ಶುಕ್ರವಾರ, ಮಾರ್ಚ್ 14, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಇನ್ನುಮುಂದೆ ಆಸ್ಪತ್ರೆಯಲ್ಲಿ ರೋಗಿಗಳು ಕ್ಯೂ ನಿಲ್ಲಬೇಕಿಲ್ಲ, ಆನ್‌ಲೈನ್ ನೋಂದಣಿ ಜಾರಿ: ಸಚಿವ ಸುಧಾಕರ್

Twitter
Facebook
LinkedIn
WhatsApp
ಇನ್ನುಮುಂದೆ ಆಸ್ಪತ್ರೆಯಲ್ಲಿ ರೋಗಿಗಳು ಕ್ಯೂ ನಿಲ್ಲಬೇಕಿಲ್ಲ, ಆನ್‌ಲೈನ್ ನೋಂದಣಿ ಜಾರಿ: ಸಚಿವ ಸುಧಾಕರ್

ಬೆಂಗಳೂರು: ಜಯನಗರ ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಹಲವು ಆಸ್ಪತ್ರೆಗಳು ಹಾಗೂ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಒಂದು ತಿಂಗಳೊಳಗೆ ಡಿಜಿಟಲ್‌ ಹೆಸರು ನೋಂದಣಿ ಹಾಗೂ ಡಿಜಿಟಲ್‌ ಪಾವತಿ ವ್ಯವಸ್ಥೆ ಜಾರಿಗೆ ತರಲಾಗುವುದು. ಬಳಿಕ ತಾಲೂಕು ಆಸ್ಪತ್ರೆಗಳಲ್ಲೂ ಇದೇ ವ್ಯವಸ್ಥೆ ಜಾರಿ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಅವರು ತಿಳಿಸಿದ್ದಾರೆ.

ಜಯನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರತಿ ವಾರ್ಡ್‌ಗೆ ಭೇಟಿ ನೀಡಿದ ಸಚಿವ ಡಾ.ಕೆ.ಸುಧಾಕರ್‌, ರೋಗಿಗಳನ್ನು ಮಾತನಾಡಿಸಿ ಚಿಕಿತ್ಸೆಯ ಗುಣಮಟ್ಟದ ಬಗ್ಗೆ ಮಾಹಿತಿ ಪಡೆದರು. ಬಳಿಕ ಆಸ್ಪತ್ರೆ ಅಭಿವೃದ್ಧಿ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಇದೇ ವೇಳೆ ಆಸ್ಪತ್ರೆ ಅಭಿವೃದ್ಧಿಗೆ 5 ಕೋಟಿ ರೂ. ಅನುದಾನ ಒದಗಿಸುವುದಾಗಿ ತಿಳಿಸಿದರು.

ಳಿಕ ಮಾತನಾಡಿದ ಸಚಿವರು, ಜಯನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಜನದಟ್ಟಣೆ ಕಡಿಮೆ ಮಾಡಲು, ವೈದ್ಯರ ಭೇಟಿಗೆ ಆನ್‌ಲೈನ್‌ನಲ್ಲಿ ಅಥವಾ ಮೊಬೈಲ್‌ ಸಂದೇಶದ ಮೂಲಕ ಸಮಯ ನಿಗದಿ ಮಾಡಿಕೊಳ್ಳುವ ವ್ಯವಸ್ಥೆ ಜಾರಿಗೆ ತರಲು ಸೂಚಿಸಲಾಗಿದೆ. ಆಸ್ಪತ್ರೆಯಲ್ಲಿ ಜನರ ಉದ್ದದ ಸಾಲು ಕಡಿಮೆ ಮಾಡಲು ಈ ಕ್ರಮ ವಹಿಸಲಾಗುತ್ತಿದೆ.

ವೈದ್ಯರ ಆಪಾಯಿಂಟ್‌ಮೆಂಟ್‌ ಸಮಯ, ಯಾವ ವೈದ್ಯರು ಎಂಬಿತ್ಯಾದಿ ಮಾಹಿತಿಗಳನ್ನು ಮೊಬೈಲ್‌ಗೆ ಸಂದೇಶ ಕಳುಹಿಸುವ ವ್ಯವಸ್ಥೆ ತರಲಾಗುತ್ತಿದೆ. ಆಸ್ಪತ್ರೆಗೆ ಯಾರೂ ಬಂದು ಕಾಯುವ ಅಗತ್ಯವಿಲ್ಲ. ಹಾಗೆಯೇ ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಜನರು ಬರುವ ಮುನ್ನವೇ ಆನ್‌ಲೈನ್‌ ನಲ್ಲಿ ಹೆಸರು ನೋಂದಾಯಿಸಿಕೊಳ್ಳುವ ಹಾಗೂ ಡಿಜಿಟಲ್‌ ಪಾವತಿ ಮಾಡುವ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದು ಹೇಳಿದರು.

ಜಯನಗರ ಸರ್ಕಾರಿ ಆಸ್ಪತ್ರೆ ಎನ್‌ಕ್ಯೂಎಸ್‌ ಗುಣಮಟ್ಟವನ್ನು ಹೊಂದುವಂತೆ ಕ್ರಮ ವಹಿಸಬೇಕು ಎಂದು ವೈದ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ. ಈ ಮೂಲಕ ಸರ್ಕಾರಿ ಸೇವೆಯ ಗುಣಮಟ್ಟವನ್ನು ಹೆಚ್ಚಿಸಬೇಕಿದೆ. ಈಗ ಪರಿಶೀಲನೆ ನಡೆಸಿದ ಬಳಿಕವೂ ಮತ್ತೊಮ್ಮೆ ಬಂದು ಪರಿಶೀಲನೆ ನಡೆಸಿ ಗುರಿ ತಲುಪಲಾಗಿದೆಯೇ ಎಂದು ಗಮನಿಸಲಾಗುವುದು ಎಂದರು.

51 ಹಾಸಿಗೆಗಳ ಐಸಿಯು ಇಲ್ಲಿದೆ. ಕೋವಿಡ್‌ ಬಳಿಕ ಇಲ್ಲಿ ಹಾಸಿಗೆಗಳ ಸಂಖ್ಯೆ ಹೆಚ್ಚಿಸಲಾಗಿದೆ. ಇದಕ್ಕೆ ಪೂರಕವಾಗಿ ಅಗತ್ಯ ಸಿಬ್ಬಂದಿಯನ್ನು ನೀಡಲಾಗುವುದು. ಕಾಯಂ ಸಿಬ್ಬಂದಿ ನೇಮಕಕ್ಕಾಗಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ನೀಡಲಾಗುವುದು. ನಾಲ್ಕು ಆರ್ಥೊಪೆಡಿಕ್‌ ತಜ್ಞರು ಈ ಆಸ್ಪತ್ರೆಯಲ್ಲಿದ್ದರೂ 40 ಪ್ರೊಸೀಜರ್‌ ಮಾತ್ರ ನಡೆಯುತ್ತಿದೆ. ಈ ಸಂಖ್ಯೆಯನ್ನು 100 ಕ್ಕೆ ಏರಿಸಿಕೊಳ್ಳಬೇಕು. ಹಾಗೆಯೇ ಸಭೆ ನಡೆಸಿ ವಿವಿಧ ವಿಭಾಗಗಳ ನಡುವೆ ಸಮನ್ವಯತೆ ತರಬೇಕು ಎಂದು ಸೂಚಿಸಲಾಗಿದೆ ಎಂದರು.

ಗುಣಮಟ್ಟದ ಚಿಕಿತ್ಸೆ, 5 ಕೋಟಿ ರೂ. ಅನುದಾನ
ಜಯನಗರ ಆಸ್ಪತ್ರೆಯಲ್ಲಿ ಚಿಕಿತ್ಸೆಯ ಬಗ್ಗೆ ರೋಗಿಗಳನ್ನು ಮಾತನಾಡಿಸಿದ್ದು, ಒಬ್ಬರು ಕೂಡ ಗುಣಮಟ್ಟದಲ್ಲಿ ಲೋಪ ಆಗಿದೆ ಎಂದು ಹೇಳಿಲ್ಲ. ಐದು ವರ್ಷದಿಂದ ಡಯಾಲಿಸಿಸ್‌ ಮಾಡಿಸಿಕೊಳ್ಳುತ್ತಿರುವ ರೋಗಿಯೊಬ್ಬರು, ಯಾವುದೇ ಹಣ ನೀಡದೆ ಚಿಕಿತ್ಸೆ ಪಡೆಯುತ್ತಿದ್ದೇನೆ ಹಾಗೂ ಆರೋಗ್ಯವಾಗಿದ್ದೇನೆ ಎಂದು ತಿಳಿಸಿದ್ದಾರೆ. ಆಸ್ಪತ್ರೆಯಲ್ಲಿ ಚಾವಣಿ ಸೇರಿದಂತೆ ಕೆಲವೆಡೆ ದುರಸ್ತಿ ಕಾರ್ಯಗಳು ನಡೆಯಬೇಕಿದೆ. ಸುಮಾರು 5 ಕೋಟಿ ರೂ.ನಷ್ಟು ಅನುದಾನ ಬೇಕಿದ್ದು, ಅದನ್ನು ನೀಡಲಾಗುವುದು ಎಂದರು.

ರೋಗಿಗಳಿಗೆ ಚಿಕಿತ್ಸೆ ವಿಚಾರದಲ್ಲಿ ಸಮಾಧಾನ ಇದೆ ಎಂದು ತಿಳಿದುಬಂದಿದೆ. ಪ್ರಸೂತಿ ವಿಭಾಗದಲ್ಲಿ ಕೆಲ ದೂರುಗಳಿದ್ದು, ಅದಕ್ಕಾಗಿ ಸ್ಪಷ್ಟ ಸೂಚನೆ ನೀಡಲಾಗಿದೆ. ಪ್ರತಿ ವಿಭಾಗಗಳ ಮುಖ್ಯಸ್ಥರಿಗೆ ನಿಗದಿತ ಗುರಿ ನೀಡಲಾಗಿದೆ. ಜನರು ಖಾಸಗಿ ಆಸ್ಪತ್ರೆಗೆ ಹೋಗದೆ ಇಲ್ಲಿಯೇ ಬರುವಂತೆ ಕ್ರಮ ವಹಿಸಬೇಕು ಎಂದು ಸೂಚಿಸಲಾಗಿದೆ ಎಂದರು.

ಈ ಹಿಂದೆ ಲಂಚ ಪಡೆದ ಹೊರಗುತ್ತಿಗೆ ವೈದ್ಯರೊಬ್ಬರ ವಿರುದ್ಧ ತನಿಖೆ ನಡೆಯುತ್ತಿದೆ. ಈಗ ತಕ್ಷಣ ಕೆಲಸದಿಂದ ತೆಗೆದುಹಾಕಬೇಕು ಎಂದು ಸೂಚಿಸಲಾಗಿದೆ. ತನಿಖಾ ವರದಿ ಬರುವ ಮುನ್ನವೇ ಅವರನ್ನು ಕೆಲಸದಿಂದ ತೆಗೆದುಹಾಕಲು ತಿಳಿಸಲಾಗಿದೆ. ರಾಜ್ಯದ ಬೇರೆ ಬೇರೆ ಆಸ್ಪತ್ರೆಗಳಿಗೂ ಭೇಟಿ ನೀಡಲಾಗುವುದು. ನಮ್ಮ ಸರ್ಕಾರ ಮಾತೃ ಹೃದಯ ಹೊಂದಿದ್ದು, ಅದಕ್ಕೆ ಪೂರಕವಾಗಿ ಕಾರ್ಯ ನಿರ್ವಹಿಸಲಾಗುವುದು ಎಂದರು.

ಹಣ ವಾಪಸ್‌ ಕೊಡಿಸುವವರೆಗೂ ಬಿಡುವುದಿಲ್ಲ
ಕೋವಿಡ್‌ ರೋಗಿಗಳಿಂದ ಹಣ ಪಡೆದು ಬಳಿಕ ಸರ್ಕಾರದಿಂದ ಹಣ ಪಡೆದ ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್‌ ನೀಡಿ, ಹಣವನ್ನು ರೋಗಿಗಳಿಗೆ ಹಿಂದಿರುಗಿಸಲಾಗಿದೆ. ಇತಿಹಾಸದಲ್ಲಿ ಮೊದಲ ಬಾರಿಗೆ ಸರ್ಕಾರ ಈ ರೀತಿಯ ಕ್ರಮ ವಹಿಸಿ, 1.58 ಕೋಟಿ ರೂ. ಹಣವನ್ನು ರೋಗಿಗಳ ಕುಟುಂಬಕ್ಕೆ ವಾಪಸ್‌ ಮಾಡಲಾಗಿದೆ. ಇನ್ನು ಉಳಿದ ಮೊತ್ತವನ್ನು ಕೂಡ ವಾಪಸ್‌ ಕೊಡಿಸಲಾಗುವುದು. ಮೊತ್ತವನ್ನು ವಾಪಸ್‌ ಕೊಡಿಸುವವರೆಗೂ ಸರ್ಕಾರ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಸಚಿವರ ಈ ಭೇಟಿ ವೇಳೆ ಜಯನಗರ ಶಾಸಕಿ ಸೌಮ್ಯ ರೆಡ್ಡಿ, ಆರೋಗ್ಯ ಇಲಾಖೆ ಆಯುಕ್ತ ಡಿ.ರಂದೀಪ್‌ ಹಾಜರಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist