ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಎಸಿ ಶಾರ್ಟ್ ಸಕ್ಯೂಟ್ ನಿಂದ ಸ್ಫೋಟ; ತಾಯಿ, ಇಬ್ಬರು ಮಕ್ಕಳು ಮನೆಯಲ್ಲೇ ಸಜೀವ ದಹನ

Twitter
Facebook
LinkedIn
WhatsApp
ಎಸಿ ಶಾರ್ಟ್ ಸಕ್ಯೂಟ್ ನಿಂದ ಸ್ಫೋಟ; ತಾಯಿ, ಇಬ್ಬರು ಮಕ್ಕಳು ಮನೆಯಲ್ಲೇ ಸಜೀವ ದಹನ

ರಾಯಚೂರು (ಮಾ.6): ಮನೆಯಲ್ಲಿನ ಎಸಿ ಸ್ಫೋಟಗೊಂಡು ಮೂವರು ಸಜೀವ ದಹನ ಆಗಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ‌ನಡೆದಿದೆ. ಜಿಲ್ಲೆಯ ಶಕ್ತಿನಗರದ ಆರ್ ಟಿಪಿಎಸ್ ಕಾಲೋನಿಯಲ್ಲಿ ಈ ಹೃದಯ ವಿದ್ರಾವಕ ಘಟನೆ ಜರುಗಿದೆ. ಘಟನೆಯಲ್ಲಿ ಮಂಡ್ಯ ಮೂಲದ ಗೃಹಿಣಿ ರಂಜಿತಾ(31), ಮಕ್ಕಳಾದ ತಾರುಣ್ಯ (6) ಮತ್ತು ಮೃದಲಾ (13) ಸಾವನ್ನಪ್ಪಿದ್ದಾರೆ. ಮೃತ ಮಹಿಳೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕೋಡಿಹಳ್ಳಿ ಗ್ರಾಮದವರು ಎಂದು ಗುರುತಿಸಲಾಗಿದೆ. 

ಮೃತ ರಂಜಿತಾ ಪತಿ ಸಿದ್ದಲಿಂಗಯ್ಯ ಸ್ವಾಮಿ ಆರ್ ಟಿಪಿಎಸ್ ನಲ್ಲಿ ಎಇಇ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಿನ್ನೆ ಸಂಜೆ ವೇಳೆ ಮಕ್ಕಳನ್ನು ಶಾಲೆಯಿಂದ ಮನೆಗೆ ಕರೆದುಕೊಂಡು ಬಂದು ಮನೆಯ ಬೆಡ್ ರೂಮ್ ನ ಬಾಗಿಲು ಹಾಕಿಕೊಂಡು ನಿದ್ರೆಗೆ ಜಾರಿದ್ರು. ಈ ವೇಳೆ ಶಾರ್ಟ್ ಸರ್ಕ್ಯೂಟ್ ಆಗಿ ಎಸಿ ಸ್ಫೋಟಗೊಂಡಿರುವ ಶಂಕೆ ವ್ಯಕ್ತವಾಗುತ್ತಿದೆ.

ಮನೆಯಲ್ಲಿ ಬೆಂಕಿಯ ಹೊಗೆಯ ಆವರಿಸಿದ್ದು ನೋಡಿದ ಸ್ಥಳೀಯರು ಶಕ್ತಿನಗರದ ಪೊಲೀಸರಿಗೆ ಮಾಹಿತಿ ನೀಡಿದ್ರು. ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಮನೆಯಲ್ಲಿ ಉರಿಯುತ್ತಿದ್ದ ಬೆಂಕಿ ನಂದಿಸಿದ್ರು. ಅಷ್ಟರಲ್ಲಿ ಮನೆಯಲ್ಲಿ ಇದ್ದ ಮಹಿಳೆ ಮತ್ತು ಆಕೆಯ ಇಬ್ಬರು ಮಕ್ಕಳು ಸುಟ್ಟು ಕರಕಲಾಗಿದ್ದಾರೆ. ಸ್ಥಳಕ್ಕೆ ಡಿವೈಎಸ್ ಪಿ ಎಂ.ಜಿ.ಸತ್ಯನಾರಾಯಣ, ಸಿಪಿಐ ಪ್ರದೀಪ್ ತಳಕೇರಿ ಮತ್ತು ಪಿಎಸ್ಐ ಬಸವರಾಜ್ ಭೇಟಿ ನೀಡಿ ಪರಿಶೀಲಿಸಿ ಮೃತದೇಹಗಳನ್ನ ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ