ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಉತ್ತರಾಖಂಡದಲ್ಲಿ ಹೆಲಿಕಾಪ್ಟರ್‌ನ ರೆಕ್ಕೆ ಬಡಿದು ಅಧಿಕಾರಿ ಸಾವು

Twitter
Facebook
LinkedIn
WhatsApp
298934006 653786752771215 1026980049979693809 n 1

ಡೆಹ್ರಾಡೂನ್: ಉತ್ತರಾಖಂಡದ (Uttarakhand) ಕೇದಾರನಾಥ ದೇವಾಲಯವನ್ನು (Kedarnath Temple) ಯಾತ್ರಾರ್ಥಿಗಳಿಗೆ ತೆರೆಯಲು ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಆದರೆ ಯಾತ್ರೆ ಆರಂಭವಾಗುವುದಕ್ಕೂ ಮುನ್ನವೇ ಅವಘಡವೊಂದು ಸಂಭವಿಸಿದೆ. ದೇವಾಲಯದ ಸಿದ್ಧತೆ ಪರಿಶೀಲನೆಗೆ ತೆರಳಿದ್ದ ಉತ್ತರಾಖಂಡದ ಸರ್ಕಾರಿ ಅಧಿಕಾರಿಯೊಬ್ಬರಿಗೆ ಹೆಲಿಕಾಪ್ಟರ್‌ನ (Helicopter) ರೆಕ್ಕೆ ಬಡಿದು ಭಾನುವಾರ ಮೃತಪಟ್ಟಿದ್ದಾರೆ.

ಗಡ್ವಾಲ್ ಮಂಡಲ್ ವಿಕಾಸ್ ನಿಗಮ್ ಲಿಮಿಟೆಡ್ (JMVN) ಹೆಲಿಪ್ಯಾನ್‌ನಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ಮೃತ ಅಧಿಕಾರಿಯನ್ನು ಉತ್ತರಾಖಂಡದ ನಗರಿಕ ವಿಮಾನಯಾನ ಅಭಿವೃದ್ಧಿ ಪ್ರಾಧಿಕಾರದ (UCADA) ಹಣಕಾಸು ನಿಯಂತ್ರಕ ಅಮಿತ್ ಸೈನಿ ಎಂದು ಗುರುತಿಸಲಾಗಿದೆ. 

ಮೂಲಗಳ ಪ್ರಕಾರ ಹೆಲಿಕಾಪ್ಟರ್‌ನ ಹಿಂದಿನ ಭಾಗದ ರೆಕ್ಕೆ ಅಮಿತ್ ಸೈನಿ ಅವರ ಕತ್ತನ್ನು ಸೀಳಿದೆ. ಇದರಿಂದ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಆದರೆ ಘಟನೆಯ ಹಿಂದಿನ ಕಾರಣ ಇನ್ನೂ ದೃಢಪಟ್ಟಿಲ್ಲ. ಸೇನಿ ಅವರು ಹೆಲಿಕಾಪ್ಟರ್‌ನ ಹಿಂಬದಿಯ ರೆಕ್ಕೆಯ ಬಳಿಗೆ ಏಕೆ ಹೋದರು ಎಂಬುದು ತಿಳಿದುಬಂದಿಲ್ಲ. ಅವರು ಸೆಲ್ಫಿ ತೆಗೆಯಲು ಮುಂದಾಗಿದ್ದಾಗ ದುರ್ಘಟನೆ ನಡೆದಿದೆ ಎಂಬುದು ವದಂತಿಯಾಗಿದೆ ಎಂದು ಎಸ್‌ಪಿ ವಿಶಾಖ್ ಅಶೋಕ್ ಭದನೆ ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ