ಶನಿವಾರ, ಮೇ 18, 2024
ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಎಪಿಎಂಸಿ, ಭೂ ಸುಧಾರಣಾ ಕಾಯ್ದೆಗಳನ್ನೂ ರಾಜ್ಯ ಸರ್ಕಾರ ವಾಪಸ್ ಪಡೆಯಲಿ - ಸಿದ್ದರಾಮಯ್ಯ

Twitter
Facebook
LinkedIn
WhatsApp
ಎಪಿಎಂಸಿ, ಭೂ ಸುಧಾರಣಾ ಕಾಯ್ದೆಗಳನ್ನೂ ರಾಜ್ಯ ಸರ್ಕಾರ ವಾಪಸ್ ಪಡೆಯಲಿ – ಸಿದ್ದರಾಮಯ್ಯ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಕೃಷಿ ಕಾಯ್ದೆಗಳನ್ನು ವಾಪಸು ಪಡೆದಂತೆ ರಾಜ್ಯ ಬಿಜೆಪಿ ಸರ್ಕಾರ ಕೂಡಾ ರೈತ ವಿರೋಧಿಯಾಗಿರುವ ಎಪಿಎಂಸಿ (ಉತ್ತೇಜನ ಮತ್ತು ಸೌಲಭ್ಯ) ಕಾಯ್ದೆ ಮತ್ತು ಭೂ ಸುಧಾರಣಾ (ತಿದ್ದುಪಡಿ) ಕಾಯ್ದೆಯನ್ನು ತಕ್ಷಣ ವಾಪಾಸು ಪಡೆಯಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, “ನರೇಂದ್ರ ಮೋದಿ ಅವರು ಕೊಂದ ಪಾಪವನ್ನು ತಿಂದು ಪರಿಹರಿಸಿಕೊಂಡಿದ್ದಾರೆ. ಈಗ ರಾಜ್ಯ ಬಿಜೆಪಿ ಸರ್ಕಾರದ ಸರದಿ. ಎಪಿಎಂಸಿಗಳ ನಿಯಂತ್ರಣವಿಲ್ಲದೆ ಸ್ವತಂತ್ರವಾಗಿ ವ್ಯಾಪಾರ ನಡೆಸುವ ಅವಕಾಶಕ್ಕಾಗಿ ಪ್ರಯತ್ನಿಸುತ್ತಲೇ ಬಂದಿರುವ ಖಾಸಗಿ ಕಂಪೆನಿಗಳಿಗೆ ಹೆಬ್ಬಾಗಿಲು ತೆರೆಯುವುದೇ ಕೃಷಿ ಉತ್ಪನ್ನ ಮಾರಾಟ ಮತ್ತು ವಾಣಿಜ್ಯ (ಉತ್ತೇಜನ ಮತ್ತು ಸೌಲಭ್ಯ) ಕಾಯ್ದೆಯ ದುರುದ್ದೇಶವಾಗಿದೆ. ಎಪಿಎಂಸಿಯ ಹೊಸ ತಿದ್ದುಪಡಿ ಕಾಯ್ದೆ ಜಾರಿಗೆ ಬಂದ ನಂತರ ರಾಜ್ಯ ಸರ್ಕಾರಕ್ಕೆ ಎಂಪಿಎಂಸಿಯಿಂದ ಹೊರಗಿರುವ ವರ್ತಕರ ಮೇಲೆ ಯಾವ ನಿಯಂತ್ರಣವೂ ಇರುವುದಿಲ್ಲ” ಎಂದರು.

ಇನ್ನು “ರೈತರಿಗೆ ನೆರವಾಗುವ ಉದ್ದೇಶ ಸರ್ಕಾರಕ್ಕಿದ್ದರೆ ಮಾರುಕಟ್ಟೆಗಳಿಲ್ಲದ ಕಡೆಗಳಲ್ಲಿ ಎಪಿಎಂಸಿಯಿಂದ ಪರವಾನಿಗೆ ಪಡೆದು ಮಾರುಕಟ್ಟೆಗಳನ್ನು ಸ್ಥಾಪಿಸಲು ಸರ್ಕಾರ ಉತ್ತೇಜನ ನೀಡಬಹುದಾಗಿದೆ. ಕೇಂದ್ರ ಸರ್ಕಾರದಂತೆ ರಾಜ್ಯ ಸರ್ಕಾರ ಕೂಡಾ ತನ್ನ ತಪ್ಪನ್ನು ತಿದ್ದಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಕೃಷಿ ಭೂಮಿ ಖರೀದಿಗೆ ಇದ್ದ 25ರೂ. ಲಕ್ಷ ಆದಾಯದ ಮಿತಿಯನ್ನು ರದ್ದುಗೊಳಿಸಿ, ಕೃಷಿಕರಲ್ಲದವರು ಕೂಡಾ ಕೃಷಿ ಭೂಮಿ ಖರೀದಿಸಲು ಅವಕಾಶ ನೀಡಲು, ಭೂ ಸುಧಾರಣಾ ಕಾಯ್ದೆ 1961ರ ಸೆಕ್ಟನ್ 80 ಮತ್ತು 79 ಎ ಬಿ ಸಿ ಗಳನ್ನು ರದ್ದು ಮಾಡಿರುವ ಸರ್ಕಾರ ರೈತರನ್ನು ಬೀದಿಪಾಲು ಮಾಡಲು ಹೊರಟಿದೆ ಎಂದು ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು