ಉಡುಪಿ: ಸ್ನಾನಕ್ಕೆ ತೆರಳಿದ್ದ ವೇಳೆ ಸಿಡಿಲಾಘಾತಕ್ಕೆ ವಿಧ್ಯಾರ್ಥಿ ಸಾವು..!
ಉಡುಪಿ: ಸ್ನಾನಕ್ಕೆಂದು ತೆರಳಿದ್ದ ವೇಳೆ ಸಿಡಿಲು ಹೊಡೆದು ಕಾಲೇಜು ವಿದ್ಯಾರ್ಥಿಯೊಬ್ಬ ಸಾವನಪ್ಪಿದ ಘಟನೆ ಶಿರ್ವ ಸಮೀಪದ ಮಾಣಿಬೆಟ್ಟು ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಶಿರ್ವ ಮಾಣಿಬೆಟ್ಟು ತೋಟದಮನೆ ನಿವಾಸಿ ರಮೇಶ್ ಪೂಜಾರಿ ಎಂಬವರ ಪುತ್ರ ರಕ್ಷಿತ್ ಪೂಜಾರಿ (20) ಎಂದು ಗುರುತಿಸಲಾಗಿದೆ. ಇವರು ಶಿರ್ವ ಎಂಎಸ್ಆರ್ ಎಸ್ ಕಾಲೇಜಿನಲ್ಲಿ ಎರಡನೇ ವರ್ಷದ ಬಿಸಿಎ ವಿದ್ಯಾರ್ಥಿಯಾಗಿದ್ದರು. ಗುರುವಾರ ಸಂಜೆ ಸ್ನಾನ ಮಾಡಲು ಬಚ್ಚಲು ಮನೆಯ ಬಳಿ ನಿಂತಿದ್ದ ವೇಳೆ ಸಿಡಿಲು ಬಡಿದಿದೆ. ನೆಲದಲ್ಲಿ ಬಿದ್ದಿದ್ದ ಅವರನ್ನು ಮನೆ ಮಂದಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ.
ಮಂಗಳೂರು: ಮನೆಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ
ನಗರದ ಕುಲಶೇಖರದ ಬಳಿಯ ಮನೆಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಂತರ್ ಜಿಲ್ಲಾ ಕಳ್ಳರನ್ನು ಕಂಕನಾಡಿ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೊಡಗು ಜಿಲ್ಲೆ ವೀರಾಜಪೇಟೆ ಬೆಳ್ಳುರು ಗ್ರಾಮ ನಿವಾಸಿ ಸಚಿನ್ ಮತ್ತು ಕೊಡಗು ಜಿಲ್ಲೆ ಬಾಡಗಾ ಗ್ರಾಮ ನಿವಾಸಿ ನಿಶಾಂತ್ ಬಂಧಿತ ಆರೋಪಿಗಳು.
ಆರೋಪಿಗಳು ಮೇ 11 ರಂದು ಕುಲಶೇಖರ ಡೈರಿ ಬಳಿಯ ಮನೆಯೊಂದರ ಹೆಂಚು ತೆಗೆದು ಒಳನುಗ್ಗಿದ ಕಳ್ಳರು ಮನೆಯಲ್ಲಿದ್ದ 87.5 ಗ್ರಾಂ ಚಿನ್ನಾಭರಣ ಕಳವು ಮಾಡಿದ್ದರು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ 4,29,500 ರೂ. ಮೌಲ್ಯದ ಚಿನ್ನಾಭರಣ, ಕೃತ್ಯಕ್ಕೆ ಉಪಯೋಗಿಸಿದ 7 ಲಕ್ಷ ರೂ. ಮೌಲ್ಯದ ಕಾರು ಸೇರಿ 11.30 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಕ್ರಿಮಿನಲ್ ಹಿನ್ನಲೆ: ಆರೋಪಿಗಳ ಪೈಕಿ ಸಚಿನ್ ವಿರುದ್ಧ ಕೊಡಗು ಜಿಲ್ಲೆಯ ಗೋಣಿಕೊಪ್ಪಲು ಪೊಲೀ ಸ್ ಠಾಣೆಯಲ್ಲಿ ಪೊಕ್ಸೋ ಪ್ರಕರಣದ ಹಾಗೂ ನಿಶಾಂತ್ ವಿರುದ್ಧ ಕೊಡಗು ಜಿಲ್ಲೆಯ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮನೆ ಕಳವು ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣಗಳು ದಾಖಲಾಗಿದೆ. ಕಂಕನಾಡಿ ನಗರ ಠಾಣಾ ನಿರೀಕ್ಷಕ ಟಿ.ಡಿ. ನಾಗರಾಜ್ ನೇತೃತದಲ್ಲಿ ಪಿಎಸ್ಐ ರಾಘವೇಂದ್ರ ನಾಯ್ಕ , ಹುಸೇನಸಾಬ ಮತ್ತು ಸಿಬ್ಬಂದಿ ಜಯಾನಂದ, ರಾಜೇಶ್, ರಾಘವೇಂದ್ರ , ಸಂತೋಷ್, ಪುರುಷೋ ತ್ತಮ, ಗಂಗಾಧರ್, ಚೇತನ್, ರಾಜೆಸಾಬ್ ಮುಲ್ಲಾರವರು ಆರೋಪಿ ಮತ್ತು ಸೊತ್ತು ಪತ್ತೆ ಕಾರ್ಯದಲ್ಲಿ ಭಾಗವಹಿಸಿದ್ದರು.