ಶನಿವಾರ, ಮಾರ್ಚ್ 15, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಆರೋಗ್ಯಕರ ಆಹಾರ ಪದಾರ್ಥಗಳ ಕೇಂದ್ರ ತಾಣವಾಗಿದೆ ಭಾರತ : ಕೇಂದ್ರ ಕೃಷಿ ಸಚಿವ

Twitter
Facebook
LinkedIn
WhatsApp
ಆರೋಗ್ಯಕರ ಆಹಾರ ಪದಾರ್ಥಗಳ ಕೇಂದ್ರ ತಾಣವಾಗಿದೆ ಭಾರತ : ಕೇಂದ್ರ ಕೃಷಿ ಸಚಿವ

ನವದೆಹಲಿ: ಜನರ ಆಹಾರದಲ್ಲಿ ಸಿರಿಧಾನ್ಯ, ಇತರ ಪೌಷ್ಟಿಕ ಧಾನ್ಯಗಳು, ಹಣ್ಣುಗಳು ಮತ್ತು ತರಕಾರಿಗಳು, ಮೀನು, ಡೈರಿ ಮತ್ತು ಸಾವಯವ ಉತ್ಪನ್ನಗಳು ಸೇರಿದಂತೆ ಸಾಂಪ್ರದಾಯಿಕ ಆಹಾರ ಪದಾರ್ಥಗಳನ್ನು ಮರು ಪರಿಚಯಿಸಲು ಸರ್ಕಾರ ಒತ್ತು ನೀಡಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.
ಇತ್ತೀಚಿನ ವರ್ಷಗಳಲ್ಲಿ ಭಾರತದಲ್ಲಿ ಅವುಗಳ ಉತ್ಪಾದನೆಯು ಅಸಾಧಾರಣ ಮಟ್ಟದಲ್ಲಿ ಇದೆ ಮತ್ತು ಆರೋಗ್ಯಕರ ಆಹಾರ ಪದಾರ್ಥಗಳಿಗೆ ಭಾರತವು ಕೇಂದ್ರ ತಾಣವಾಗುತ್ತಿದೆ ಎಂದು ಅವರು ಹೇಳಿದರು.
ಜಿ -20 ಕೃಷಿ ಮಂತ್ರಿಗಳ ಸಭೆಯ ಎರಡನೇ ದಿನದ ಅಧಿವೇಶನದಲ್ಲಿ ಅವರು ಮಾತನಾಡುತ್ತಿದ್ದರು. ಈ ಅಧಿವೇಶನದ ಥೀಮ್ “ಶೂನ್ಯ ಹಸಿವಿನ ಗುರಿಯನ್ನು ಸಾಧಿಸಲು ಒಟ್ಟಾಗಿ ಕೆಲಸ ಮಾಡುವುದು: ಕೃಷಿ ಸಚಿವಾಲಯಗಳು ಜಾರಿಗೊಳಿಸಿದ ಯಶಸ್ವಿ ಯೋಜನೆಗಳು” ಎಂಬುದಾಗಿದೆ.
ವರ್ಚುವಲ್ ಭಾಷಣದಲ್ಲಿ ಮಾತನಾಡಿದ ತೋಮರ್, ಪೌಷ್ಟಿಕಾಂಶಯುಕ್ತ-ಸಿರಿಧಾನ್ಯಗಳ ಪ್ರಾಮುಖ್ಯತೆಯನ್ನು ಗಮನದಲ್ಲಿಟ್ಟುಕೊಂಡು, ವಿಶ್ವಸಂಸ್ಥೆಯು ಸರ್ಕಾರದ ಪ್ರಸ್ತಾವನೆಯನ್ನು ಒಪ್ಪಿಕೊಂಡಿದೆ ಮತ್ತು 2023 ನೇ ವರ್ಷವನ್ನು ಅಂತರಾಷ್ಟ್ರೀಯ ಸಿರಿಧಾನ್ಯ ವರ್ಷವೆಂದು ಘೋಷಿಸಿದೆ ಎಂದು ಹೇಳಿದ್ದಾರೆ.

ಪೌಷ್ಟಿಕಾಂಶ ಮತ್ತು ಸುಸ್ಥಿರ ಕೃಷಿಯನ್ನು ಉತ್ತೇಜಿಸಲು ಸಿರಿಧಾನ್ಯ ವರ್ಷದ ಆಚರಣೆಯನ್ನು ಬೆಂಬಲಿಸುವಂತೆ ಅವರು ರಾಷ್ಟ್ರಗಳಿಗೆ ಮನವಿ ಮಾಡಿದರು.
ಸ್ವಾತಂತ್ರ್ಯದ ನಂತರ ಭಾರತದಲ್ಲಿ ಕೃಷಿ ಕ್ಷೇತ್ರವು ಉತ್ತಮ ಯಶಸ್ಸನ್ನು ಸಾಧಿಸಿದೆ ಎಂದು ತೋಮರ್ ಹೇಳಿದ್ದಾರೆ. ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿಯೂ ಭಾರತೀಯ ಕೃಷಿ ಕ್ಷೇತ್ರವು ಯಾವುದೇ ಪರಿಣಾಮ ಎದುರಿಸಲಿಲ್ಲ ಎಂದಿದ್ದಾರೆ.
ಕೋವಿಡ್ ಸಮಯದಲ್ಲಿ ಕೃಷಿ-ಮಾರುಕಟ್ಟೆ ಪೂರೈಕೆ ಸರಪಳಿಯೊಂದಿಗೆ ಕೃಷಿ ಮಾರುಕಟ್ಟೆಯನ್ನು ಕ್ರಿಯಾತ್ಮಕವಾಗಿರಿಸಲು ಸರ್ಕಾರದ ವಿವಿಧ ಉಪಕ್ರಮಗಳು ಕೃಷಿ ಕ್ಷೇತ್ರವನ್ನು ಉತ್ತಮ ಕಾರ್ಯಕ್ಷಮತೆಗೆ ಸಹಾಯ ಮಾಡಿರುವುದಕ್ಕೆ ಸಚಿವರು ಸಂತಸ ವ್ಯಕ್ತಪಡಿಸಿದರು.
2020-2021 ರ ಅವಧಿಯಲ್ಲಿ, ಆಹಾರ ಧಾನ್ಯಗಳ ಉತ್ಪಾದನೆಯ ಹೆಚ್ಚಳದೊಂದಿಗೆ, ರಫ್ತುಗಳಲ್ಲಿ ಗಮನಾರ್ಹ ಹೆಚ್ಚಳ ಕಂಡುಬಂದಿದೆ ಎಂದಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು