ಮಂಗಳವಾರ, ಮೇ 14, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಒಂದೂವರೆ ವರ್ಷಗಳ ಬಳಿಕ ಶತಕ ಸಿಡಿಸಿ ದಾಖಲೆ ಬರೆದ ರೋಹಿತ್

Twitter
Facebook
LinkedIn
WhatsApp
ಇದು ಟೆಸ್ಟ್ ಕ್ರಿಕೆಟ್‌ನಲ್ಲಿ ರೋಹಿತ್ ಶರ್ಮಾ (Rohit Sharma) ಸಿಡಿಸಿದ 9ನೇ ಶತಕವಾಗಿದೆ. 2021 ಸೆಪ್ಟೆಂಬರ್‌ನಲ್ಲಿ ಟೆಸ್ಟ್ ಕ್ರಿಕೆಟ್‌ನ 8ನೇ ಶತಕ ಸಿಡಿಸಿದ್ದರು.

ನಾಗ್ಪುರ: ಆಸ್ಟ್ರೇಲಿಯಾ (Australia) ವಿರುದ್ಧ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಅದ್ಭುತ ಬ್ಯಾಟಿಂಗ್ ಶೈಲಿ ಮುಂದುವರಿಸಿದ ಟೀಂ ಇಂಡಿಯಾ (Team India) ನಾಯಕ ರೋಹಿತ್ ಶರ್ಮಾ (Rohit Sharma), ಒಂದೂವರೆ ವರ್ಷಗಳ ಬಳಿಕ ಟೆಸ್ಟ್ ಕ್ರಿಕೆಟ್‌ನಲ್ಲಿ (Test Cricket) ಶತಕ ಸಿಡಿಸಿದ್ದಾರೆ.

ಇದು ಟೆಸ್ಟ್ ಕ್ರಿಕೆಟ್‌ನಲ್ಲಿ ರೋಹಿತ್ ಶರ್ಮಾ (Rohit Sharma) ಸಿಡಿಸಿದ 9ನೇ ಶತಕವಾಗಿದೆ. 2021 ಸೆಪ್ಟೆಂಬರ್‌ನಲ್ಲಿ ಟೆಸ್ಟ್ ಕ್ರಿಕೆಟ್‌ನ 8ನೇ ಶತಕ ಸಿಡಿಸಿದ್ದರು. ಈಗ ಏಕದಿನ, ಟಿ20, ಟೆಸ್ಟ್ ಮೂರು ಮಾದರಿಯಲ್ಲಿ ಶತಕ ಸಿಡಿಸಿದ ಟೀಂ ಇಂಡಿಯಾದ ಮೊದಲ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 

ಇಲ್ಲಿನ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡ 63.5 ಓವರ್‌ಗಳಲ್ಲಿ 177 ರನ್‌ಗಳಿಗೆ ಸರ್ವಪತನ ಕಂಡಿತು. ಬಳಿಕ ಇನಿಂಗ್ಸ್ ಆರಂಭಿಸಿದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಹಾಗೂ ಕೆ.ಎಲ್ ರಾಹುಲ್ ಜೋಡಿ ಮೊದಲ ವಿಕೆಟ್‌ಗೆ 74 ರನ್ ಗಳಿಸಿ ತಂಡಕ್ಕೆ ಉತ್ತಮ ಆರಂಭ ನೀಡಿತ್ತು. ಆದರೆ 20 ರನ್ ಗಳಿಸಿ ಕೆ.ಎಲ್ ರಾಹುಲ್ ವಿಕೆಟ್ ಒಪ್ಪಿಸಿದರು. ಬಳಿಕ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶನ ತೋರಿದ ರೋಹಿತ್ ಶರ್ಮಾ ಮೊದಲನೇ ದಿನದಾಟದ ಅಂತ್ಯಕ್ಕೆ ಏಕದಿನ ಶೈಲಿಯಲ್ಲಿ ಬ್ಯಾಟಿಂಗ್ ಮಾಡಿ ಅಜೇಯ 59 ರನ್ ಸಿಡಿಸಿದ್ದರು.

ಶುಕ್ರವಾರ ಕ್ರೀಸ್‌ಗೆ ಬಂದ ರೋಹಿತ್ ಶರ್ಮಾ ಅದೇ ಬ್ಯಾಟಿಂಗ್ ಲಯ ಮುಂದುರಿಸಿದರು. ನಂತರದಲ್ಲಿ ಕಣಕ್ಕಿಳಿದ ಆರ್.ಅಶ್ವಿನ್ 23 ರನ್ ಹಾಗೂ ಚೇತೇಶ್ವರ್ ಪೂಜಾರ 7 ರನ್, ವಿರಾಟ್ ಕೊಹ್ಲಿ 12 ರನ್, ಸೂರ್ಯಕುಮಾರ್ ಯಾದವ್ 8 ರನ್ ಗಳಿಸಿ ಔಟಾದರು. ನಂತರ ರೋಹಿತ್ ಶರ್ಮಾ 212 ಎಸೆತಗಳಲ್ಲಿ 120 ರನ್ (15 ಬೌಂಡರಿ, 2 ಸಿಕ್ಸರ್‌) ಗಳಿಸಿ ಔಟಾದರು. 

ನಂ.1 ಕ್ಯಾಪ್ಟನ್: 67 ಓವರ್‌ಗಳ ಅಂತ್ಯಕ್ಕೆ 179 ಎಸೆತಗಳಲ್ಲಿ ಎದುರಿಸಿದ್ದ ರೋಹಿತ್ ಶರ್ಮಾ 2 ಸಿಕ್ಸರ್, 14 ಬೌಂಡರಿಗಳೊಂದಿಗೆ ಅಜೇಯ 104 ರನ್ ಸಿಡಿಸಿದರು. ಆ ಮೂಲಕ ಎಲ್ಲಾ ಮಾದರಿಯ ಕ್ರಿಕೆಟ್‌ನಲ್ಲಿ ಶತಕ ಸಿಡಿಸಿದ ಭಾರತ ತಂಡದ ಮೊದಲ ನಾಯಕ ಎಂಬ ಕೀರ್ತಿಗೆ ರೋಹಿತ್ ಶರ್ಮಾ ಭಾಜನರಾಗಿದ್ದಾರೆ.

ಇತ್ತೀಚೆಗೆ ರೋಹಿತ್ ಶರ್ಮಾ ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಏಕದಿನ ಕ್ರಿಕೆಟ್‌ನ 30ನೇ ಶತಕ ಸಿಡಿಸಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ