ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಐಪಿಎಲ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ವಿರಾಟ್ ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿಸ್ !

Twitter
Facebook
LinkedIn
WhatsApp
272943115 1956603464521517 5362104813604894143 n 2

IPL 2023: ಹೈದರಾಬಾದ್​ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ವಿರಾಟ್ ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿಸ್ ಐಪಿಎಲ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಡುಪ್ಲೆಸಿಸ್ ಬೌಲಿಂಗ್ ಆಯ್ದುಕೊಂಡಿದ್ದರು.

ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ಪರ ಹೆನ್ರಿಕ್ ಕ್ಲಾಸೆನ್ ಕೇವಲ 51 ಎಸೆತಗಳಲ್ಲಿ 6 ಸಿಕ್ಸ್ ಹಾಗೂ 8 ಫೋರ್​ನೊಂದಿಗೆ ಸಿಡಿಲಬ್ಬರದ 104 ರನ್​ ಬಾರಿಸಿದ್ದರು. ಈ ಸ್ಪೋಟಕ ಶತಕದ ನೆರವಿನಿಂದ ಎಸ್​ಆರ್​ಹೆಚ್ ತಂಡವು 5 ವಿಕೆಟ್ ನಷ್ಟಕ್ಕೆ 186 ರನ್ ಕಲೆಹಾಕಿತು.
virat kohli and faf

187 ರನ್​ಗಳ ಬೃಹತ್ ಟಾರ್ಗೆಟ್ ಪಡೆದ ಆರ್​ಸಿಬಿಗೆ ವಿರಾಟ್ ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿಸ್ ಸ್ಪೋಟಕ ಆರಂಭ ಒದಗಿಸಿದ್ದರು. ಅದರಲ್ಲೂ ಮೊದಲ ಓವರ್​ನಿಂದಲೇ ಅಬ್ಬರಿಸಲಾರಂಭಿಸಿದ ಕೊಹ್ಲಿ ಮೈದಾನದ ಮೂಲೆ ಮೂಲೆಗೂ ಚೆಂಡನ್ನು ತಲುಪಿಸಿದರು.

ಅತ್ತ ಉತ್ತಮ ಸಾಥ್ ನೀಡಿದ ಡುಪ್ಲೆಸಿಸ್ ಕೂಡ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದರು. ಪರಿಣಾಮ 5ನೇ ಓವರ್​ನಲ್ಲೇ ಆರ್​ಸಿಬಿ ತಂಡದ ಮೊತ್ತ 50 ರ ಗಡಿದಾಟಿತು. ಅಲ್ಲದೆ ಪವರ್​ಪ್ಲೇ ಮುಕ್ತಾಯದ ವೇಳೆಗೆ ಬರೊಬ್ಬರಿ 64 ರನ್​ ಚಚ್ಚಿದರು.
ಈ ಅರ್ಧಶತಕದ ಜೊತೆಯಾಟದೊಂದಿಗೆ ಐಪಿಎಲ್​ನಲ್ಲಿ ಆರ್​ಸಿಬಿ ಪರ ಒಂದೇ ಸೀಸನ್​ನಲ್ಲಿ ಅತೀ ಹೆಚ್ಚು ಬಾರಿ ಅರ್ಧಶತಕದ ಜೊತೆಯಾಟವಾಡಿದ ಆರಂಭಿಕ ಜೋಡಿ ಎಂಬ ಹೊಸ ದಾಖಲೆಯೊಂದು ವಿರಾಟ್ ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿಸ್ ಪಾಲಾಗಿದೆ.
RCBvsMI1680459605052 1

ಕಿಂಗ್ ಕೊಹ್ಲಿ ಹಾಗೂ ಡೇಂಜರಸ್ ಡುಪ್ಲೆಸಿಸ್ ಈ ಬಾರಿಯ ಐಪಿಎಲ್​ನಲ್ಲಿ 7 ಬಾರಿ ಮೊದಲ ವಿಕೆಟ್​ಗೆ 50+ ರನ್​ಗಳ ಜೊತೆಯಾಟವಾಡಿದ್ದಾರೆ. ಈ ಮೂಲಕ ಐಪಿಎಲ್​ನ ಹಳೆಯ ದಾಖಲೆಯನ್ನು ಕೂಡ ಸರಿಗಟ್ಟಿದ್ದಾರೆ.

ಐಪಿಎಲ್​ನಲ್ಲಿ ಒಂದೇ ಸೀಸನ್​ನಲ್ಲಿ ಅತೀ ಹೆಚ್ಚು ಬಾರಿ 50+ ಸ್ಕೋರ್​ಗಳ ಜೊತೆಯಾಟವಾಡಿದ ಆರಂಭಿಕ ಜೋಡಿ ದಾಖಲೆ ಡೇವಿಡ್ ವಾರ್ನರ್ ಹಾಗೂ ಜಾನಿ ಬೈರ್​ಸ್ಟೋವ್ ಹೆಸರಿನಲ್ಲಿದೆ. 2019 ರಲ್ಲಿ ಎಸ್​ಆರ್​ಹೆಚ್ ಪರ ಆಡಿದ್ದ ಈ ಜೋಡಿಯು ಒಟ್ಟು 7 ಬಾರಿ 50+ ರನ್​ಗಳ ಜೊತೆಯಾಟವಾಡಿದ್ದರು.
ಇದೀಗ ಈ ದಾಖಲೆಯನ್ನು ವಿರಾಟ್ ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿಸ್ ಸರಿಗಟ್ಟಿದ್ದಾರೆ. ಅಲ್ಲದೆ ಮುಂದಿನ ಪಂದ್ಯದಲ್ಲಿ ಮತ್ತೊಂದು ಅರ್ಧಶತಕದ ಜೊತೆಯಾಟವಾಡಿದರೆ ಐಪಿಎಲ್​ನಲ್ಲಿ ಹೊಸ ದಾಖಲೆಯೊಂದು ನಿರ್ಮಾಣವಾಗಲಿದೆ.
kohli faf du plessis rcb 1681112710

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist