ʼಕೈʼಯಿಂದ ತಪ್ಪಿದ ಟಿಕೆಟ್: JDS ಸೇರಿದ ಅನಿಲ್ ಲಾಡ್
ಬೆಂಗಳೂರು: ಕಾಂಗ್ರೆಸ್ ನಿಂದ ಟಿಕೆಟ್ ಕೈ ತಪ್ಪಿದಕ್ಕೆ ಅಸಮಾಧಾನಗೊಂಡು ಬಂಡಾಯ ಎದಿದ್ದ ಮಾಜಿ ಶಾಸಕ ಅನಿಲ್ ಲಾಡ್ ರಾತ್ರೋ ರಾತ್ರಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಕಾಂಗ್ರೆಸ್ ಪಕ್ಷ ತನಗೆ ಟಿಕೆಟ್ ನೀಡುತ್ತದೆ ಎನ್ನುವ ಭರವಸೆಯಲ್ಲಿದ್ದ ಮಾಜಿ ಶಾಸಕ ಅನಿಲ್ ಲಾಡ್ ಅವರಿಗೆ ಟಿಕೆಟ್ ನೀಡಿಲ್ಲ. ಇದರಿಂದ ತಮ್ಮ ಪಕ್ಷದ ವಿರುದ್ಧವೇ ಅಸಮಾಧಾನಗೊಂಡು ಬಂಡಾಯ ಅಭ್ಯರ್ಥಿಯಾಗಿ ನಿಲ್ಲುವುದಾಗಿ ಅನಿಲ್ ಲಾಡ್ ಹೇಳಿದ್ದರು. ಆದರೆ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಬಂಡಾಯ ಅಭ್ಯರ್ಥಿಯ ಬದಲು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಬುಧವಾರ ಮುಂಜಾನೆ ಹೆಚ್. ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಬಳ್ಳಾರಿ ಕ್ಷೇತ್ರದಿಂದಲೇ ಸ್ಪರ್ಧಿಸಲು ಬಿ ಫಾರ್ಮ್ ಪಡೆದುಕೊಂಡಿದ್ದಾರೆ. ಈ ಹಿಂದೆ ಬಳ್ಳಾರಿ ಕ್ಷೇತ್ರಕ್ಕೆ ಜೆಡಿಎಸ್ ಮುಸ್ಲಿಂ ಅಭ್ಯರ್ಥಿ ಭಕಾಶ್ ಮುನ್ನ ಎಂಬುವವರಿಗೆ ಟಿಕೆಟ್ ನೀಡಿತ್ತು. ಇದೀಗ ಅಭ್ಯರ್ಥಿಯನ್ನು ಬದಲಾಯಿಸಿ ಬಳ್ಳಾರಿ ಕ್ಷೇತ್ರಕ್ಕೆ ಅನಿಲ್ ಲಾಡ್ ಅವರಿಗೆ ಟಕೆಟ್ ನೀಡಿದೆ.