ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆಫ್ಘನ್ ಮಾಜಿ ಪ್ರಧಾನಿ ಕಟ್ಟಡದ ಮೇಲೆ ದಾಳಿ – ಗುಲ್ಬುದ್ದೀನ್‌ ಗ್ರೇಟ್‌ ಎಸ್ಕೇಪ್, ಒಬ್ಬ ಸಾವು

Twitter
Facebook
LinkedIn
WhatsApp
ಆಫ್ಘನ್ ಮಾಜಿ ಪ್ರಧಾನಿ ಕಟ್ಟಡದ ಮೇಲೆ ದಾಳಿ – ಗುಲ್ಬುದ್ದೀನ್‌ ಗ್ರೇಟ್‌ ಎಸ್ಕೇಪ್, ಒಬ್ಬ ಸಾವು

ಕಾಬೂಲ್‌: ಅಫ್ಘಾನಿಸ್ತಾನದ (Afghanistan) ಮಾಜಿ ಪ್ರಧಾನಿ ಗುಲ್ಬುದ್ದೀನ್ ಹೆಕ್ಮತ್ಯಾರ್ (Gulbuddin Hekmatyar) ಕಟ್ಟಡದ ಮೇಲೆ ದಾಳಿ ನಡೆಸಲಾಗಿದ್ದು, ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆ. ದಾಳಿಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ.

ಹೆಕ್ಮತ್ಯಾರ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. ಶುಕ್ರವಾರದ ಪ್ರಾರ್ಥನೆಗಾಗಿ ಹೆಕ್ಮತ್ಯಾರ್ ಮತ್ತು ಅವರ ಬೆಂಬಲಿಗರು ಹೋಗಿದ್ದ ಮಸೀದಿಯೊಂದಕ್ಕೆ ಪ್ರವೇಶಿಸಲು ಯತ್ನಿಸಿದ ಇಬ್ಬರು ದಾಳಿಕೋರರನ್ನು ಭದ್ರತಾ ಸಿಬ್ಬಂದಿ ಕೊಂದಿದ್ದಾರೆ ಎಂದು ಅಲ್ ಜಜೀರಾ ಹೇಳಿಕೆಯಲ್ಲಿ ತಿಳಿಸಿದೆ. 

ಕಾಬೂಲ್‌ನ ದಾರುಲಾಮನ್ ಪ್ರದೇಶದಲ್ಲಿ ಹಿಜ್ಬ್-ಎ-ಇಸ್ಲಾಮಿ ಪಕ್ಷದ ಹೆಕ್ಮತ್ಯಾರ್ ಕಟ್ಟಡದ ಮೇಲೆ ದಾಳಿ ನಡೆದಿದೆ. ದಾಳಿಕೋರರು ಮಹಿಳಾ ಬುರ್ಕಾಗಳನ್ನು ಧರಿಸಿ ಬಂದ ಆತ್ಮಹತ್ಯಾ ಬಾಂಬರ್‌ಗಳಾಗಿದ್ದರು. ಮಾಜಿ ಪ್ರಧಾನಿಯನ್ನು ಹತ್ಯೆ ಮಾಡುವ ಉದ್ದೇಶ ಹೊಂದಿದ್ದರು ಎಂದು ಅಲ್ ಜಜೀರಾ ವರದಿ ಮಾಡಿದೆ.

“ನನ್ನ ದೇಶವಾಸಿಗಳಿಗೆ ನಾನು ಭರವಸೆ ನೀಡುತ್ತೇನೆ. ನನಗೆ ಏನೂ ಆಗಿಲ್ಲ. ಅವರು ವಿಫಲ ಪ್ರಯತ್ನ ಮಾಡಿದ್ದಾರೆ” ಎಂದು ಹೆಕ್ಮತ್ಯಾರ್ ತಮ್ಮ ಹತ್ಯೆ ಸಂಚು ಕುರಿತು ಪ್ರತಿಕ್ರಿಯಿಸಿದ್ದಾರೆ. ಕಾಬೂಲ್‌ನಲ್ಲಿ ನಡೆದ ದಾಳಿಯ ಹೊಣೆಯನ್ನು ಯಾರೂ ಹೊತ್ತುಕೊಂಡಿಲ್ಲ.

ಕಳೆದ ವರ್ಷ ತಾಲಿಬಾನ್ ಅಫ್ಘಾನಿಸ್ತಾನದಲ್ಲಿ ಅಧಿಕಾರ ವಹಿಸಿಕೊಂಡ ನಂತರ ಅಶ್ರಫ್‌ ಘನಿ ಮತ್ತು ಇತರ ಮಾಜಿ ನಾಯಕರು ಪಲಾಯನವಾಗಿದ್ದರು. ಆದರೆ ಹೆಕ್ಮತ್ಯಾರ್ ಮಾತ್ರ ಕಾಬೂಲ್‌ನಲ್ಲಿಯೇ ಇದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ