ಬುಧವಾರ, ಮೇ 8, 2024
ನಾಳೆ SSLC ಪಲಿತಾಂಶ ಪ್ರಕಟ ; ಇಲ್ಲಿದೆ ಲಿಂಕ್-ಲಂಚ ಸ್ವೀಕಾರ; ರೆಂಡ್ ಆ್ಯಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ PDO-ಐದನೇ ಬಾರಿ ರಷ್ಯಾ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ವ್ಲಾಡಿಮಿರ್ ಪುಟಿನ್-ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್‌ ಇನ್ನಿಲ್ಲ-ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ; ಇಲಾಖೆಯಿಂದ ಯಾವುದೇ ವೇತನ ಬಾಕಿ ಇಲ್ಲ - ದಿನೇಶ್‌ ಗುಂಡೂರಾವ್‌-ಡಿಕೆಶಿ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟು, ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡಲಿ : ಎಚ್‌ಡಿ ಕುಮಾರಸ್ವಾಮಿ-ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಸಿಕ್ಕಾಪಟ್ಟೆ ಟ್ರೋಲ್!!-ಹರಿಯಾಣ ಸರ್ಕಾರ ಬೆಂಬಲಿಸುತ್ತಿದ್ದ ಮೂವರು ಶಾಸಕರು ಕಾಂಗ್ರೆಸ್ ಸೇರ್ಪಡೆ..!-ಟಿ-20 ವಿಶ್ವಕಪ್ ಗೆ ಪ್ರಕಟಗೊಂಡ ಎಲ್ಲಾ ತಂಡದಲ್ಲಿ ಯಾರೆಲ್ಲಾ ಆಟಗಾರರಿದ್ದಾರೆ? ಬಲಿಷ್ಠ ತಂಡ ಯಾವುದು?-ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉಳ್ಳಾಲ: ಒಂಟಿ ಮಹಿಳೆ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Twitter
Facebook
LinkedIn
WhatsApp
WhatsApp Image 2023 02 20 at 5.31.13 PM

ಉಳ್ಳಾಲ: ಒಂಟಿ ಮಹಿಳೆ ಮೃತದೇಹ ಕೊಳೆತ ಸ್ಥಿತಿಯಲ್ಲಿ ತಾನು ವಾಸವಿದ್ದ ಮನೆಯ ಅಡುಗೆಕೋಣೆಯಲ್ಲಿ ಪತ್ತೆಯಾಗಿರುವ ಘಟನೆ ಹರೇಕಳ ಸಮೀಪದ ದೇರಡ್ಕ ಎಂಬಲ್ಲಿ ನಡೆದಿದೆ.

ಹರೇಕಳ ದೇರಡ್ಕ ನಿವಾಸಿ ಜೀನಿ ಡಿಸೋಜ ಎಂಬವರ ಪತ್ನಿ ಮಗ್ಗಿ ಮೊಂತೇರೊ (62) ಎಂಬವರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.ಫೆ.16 ರಂದು ಪುತ್ರಿ ಮನೆಗೆ ಬಂದು ತಾಯಿ ಜತೆಗೆ ಮಾತನಾಡಿ ತೆರಳಿದ್ದರು. ಆನಂತರ ಮೂರು ದಿನಗಳಿಂದ ಮೊಬೈಲ್ ಕರೆ ಸ್ವೀಕರಿಸದ ಹಿನ್ನೆಲೆಯಲ್ಲಿ ಪುತ್ರಿ ಮನೆಗೆ ಬಂದಾಗ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.ಅಡುಗೆ ನಡೆಸುವ ಒಲೆಯ ಸಮೀಪದಲ್ಲೇ ಮೃತದೇಹ ಬಿದ್ದ ಸ್ಥಿತಿಯಲ್ಲಿದೆ. ಅಸೌಖ್ಯದಿಂದ ಕಳಗೆ ಬಿದ್ದು ತಲೆಗೆ ಗಾಯವಾಗಿ ಸಾವನ್ನಪ್ಪಿರುವ ಶಂಕೆಯನ್ನು ಕೊಣಾಜೆ ಪೊಲೀಸರು ವ್ಯಕ್ತಪಡಿಸಿದ್ದಾರೆ. ಸ್ಥಳೀಯರೊಂದಿಗೆ ಮಾತನಾಡದೇ ಇರುತ್ತಿದ್ದ ಮಗ್ಗಿ ಮೊಂತೇರೊ ಅವರು 3 ಎಕರೆ ಸ್ಥಳದಲ್ಲಿದ್ದ ಒಂಟಿ ಮನೆಯಲ್ಲಿ ಒಂಟಿಯಾಗಿಯೇ ವಾಸಿಸುತ್ತಿದ್ದರು. ಓರ್ವ ಪುತ್ರ ಕೂಡಾ ತಾಯಿ ಜತೆಗಿರುತ್ತಿರಲಿಲ್ಲ. ಸ್ಥಳಕ್ಕಾಗಮಿಸಿದ ಕೊಣಾಜೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ