ಉಪ್ಪಿನಂಗಡಿ : ಚರ್ಚ್ ಗೆ ನುಗ್ಗಿದ ಕಳ್ಳರು - ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತು ಕಳವು!
Twitter
Facebook
LinkedIn
WhatsApp

ಉಪ್ಪಿನಂಗಡಿ,ಮೇ6:ಉಪ್ಪಿನಂಗಡಿ ಸಮೀಪದ ಶಿರಾಡಿ ಗ್ರಾಮದ ಸೈಂಟ್ ಪೀಟರ್ಸ್ ಮತ್ತು ಸೈಂಟ್ ಪಾಲ್ಸ್ ಜಾಕೋಬೈಟ್ ಸಿರಿಯನ್ ಚರ್ಚ್‌ಗೆ ನುಗ್ಗಿ ಚಿನ್ನಾಭರಣ ಕಳ್ಳತನ ನಡೆದಿದೆ.
ಚರ್ಚ್ ಕಚೇರಿಗೆ ನುಗ್ಗಿದ ಕಳ್ಳರು ಬೀಗ ಒಡೆದು ಒಳ ಬೀರುವಿನಲ್ಲಿಟ್ಟಿದ್ದ 12 ಗ್ರಾಂ ಚಿನ್ನಾಭರಣ, 250 ಗ್ರಾಂ ಬೆಳ್ಳಿ ಹಾಗೂ 15,880 ರೂ.ನಗದನ್ನು ತೆಗೆದುಕೊಂಡು ಹೋಗಿದ್ದಾರೆ. ಅಲ್ಲದೇ ಜನರೇಟರ್ ಶೆಡ್ ನ ಲಾಕರ್ ಒಡೆದು 35 ಲೀಟರ್ ಡೀಸೆಲ್ ಕಳ್ಳತನ ಮಾಡಿದ್ದಾರೆ ಎಂದು ಉಪ್ಪಿನಂಗಡಿ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಖದೀಮರು1.8 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು ಬೆಳ್ಳಿಯನ್ನು ದೋಚಿದ್ದು, ದೂರು ದಾಖಲಾಗಿದೆ.