ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಆರ್ ಎಸ್ ಎಸ್ ನವರು ಆರ್ಯರಾ ಅಥವಾ ದ್ರಾವಿಡರಾ? ಮೂಲ ಕೆದಕಿದ ಸಿದ್ದರಾಮಯ್ಯ

Twitter
Facebook
LinkedIn
WhatsApp
ಆರ್ ಎಸ್ ಎಸ್ ನವರು ಆರ್ಯರಾ ಅಥವಾ ದ್ರಾವಿಡರಾ? ಮೂಲ ಕೆದಕಿದ ಸಿದ್ದರಾಮಯ್ಯ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಶುಕ್ರವಾರ ಆರ್ ಎಸ್ ಎಸ್ ನವರು ಆರ್ಯರಾ ಅಥವಾ ದ್ರಾವಿಡರಾ? ಎಂದು ಕೇಳುವ ಮೂಲಕ ಆರ್ ಎಸ್ ಎಸ್ ಮೂಲವನ್ನು ಕೆದಕಿದ್ದಾರೆ. ಮೊಘಲರು, ಬ್ರಿಟಿಷರ ಆಕ್ರಮಣ ಮತ್ತು ಅವರ ಆಳ್ವಿಕೆಗೆ ಭಾರತೀಯ ಸಮಾಜದೊಳಗಿನ ಏಕತೆಯ ಕೊರತೆಯನ್ನು ಸಿದ್ದರಾಮಯ್ಯ ದೂಷಿಸಿದ್ದಾರೆ. ಸಿದ್ದರಾಮಯ್ಯ ಅವರ ಹೇಳಿಕೆಗೆ ಬಿಜೆಪಿಯ ಅನೇಕ ಮುಖಂಡರು ತೀಕ್ಷ್ಮ ಪ್ರತಿಕ್ರಿಯೆ ನೀಡಿದ್ದಾರೆ.

 

ಶಾಲಾ ಪಠ್ಯಪುಸ್ತಕಗಳಲ್ಲಿ ಆರ್ ಎಸ್ ಎಸ್ ಸಂಸ್ಥಾಪಕ ಕೇಶವ ಬಲಿರಾಮ್ ಹೆಡ್ಗೆವಾರ್ ಪಾಠ ಕುರಿತು ಉಂಟಾಗಿರುವ ವಿವಾದ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, ಈ ಆರ್‌ಎಸ್‌ಎಸ್‌ನವರು ಸ್ಥಳೀಯ ಭಾರತೀಯರೇ? ಅನಗತ್ಯವಾಗಿ, ನಾವು ಅದರ ಬಗ್ಗೆ ಚರ್ಚಿಸಲು ಬಯಸುವುದಿಲ್ಲ. ಆರ್ಯರು ಈ ದೇಶದವರೇ? ಅವರು ದ್ರಾವಿಡರೇ? ನಾವು ಅವರ ಮೂಲಕ್ಕೆ ಹೋಗಬೇಕಾಗುತ್ತದೆ ಎಂದರು.

ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರು ಅವರ ಪುಣ್ಯ ಸ್ಮರಣೆ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಮೂಘಲರು 600 ವರ್ಷಗಳ ಕಾಲ ದೇಶವನ್ನಾಳಲು ಯಾರು ಹೊಣೆ ಎಂದು ಪ್ರಶ್ನಿಸಿದರು. ಒಂದು ವೇಳೆ ನಿವೆಲ್ಲರೂ ಒಗ್ಗಟ್ಟಾಗಿದ್ದರೆ ಮೂಘಲರು ಏಕೆ ಬರುತ್ತಿದ್ದರು, ಅವರಿಗೆ ಜಾಗ ನೀಡಿದವರು ಯಾರು? ಬ್ರಿಟಿಷರು 200 ವರ್ಷಗಳ ಕಾಲ ದೇಶವನ್ನಾಳಲು ಕಾರಣರಾದವರು ಯಾರು? ಇದರ ಬಗ್ಗೆ ಹೆಚ್ಚಿನ ಹೆಚ್ಚು ಮಾತನಾಡಲು ಹೋಗಲ್ಲ ಎಂದು ಅವರು ಹೇಳಿದರು.

 

ಸಿದ್ದರಾಮಯ್ಯ ಅವರೊಂದಿಗೆ ವೇದಿಕೆಯಲ್ಲಿದ್ದ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತಿತರ ಕಾಂಗ್ರೆಸ್ ಮುಖಂಡರು ಸಿದ್ದರಾಮಯ್ಯ ಅವರ ಹೇಳಿಕೆಗೆ ಬೆಂಬಲಿಸಿದರು. ಸಿದ್ದರಾಮಯ್ಯ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ವಿಪಕ್ಷ ನಾಯಕರಿಗೆ ವಾಸ್ತವಾಂಶ ತಿಳಿದಿಲ್ಲ ಅಥವಾ ರಾಹುಲ್ ಗಾಂಧಿ ಅವರನ್ನು ಮೆಚ್ಚಿಸಲು, ಮುಸ್ಲಿಂರನ್ನು ಸಮಾಧಾನಪಡಿಸಲು ನಾಟಕವಾಡುತ್ತಿದ್ದಾರೆ ಎಂದಿದ್ದಾರೆ.

ಹೆಡ್ಗೆವಾರ್ ಆರಂಭದಲ್ಲಿ ಕಾಂಗ್ರೆಸ್‌ನಲ್ಲಿದ್ದರು ಮತ್ತು ಅದರ ಸೇವಾದಳದ ಮುಖ್ಯಸ್ಥರಾಗಿದ್ದರು. ಸ್ವಾತಂತ್ರ್ಯ ಹೋರಾಟಕ್ಕೆ ಅವರು ನೀಡಿದ ಕೊಡುಗೆ ಮತ್ತು ಕ್ರಾಂತಿಕಾರಿಗಳಿಗೆ ನೀಡಿದ ಬೆಂಬಲದ ಬಗ್ಗೆ ಹಲವು ಕಾಂಗ್ರೆಸ್ ಮುಖಂಡರು ಬರೆದಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ಸೈದ್ಧಾಂತಿಕ ಭಿನ್ನಾಭಿಪ್ರಾಯ ಹೊಂದಿರಬಹುದು, ಆದರೆ ಹೆಡ್ಗೆವಾರ್ ಅವರು ನಿಜವಾದ ದೇಶಭಕ್ತರಾಗಿದ್ದರು ಮತ್ತು ಅವರು ಭಾರತದಲ್ಲಿ ಆರ್ ಎಸ್ ಎಸ್ ಸ್ಥಾಪಕರು ಎಂದು ಜೋಶಿ ಹೇಳಿದರು.

ಸಿದ್ದರಾಮಯ್ಯ ಅವರು ಭಾರತ ಮತ್ತು ಭಾರತೀಯತೆಯನ್ನು ಮೆಕಾಲೆ ದೃಷ್ಟಿಕೋನದಿಂದ ನೋಡುತ್ತಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರೆ. ಆರ್ ಎಸ್ ಎಸ್ ನವರ ಬಗ್ಗೆ ಮಾತನಾಡಿರುವ ಸಿದ್ದರಾಮಯ್ಯ ದೇಶದ ಜನರ ಕ್ಷಮೆಯಾಚಿಸಬೇಕೆಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಒತ್ತಾಯಿಸಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist