ಶನಿವಾರ, ಮೇ 11, 2024
ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!-ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಇಂದು ಭಾರತ-ಇಂಗ್ಲೆಂಡ್ 2ನೇ ಏಕದಿನ – ಸರಣಿ ಗೆಲ್ಲುವ ತವಕದಲ್ಲಿ ಟೀಂ ಇಂಡಿಯಾ

Twitter
Facebook
LinkedIn
WhatsApp
ಇಂದು ಭಾರತ-ಇಂಗ್ಲೆಂಡ್ 2ನೇ ಏಕದಿನ – ಸರಣಿ ಗೆಲ್ಲುವ ತವಕದಲ್ಲಿ ಟೀಂ ಇಂಡಿಯಾ

ಲಂಡನ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಏಕದಿನ ಸರಣಿಯ 2ನೇ ಪಂದ್ಯ ಗೆದ್ದು ಸರಣಿ ಕೈವಶ ಮಾಡಿಕೊಳ್ಳುವ ತವಕದಲ್ಲಿ ಟೀಂ ಇಂಡಿಯಾ ಕಾತರವಾಗಿದೆ.

ಲಂಡನ್‌ನ ಓವೆಲ್ ಮೈದಾನದಲ್ಲಿ ನಡೆದ ಮೊದಲ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ 110 ರನ್ ಗಳಿಸಿ ಹೀನಾಯ ಸೋಲು ಕಂಡಿದ್ದ ಇಂಗ್ಲೆಂಡ್ ಇಂದು 2ನೇ ಪಂದ್ಯದಲ್ಲಿ ಭಾರತದ ವಿರುದ್ಧ ಸೆಣಸಲಿದೆ. ಲಂಡನ್‌ನ ಲಾರ್ಡ್ಸ್ ಅಂಗಳದಲ್ಲಿ ಸಂಜೆ 5.30ಕ್ಕೆ ನಡೆಯಲಿರುವ 2ನೇ ಏಕದಿನ ಪಂದ್ಯದಲ್ಲಿ ಗೆಲ್ಲುವ ಗುರಿ ಹೊಂದಿದ್ದು, ಬೌಲಿಂಗ್ ಕ್ರಮವನ್ನು ಮತ್ತಷ್ಟು ಬಿಗಿಗೊಳಿಸಿದೆ. 

ಇಂದು ಭಾರತ-ಇಂಗ್ಲೆಂಡ್ 2ನೇ ಏಕದಿನ – ಸರಣಿ ಗೆಲ್ಲುವ ತವಕದಲ್ಲಿ ಟೀಂ ಇಂಡಿಯಾ

ಟಿ20 ಸರಣಿಯಲ್ಲಿ ಪ್ರಾಬಲ್ಯ ಮೆರೆದಿದ್ದ ಭಾರತ, ಮೊದಲ ಏಕದಿನದಲ್ಲಿ ಆಂಗ್ಲರನ್ನು ಮಣ್ಣುಮುಕ್ಕಿಸಿತ್ತು. ಆತ್ಮವಿಶ್ವಾಸದ ಅಲೆಯಲ್ಲಿ ತೇಲುತ್ತಿರುವ ಟೀಂ ಇಂಡಿಯಾ ತನ್ನ ಲಯ ಮುಂದುವರಿಸಲು ಎದುರು ನೋಡುತ್ತಿದ್ದರೆ, ಇಂಗ್ಲೆಂಡ್ ಸಮಬಲ ಸಾಧಿಸಿ ಮುಖಭಂಗ ತಪ್ಪಿಸಿಕೊಳ್ಳುವ ಕಾತರದಲ್ಲಿದೆ.

ನಂ.1 ಸ್ಥಾನಕ್ಕೆ ಮರಳಿರುವ ಬುಮ್ರಾ ಮತ್ತೊಮ್ಮೆ ಭಾರತದ ಬೌಲಿಂಗ್ ಪಡೆಯನ್ನು ಮುನ್ನಡೆಸಲಿದ್ದು, ಮೊಹಮದ್ ಶಮಿ, ಪ್ರಸಿದ್ಧ್ ಕೃಷ್ಣ ಬೆಂಬಲಿಸಲಿದ್ದಾರೆ. ಹಾರ್ದಿಕ್ ಪಾಂಡ್ಯ, ಯಜುವೇಂದ್ರ ಚಹಲ್, ರವೀಂದ್ರ ಜಡೇಜಾ ಸ್ಥಾನ ಉಳಿಸಿಕೊಳ್ಳುವುದು ಖಚಿತವಾಗಿದೆ. 

ಇಂದು ಭಾರತ-ಇಂಗ್ಲೆಂಡ್ 2ನೇ ಏಕದಿನ – ಸರಣಿ ಗೆಲ್ಲುವ ತವಕದಲ್ಲಿ ಟೀಂ ಇಂಡಿಯಾ

ರೋಹಿತ್ ಅಬ್ಬರದ ಫಾರ್ಮ್ ಭಾರತಕ್ಕೆ ಮತ್ತಷ್ಟು ಬಲ ತುಂಬಿದ್ದು, ಶಿಖರ್ ಧವನ್ ಸಹ ಭರವಸೆ ಮೂಡಿಸಿದ್ದಾರೆ. ವಿರಾಟ್ ಕೊಹ್ಲಿ ಈ ಪಂದ್ಯಕ್ಕೂ ಅಲಭ್ಯರಾಗಲಿದ್ದು, ಸೂರ್ಯಕುಮಾರ್, ಶ್ರೇಯಸ್ ಅಯ್ಯರ್, ರಿಷಬ್ ಸಂತ್, ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳಾಗಿ ಕಣಕ್ಕಿಳಿದು ಅಬ್ಬರಿಸಲಿದ್ದಾರೆ.

ಇಂಗ್ಲೆಂಡ್ ಬ್ಯಾಟರ್‌ಗಳು, ಬೌಲರ್‌ಗಳೂ ನಿರಂತರವಾಗಿ ಒತ್ತಡಕ್ಕೆ ಸಿಲುಕುತ್ತಿದ್ದು, ಇದರ ಲಾಭ ಪಡೆಯಲು ಭಾರತ ಇನ್ನಷ್ಟು ರಣತಂತ್ರಗಳನ್ನು ಹೂಡಿದೆ.

ವಿರಾಟ್ ಕೊಹ್ಲಿ ಅಲಭ್ಯ: ಸತತ ಬ್ಯಾಟಿಂಗ್ ಲಯದ ಸಮಸ್ಯೆ ಎದುರಿಸುತ್ತಿರುವ ವಿರಾಟ್ ಕೊಹ್ಲಿಗೆ ಗಾಯದ ಸಮಸ್ಯೆಯೂ ಕಾಡುತ್ತಿದ್ದು, ಇನ್ನೂ ಚೇತರಿಸಿಕೊಂಡಿಲ್ಲ. ಹೀಗಾಗಿ ಅವರು 2ನೇ ಏಕದಿನ ಪಂದ್ಯಕ್ಕೂ ಆಯ್ಕೆಗೆ ಲಭ್ಯರಿಲ್ಲ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ

ಅಂಕಣ