ಉದ್ಯೋಗದಲ್ಲಿ ಬಡ್ತಿ ಪಡೆಯಲು ಬಾಸ್ ಜೊತೆ ಮಲಗಲು ಪತ್ನಿಯನ್ನು ಒತ್ತಾಯಿಸಿದ!
ಮುಂಬೈ: ತ್ವರಿತ ಬಡ್ತಿ ಹಾಗೂ ಇತರೆ ಆರ್ಥಿಕ ಪ್ರಯೋಜನಗಳು ಸಿಗಲು ವ್ಯಕ್ತಿಯೊಬ್ಬ ಪತ್ನಿ (Wife) ಬಳಿ ಬಾಸ್ ಜೊತೆ ಮಲಗಲು ಒತ್ತಾಯಿಸಿದ ಘಟನೆ ಮಹಾರಾಷ್ಟ್ರದ (Maharashtra) ಪುಣೆಯಲ್ಲಿ (Pune) ನಡೆದಿದೆ.
ಪುಣೆಯ ಅಮಿತ್ ಛಾಬ್ರಾ ಎಂಬ ವ್ಯಕ್ತಿಯನ್ನು ಮಹಿಳೆ ಮದುವೆ ಆಗಿದ್ದಳು. ಮದುವೆಯ ನಂತರ ಅಮಿತ್ ಛಾಬ್ರಾ ಕೆಟ್ಟ ಸಹವಾಸಗಳಿಗೆ ಸಿಲುಕಿ ಪತ್ನಿಯನ್ನು ಅನೈತಿಕ ಹಾಗೂ ಕಾನೂನುಬಾಹಿರ ಆಚರಣೆಗಳಲ್ಲಿ ತೊಡಗಿಸಿಕೊಳ್ಳುವಂತೆ ಒತ್ತಾಯಿಸುತ್ತಿದ್ದ ಎಂಬ ಆರೋಪಗಳು ಕೇಳಿಬಂದಿದೆ.
ಅಷ್ಟೇ ಅಲ್ಲದೇ ಅಮಿತ್ ಸಹೋದರನು ಕೂಡ ಮಹಿಳೆಯನ್ನು ಅನುಚಿತವಾಗಿ ಸ್ಪರ್ಶಿಸುತ್ತಿದ್ದ. ಜೊತೆಗೆ ಆಕೆಯ ಮಾವ ಕೂಡ 12 ವರ್ಷದ ಮಗಳ ಎದುರೇ ಹಲವು ಬಾರಿ ಲೈಂಗಿಕ ಕಿರುಕುಳ ನೀಡಿದ್ದ. ಇದನ್ನು ವಿರೋಧಿಸಿದಾಗ ಆಕೆಗೆ ಥಳಿಸುತ್ತಿದ್ದ.
ಈ ಹಿನ್ನೆಲೆಯಲ್ಲಿ ಆಕೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು. ಆ ವೇಳೆ ಆಕೆಯ ಪತಿ ಇನ್ನೂ ಮುಂದೆ ಕಿರುಕುಳ ನೀಡುವುದಿಲ್ಲ ಎಂದು ಲಿಖಿತವಾಗಿ ತಿಳಿಸಿದ್ದ. ಆದರೆ ಕೆಲ ದಿನಗಳ ನಂತರ ಮತ್ತೆ ಕಿರುಕುಳ ಪ್ರಾರಂಭವಾಗಿತ್ತು.
ಈ ಹಿನ್ನೆಲೆಯಲ್ಲಿ ಸಂತ್ರಸ್ತೆ ಕೋರ್ಟ್ ಮೊರೆ ಹೋಗಿದ್ದಾಳೆ. ನಂತರ ನ್ಯಾಯಾಲಯವು ಮಹಿಳಾ ಕಲ್ಯಾಣ ಅಧಿಕಾರಿಯಿಂದ ತನಿಖೆಗೆ ಆದೇಶಿಸಿತು. ತನಿಖೆಯ ನಂತರ ಮಹಿಳೆಯ ಪತಿ, ಸೋದರ ಮಾವ, ಅತ್ತೆಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.