ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?

Twitter
Facebook
LinkedIn
WhatsApp
ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?

ಐಪಿಎಲ್ 2024 ರಲ್ಲಿ ಸತತ ಐದು ಗೆಲುವುಗಳನ್ನು ದಾಖಲಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪ್ಲೇ ಆಫ್‌ನಲ್ಲಿ ನಾಲ್ಕನೇ ತಂಡವನ್ನು ನಿರ್ಧರಿಸಲು ಶನಿವಾರ ಚೆನ್ನೈ ಸೂಪರ್ ಕಿಂಗ್ಸ್ (RCB vs CSK) ಅನ್ನು ಎದುರಿಸಲಿದೆ. ಹೈದರಾಬಾದ್‌ನಲ್ಲಿ ಸನ್‌ರೈಸರ್ಸ್ ಮತ್ತು ಗುಜರಾತ್ ನಡುವಿನ ಪಂದ್ಯವು ಮಳೆಯಿಂದಾಗಿ ರದ್ದಾಗಿದ್ದರಿಂದ, ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಂತರ ಸನ್‌ರೈಸರ್ಸ್ ಕೂಡ ಪ್ಲೇ ಆಫ್ ತಲುಪಿತು. ಈಗ ಕೇವಲ ಒಂದು ಸ್ಥಾನಕ್ಕಾಗಿ ಹಗ್ಗ ಜಗ್ಗಾಟ ನಡೆಯುತ್ತಿದ್ದು, ಸಿಎಸ್​ಕೆ ಮತ್ತು ಆರ್​ಸಿಬಿ ಎರಡು ತಂಡಗಳು ರೇಸ್‌ನಲ್ಲಿವೆ. ಈ ಪಂದ್ಯ ಇಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ಆರ್​ಸಿಬಿ ಪರ ಆರೆಂಜ್ ಕ್ಯಾಪ್ ಹೊಂದಿರುವ ವಿರಾಟ್ ಕೊಹ್ಲಿ ಉತ್ತಮ ಫಾರ್ಮ್‌ನಲ್ಲಿದ್ದಾರೆ ಮತ್ತು ಕಳೆದ ಐದು ಪಂದ್ಯಗಳಲ್ಲಿ ಮೂರರಲ್ಲಿ ಅರ್ಧಶತಕ ಗಳಿಸಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ರಜತ್ ಪಾಟಿದಾರ್ ಮತ್ತು ಕ್ಯಾಮೆರಾನ್ ಗ್ರೀನ್ ಉತ್ತಮವಾಗಿ ಆಡುತ್ತಿದ್ದಾರೆ. ಇಂದಿನ ಪ್ರಮುಖ ಪಂದ್ಯದಲ್ಲಿ ನಾಯಕ ಫಾಫ್ ಡುಪ್ಲೆಸಿಸ್ ಕಡೆಯಿಂದ ಒಂದೊಳ್ಳೆ ಇನ್ನಿಂಗ್ಸ್ ಬರಬೇಕಿದೆ. ಈ ಋತುವಿನಲ್ಲಿ ಚೆನ್ನೈ ಪರ ಅತಿ ಹೆಚ್ಚು ರನ್ ಗಳಿಸಿದವರು ನಾಯಕ ರುತುರಾಜ್ ಗಾಯಕ್ವಾಡ್. ಓಪನರ್ ರಚಿನ್ ರವೀಂದ್ರ ಕೂಡ ಉಪಯುಕ್ತ ಇನ್ನಿಂಗ್ಸ್ ಆಡಿದ್ದಾರೆ. ಕಳೆದ ನಾಲ್ಕು ಇನ್ನಿಂಗ್ಸ್‌ಗಳಲ್ಲಿ ವಿಫಲವಾಗಿರುವ ಶಿವಂ ದುಬೆ ಕೂಡ ಉತ್ತಮ ಪ್ರದರ್ಶನ ನೀಡುವ ನಿರೀಕ್ಷೆಯಿದೆ.

ಈ ಋತುವಿನಲ್ಲಿ ಆರ್​ಸಿಬಿ ಬೌಲರ್‌ಗಳ ಪೈಕಿ ಯಶ್ ದಯಾಲ್ ಅತಿ ಹೆಚ್ಚು ವಿಕೆಟ್ ಪಡೆದಿದ್ದಾರೆ. ಲಾಕಿ ಫರ್ಗುಸನ್, ಮೊಹಮ್ಮದ್ ಸಿರಾಜ್ ಮತ್ತು ಸ್ವಪ್ನಿಲ್ ಸಿಂಗ್ ಅವರಿಗೆ ಕಠಿಣ ಸವಾಲು ಎದುರಾಗಿದೆ. ಸಿಎಸ್​ಕೆ ಬೌಲಿಂಗ್​ನಲ್ಲಿ ವೇಗಿಗಳಾದ ಸಿಮರ್ಜೀತ್ ಸಿಂಗ್ ಮತ್ತು ತುಷಾರ್ ದೇಶಪಾಂಡೆ ಉತ್ತಮ ಪ್ರದರ್ಶನ ನೀಡಿದ್ದಾರೆ. ರವೀಂದ್ರ ಜಡೇಜಾ ಸ್ಪಿನ್ ಜಾದು ಎದುರಾಳಿಗೆ ಕಂಟಕವಾಗಿ ಪರಿಣಮಿಸಿದೆ.

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಲೀಗ್‌ನ ಮೊದಲ 4 ಪಂದ್ಯಗಳಲ್ಲಿ ರನ್ ಮಳೆ ಸುರಿದಿವೆ. ಇಲ್ಲಿ ಹೈದರಾಬಾದ್ 287 ರನ್ ಗಳಿಸಿತ್ತು. ಆದರೆ ಕಳೆದ ಎರಡು ಪಂದ್ಯಗಳಿಂದ ಬೌಲರ್‌ಗಳಿಗೆ ಪಿಚ್ ಸಹಾಯಕವಾಗಿದೆ. ಇದರಿಂದ ಆರ್‌ಸಿಬಿಗೂ ಲಾಭವಾಗಿದೆ. ಈಗ ಚೆನ್ನೈ ವಿರುದ್ಧದ ಪಂದ್ಯದಲ್ಲೂ ಬೌಲರ್‌ಗಳಿಗೆ ಪಿಚ್ ಸಹಕಾರಿಯಾಗಲಿದೆ. ಚೆನ್ನೈ ತಂಡದ ಬ್ಯಾಟಿಂಗ್ ಕ್ರಮಾಂಕ ಬಲಿಷ್ಠವಾಗಿದ್ದು, ವಿಕೆಟ್ ಪಡೆದರೆ ಬೆಂಗಳೂರು ತಂಡಕ್ಕೆ ಲಾಭವಾಗಬಹುದು

ಆದರೆ, ಭಾರತೀಯ ಹವಾಮಾನ ಇಲಾಖೆಯ ಪ್ರಕಾರ ಬೆಂಗಳೂರು ನಗರದಲ್ಲಿ ಕಳೆದ ಎರಡು ವಾರಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ. IMD ಹೊರತುಪಡಿಸಿ, Accuweather.com ಪಂದ್ಯದ ಸಮಯದಲ್ಲಿ ಭಾರೀ ಮಳೆ ಮತ್ತು ಚಂಡಮಾರುತದ ಸಾಧ್ಯತೆಯನ್ನು ವ್ಯಕ್ತಪಡಿಸಿದೆ. ರಾತ್ರಿ 7.30ಕ್ಕೆ ಪಂದ್ಯ ಆರಂಭವಾಗುವ ವೇಳೆ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಆಕಾಶದಲ್ಲಿ ಶೇ. 100ರಷ್ಟು ಮೋಡ ಕವಿದ ವಾತಾವರಣವಿರುತ್ತದೆ.

ಉಭಯ ತಂಡಗಳ ಸಂಭಾವ್ಯ 11

ಆರ್​ಸಿಬಿ- ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಯಶ್ ದಯಾಲ್, ಮೊಹಮ್ಮದ್ ಸಿರಾಜ್, ಸ್ವಪ್ನಿಲ್ ಸಿಂಗ್ .

ಸಿಎಸ್​ಕೆ- ರಚಿನ್ ರವೀಂದ್ರ, ರುತುರಾಜ್ ಗಾಯಕ್ವಾಡ್ (ನಾಯಕ), ಡೆರಿಲ್ ಮಿಚೆಲ್, ಶಿವಂ ದುಬೆ, ಸಮೀರ್ ರಿಜ್ವಿ, ರವೀಂದ್ರ ಜಡೇಜಾ, ಎಂಎಸ್ ಧೋನಿ (ವಿಕೆಟ್ ಕೀಪರ್), ಮಿಚೆಲ್ ಸ್ಯಾಂಟ್ನರ್, ಶಾರ್ದೂಲ್ ಠಾಕೂರ್, ತುಷಾರ್ ದೇಶಪಾಂಡೆ, ಸಿಮರ್ಜೀತ್ ಸಿಂಗ್.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist