಳು ಇರುವುದು ನಿಮಗೆಲ್ಲಾ ಗೊತ್ತಿರುವ ಸಂಗತಿ. ಅದ್ರಲ್ಲೂ ಬಿಎಸ್‌ವೈ ಅವರನ್ನು ಸಿಎಂ ಸ್ಥಾನದಿಂದ ಕೆಳಗೆ ಇಳಿಸಲು ಹಲವರು ಪ್ರಯತ್ನ ಮಾಡಿದ್ದರು ಎಂಬ ಆರೋಪವೂ ಇದೆ. ಹೀಗಿದ್ದಾಗಲೇ 2023ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ, ಹೀನಾಯವಾಗಿ ಕರ್ನಾಟಕದಲ್ಲಿ ಸೋತಿತ್ತು. ಈ ಎಲ್ಲಾ ಬೆಳವಣಿಗೆ ನಡುವೆ ಬಿಜೆಪಿ ಕೇಂದ್ರ ನಾಯಕರು 2024ರ ಲೋಕಸಭೆ ಚುನಾವಣೆಗೆ ಮೊದಲೇ ಅಲರ್ಟ್ ಆಗಿದ್ದು ಯಡಿಯೂರಪ್ಪ ಅವರ ಕೈ ಬಲಪಡಿಸಿದ್ದಾರೆ. ಇದೇ ಕಾರಣಕ್ಕೆ ಇದೀಗ 2024ರ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಿಂದ ಸ್ಪರ್ಧೆ ಮಾಡಲಿರುವ ಬಿಜೆಪಿ ಅಭ್ಯರ್ಥಿಗಳನ್ನ ಯಡಿಯೂರಪ್ಪ ಅವರೇ, ಆಯ್ಕೆ ಮಾಡಿ ಪಟ್ಟಿ ರೆಡಿ ಮಾಡಿದ್ದಾರೆ ಎನ್ನಲಾಗಿದೆ