ಉಳ್ಳಾಲದಲ್ಲಿ ಟೈಲರ್ ಅಂಗಡಿಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಮಾಲೀಕ!
Twitter
Facebook
LinkedIn
WhatsApp
ಮಂಗಳೂರು: ತಾಲೂಕಿನ ತೊಕ್ಕೊಟ್ಟು ಗ್ರಾಮದಲ್ಲಿ ಟೈಲರ್ ಅಂಗಡಿ ಮಾಲೀಕನೊಬ್ಬ ತನ್ನ ಮಳಿಗೆಯೊಳಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಕನೀರುತೋಟ ನಿವಾಸಿ ಪ್ರವೀಣ್ ಆಳ್ವ(45) ಆತ್ಮಹತ್ಯೆ ಮಾಡಿಕೊಂಡ ರ್ದುದೈವಿ. ಪ್ರವೀಣ್ ಟೈಲರ್ ಅಂಗಡಿಗಳಿಗೆ ಕಚ್ಚಾ ವಸ್ತುಗಳನ್ನು ಪೂರೈಸುತ್ತಿದ್ದ. ಆರ್ಥಿಕ ಸಂಕಷ್ಟದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಶುರುಮಾಡಿದ್ದಾರೆ.