ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಅಹಿಂದ ಚಳುವಳಿ ರಾಜ್ಯದಲ್ಲಿ ಆರಂಭಿಸಲು ಚಿಂತನೆ ನಡೆಸಿದ ಸಿದ್ದರಾಮಯ್ಯ.

Twitter
Facebook
LinkedIn
WhatsApp
ಅಹಿಂದ ಚಳುವಳಿ ರಾಜ್ಯದಲ್ಲಿ ಆರಂಭಿಸಲು ಚಿಂತನೆ ನಡೆಸಿದ ಸಿದ್ದರಾಮಯ್ಯ.

ಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯನವರು ಕರ್ನಾಟಕದಾದ್ಯಂತ ’ಅಹಿಂದ’ (ಅಲ್ಪಸಂಖ್ಯಾತರು, ಹಿಂದುಳಿದವರು ಮತ್ತು ದಲಿತರು) ಚಳುವಳಿಯನ್ನು ಪ್ರಾರಂಭಿಸಲಿದ್ದಾರೆ ಈ ಕುರಿತು ಪಕ್ಷದ ಕಾರ್ಯಕರ್ತರು ಸ್ಪಷ್ಟನೆ ನೀಡಿದ್ದು, ದಮನಿತ ವರ್ಗಗಳ ನಾಯಕರಾಗಿ ಹೊರಹೊಮ್ಮುವ ಸಾಧ್ಯತೆಗಳು ಸ್ಪಷ್ಟವಾಗಿದೆ ಎಂದು ತಿಳಿಸಿವೆ.
ಮುಂಬರುವ 2021ರ ವಿಧಾನಸಭಾ ಚುನಾವಣೆಗೆ ಮೊದಲು ಈ ಚಳುವಳಿ ಪ್ರಾರಂಭವಾಗಲಿದ್ದು, ಅದಕ್ಕೆ ಮುನ್ನ ಜಾತಿವಾರು ಜನಗಣತಿಯ ವರದಿ ಬಿಡುಗಡೆ ಮಾಡುವಂತೆ ಮಾಜಿ ಸಚಿವ ಹೆಚ್. ಸಿ. ಮಹದೇವಪ್ಪ, ಸಿ.ಎಮ್. ಇಬ್ರಾಹಿಂ ಅವರುಗಳು ಸಿದ್ದರಾಮಯ್ಯನವರನ್ನು ಭೇಟಿಯಾಗಿ ಒತ್ತಾಯಿಸಿದ್ದಾರೆ.
ಜನಗಣತಿ ಸಮಿತಿಯು ತಿರಸ್ಕರಿಸುವ ವರದಿಯಲ್ಲಿ ಮುಸ್ಲಿಂಮರು ಕೆಳವರ್ಗದ ನಂತರ ಕರ್ನಾಟಕದ ಜನಸಂಖ್ಯೆಯ ವಿಷಯದಲ್ಲಿ ಎರಡನೆಯ ಸ್ಥಾನದಲ್ಲಿದ್ದಾರೆ ಎಂದು ಸೂಚಿಸಿತ್ತು.   ಜಾತಿ-ಗಣತಿ ಎಂದು ಕರೆಯಲ್ಪಟ್ಟ ಸಾಮಾಜಿಕ-ಆರ್ಥಿಕ-ಶಿಕ್ಷಣ ಸಮೀಕ್ಷೆಯು ಪೂರ್ಣಗೊಂಡ ನಂತರ ವಿವಾದ ಉಂಟಾಗಿತ್ತು.
ಇದೇ ಜಾತಿ ಗಣತಿಗೆ ರಾಜ್ಯ ಸರ್ಕಾರದ ಬೊಕ್ಕಸದಿಂದ ೧೬೮ ಕೋಟಿ ರೂ. ಖರ್ಚು ಮಾಡಿದ್ದರೂ ಸಹ ಇದರ ಫಲಿತಾಂಶಗಳು ಇಂದಿಗೂ ವಿಧಾನಸಭೆಯಲ್ಲೂ ಪ್ರಸ್ತುತಪಡಿಸದೆ, ಸಾರ್ವಜನಿಕರ ಮುಂದೆ ಗೌಪ್ಯವಾಗಿಯೇ ಇವೆ.
ಈ ಕುರಿತು ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ’ನನ್ನ ಅಧಿಕಾರಾವಧಿಯಲ್ಲಿ ಅಪೂರ್ಣವಾಗಿದ್ದ ಜಾತಿ-ಗಣತಿಯನ್ನು ನಂತರದ ಮುಖ್ಯಮಂತ್ರಿಗಳಾದರೂ ಬಿಡುಗಡೆಗೊಳಿಸಬಹುದಿತ್ತು’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಜನಗಣತಿಯು ಜನಸಮುದಾಯಗಳ ಸ್ಥಿತಿಗತಿಯ ಕುರಿತು ಸ್ಪಷ್ಟ ಮಾಹಿತಿ ಹೊಂದಿದ್ದು, ಈಗಾಗಲೇ ಅತ್ಯಂತ ಹಿಂದುಳಿದ ಜಾತಿಗಳ ಜಾಗೃತಿ ವೇದಿಕೆಯ ಪದಾಧಿಕಾರಿಗಳು ನನ್ನನ್ನು ಭೇಟಿ ಮಾಡಿದಾಗ ನ್ಯಾಯಾಲಕ್ಕೆ ತೆರಳಲು ಸಲಹೆ ನೀಡಿರುವುದಾಗಿ ಸಹ ಅವರು ತಿಳಿಸಿದ್ದಾರೆ. ಜಾತಿ ಗಣತಿಯಲ್ಲಿ ಪರಿಶಿಷ್ಠ ಜಾತಿಗಳು/ ಪಂಗಡಗಳು ಮತ್ತು ಇತರೆ ಹಿಂದುಳಿದ ವರ್ಗಗಳ ಜನಸಂಖ್ಯೆ ಕರ್ನಾಟಕ ಪ್ರಬಲ ಲಿಂಗಾಯತ, ಒಕ್ಕಲಿಗ ಜಾತಿಗಳಿಗಿಂತ ಹೆಚ್ಚು ಇದೆ ಎಂದು ಸೂಚಿಸುತ್ತಿದೆ ಎನ್ನಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು