ಶುಕ್ರವಾರ, ಮೇ 3, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆಪ್ ಸ್ಟೋರ್‌ನಿಂದ ಟ್ವಿಟ್ಟರ್ ಅನ್ನು ತೆಗೆಯೋದಾಗಿ ಆಪಲ್ ಬೆದರಿಕೆ ಹಾಕಿದೆ: ಮಸ್ಕ್

Twitter
Facebook
LinkedIn
WhatsApp
ಆಪ್ ಸ್ಟೋರ್‌ನಿಂದ ಟ್ವಿಟ್ಟರ್ ಅನ್ನು ತೆಗೆಯೋದಾಗಿ ಆಪಲ್ ಬೆದರಿಕೆ ಹಾಕಿದೆ: ಮಸ್ಕ್

ವಾಷಿಂಗ್ಟನ್: ಆಪಲ್ (Apple) ತನ್ನ ಆಪ್ ಸ್ಟೋರ್‌ನಿಂದ (App Store) ಟ್ವಿಟ್ಟರ್ (Twitter) ಅನ್ನು ನಿರ್ಬಂಧಿಸುವುದಾಗಿ ಬೆದರಿಕೆ ಹಾಕಿದೆ. ಆದರೆ ನಿರ್ಬಂಧ ಹೇರಲು ಕಾರಣವೇನು ಎಂಬುದನ್ನೇ ತಿಳಿಸಿಲ್ಲ ಎಂದು ಟ್ವಿಟ್ಟರ್ ಸಿಇಒ ಎಲೋನ್ ಮಸ್ಕ್ (Elon Musk) ಆರೋಪಿಸಿದ್ದಾರೆ.

 

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಮಸ್ಕ್, ಆಪಲ್ ಕಂಪನಿ ಈಗಾಗಲೇ ತನ್ನ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ನಮ್ಮ ಜಾಹೀರಾತು ನೀಡುವುದನ್ನು ನಿಲ್ಲಿಸಿದೆ. ಇದೀಗ ಆಪ್ ಸ್ಟೋರ್‌ನಿಂದ ಟ್ವಿಟ್ಟರ್ ಅನ್ನು ತೆಗೆದುಹಾಕುವುದಾಗಿ ಬೆದರಿಕೆ ಒಡ್ಡಿದೆ ಎಂದು ತಿಳಿಸಿದ್ದಾರೆ.

ಮಸ್ಕ್ ಇತ್ತೀಚೆಗೆ ಟ್ವಿಟ್ಟರ್‌ನಲ್ಲಿ ಮಾಡಲು ಮುಂದಾಗಿರುವ ಹೊಸ ಬದಲಾವಣೆಗಳ ಕುರಿತು ತಿಳಿಸಿದ್ದಾರೆ. ಟ್ವಿಟ್ಟರ್ ಬಳಕೆದಾರರಿಗೆ ವಾಕ್ ಸ್ವಾತಂತ್ರ್ಯವನ್ನು ಹೆಚ್ಚಿಸಲು ಅನುವುಮಾಡಿಕೊಡುವ ಭರವಸೆ ನೀಡಿದ್ದಾರೆ. ಇದು ಶೀಘ್ರದಲ್ಲೇ ಪ್ರಕಟಗೊಳ್ಳಲಿದೆ. ಜನರು ನೈಜ ವಿಷಯಗಳನ್ನು ತಿಳಿಬೇಕು ಎಂಬುದೇ ಇದರ ಉದ್ದೇಶ ಎಂದಿದ್ದಾರೆ. 

 

ಮಸ್ಕ್ ಇದೀಗ ಆಪಲ್ ಬೆದರಿಕೆಯ ಬಗ್ಗೆ ತಿಳಿಸಿದ್ದು, ಅವರು ಟ್ವಿಟ್ಟರ್ ಆಪ್‌ನ ಮಾಡರೇಶನ್ ಬೇಡಿಕೆಗಳಿಂದಾಗಿ ಟ್ವಿಟ್ಟರ್ ಮೇಲೆ ಒತ್ತಡ ಹೇರುತ್ತಿದೆ. ಆಪಲ್ ತನ್ನ ಗ್ರಾಹಕರ ಮೇಲೆ ಪರಿಣಾಮ ಬೀರುವ ಎಲ್ಲಾ ಸೆನ್ಸಾರ್‌ಶಿಪ್ ಕ್ರಮಗಳನ್ನು ಪ್ರಕಟಿಸಬೇಕು ಎಂದು ಆಗ್ರಹಿಸಿದ್ದಾರೆ.

ಆಪಲ್ ಈ ಹಿಂದೆಯೂ ಗ್ಯಾಬ್ ಹಾಗೂ ಪಾರ್ಲರ್‌ನಂತಹ ಅಪ್ಲಿಕೇಶನ್‌ಗಳನ್ನು ಯಾವುದೇ ದೃಢೀಕರಣ ನೀಡದೇ ತೆಗೆದುಹಾಕಿತ್ತು. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ