ಐಪಿಎಲ್‌ನಿಂದ ಹೊರಬಿದ್ರೂ ಪಂತ್‌ಗೆ ಸಿಗುತ್ತೆ ಬರೋಬ್ಬರಿ 16 ಕೋಟಿ ರುಪಾಯಿ!
Twitter
Facebook
LinkedIn
WhatsApp

ನವದೆಹಲಿ: ಕಾರು ಅಪಘಾತದಿಂದಾಗಿ ಮುಂಬೈನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಭಾರತೀಯ ಕ್ರಿಕೆಟಿಗ ರಿಷಭ್ ಪಂತ್ 16ನೇ ಆವೃತ್ತಿಯ ಐಪಿಎಲ್‌ಗೆ ಸಂಪೂರ್ಣ ಗೈರಾದರೂ ಅವರ 16 ಕೋಟಿ ರುಪಾಯಿ ವೇತನ ಪೂರ್ತಿ ಸಿಗಲಿದೆ. ಜೊತೆಗೆ ಬಿಸಿಸಿಐ ಕೇಂದ್ರ ಗುತ್ತಿಗೆಯ 5 ಕೋಟಿ ರುಪಾಯಿ ಮೊತ್ತವೂ ಪಂತ್ ಖಾತೆಗೆ ಜಮೆಯಾಗಲಿದೆ.

ಬಿಸಿಸಿಐ ಕೇಂದ್ರ ಗುತ್ತಿಗೆ ಪಟ್ಟಿಯಲ್ಲಿರುವ ಎಲ್ಲಾ ಆಟಗಾರರು ವಿಮೆ ವ್ಯಾಪ್ತಿಗೆ ಒಳಪಟ್ಟಿರುತ್ತಾರೆ. ಗಾಯದ ಕಾರಣದಿಂದ ಐಪಿಎಲ್‌ಗೆ ಗೈರಾದರೂ ಅವರಿಗೆ ಫ್ರಾಂಚೈಸಿ ಘೋಷಿಸಿರುವ ಪೂರ್ತಿ ವೇತನ ಸಿಗಲಿದೆ.

ಅದನ್ನು ವಿಮಾ ಕಂಪೆನಿಯೇ ಆಟಗಾರನಿಗೆ ಪಾವತಿಸಲಿದೆ. ಮತ್ತೊಂದೆಡೆ ಈಗಾಗಲೇ ಪಂತ್‌ರ ಚಿಕಿತ್ಸೆಯ ಸಂಪೂರ್ಣ ವೆಚ್ಚ ಭರಿಸುವುದಾಗಿ ತಿಳಿಸಿರುವ ಬಿಸಿಸಿಐ, ಕೇಂದ್ರ ಗುತ್ತಿಗೆಯ ಹಣವನ್ನೂ ಪಾವತಿಸಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.