ಮಂಗಳವಾರ, ಮೇ 14, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಒಲಿಂಪಿಕ್​ನಲ್ಲಿ ಆರ್ಚರಿಯಲ್ಲಿ ದಕ್ಷಿಣ ಕೊರಿಯಾದ ವಿರುದ್ಧ ಭಾರತಕ್ಕೆ ಸೋಲು.

Twitter
Facebook
LinkedIn
WhatsApp
ಒಲಿಂಪಿಕ್​ನಲ್ಲಿ ಆರ್ಚರಿಯಲ್ಲಿ ದಕ್ಷಿಣ ಕೊರಿಯಾದ ವಿರುದ್ಧ ಭಾರತಕ್ಕೆ ಸೋಲು.

ಆರ್ಚರಿಯಲ್ಲಿ ಕ್ವಾರ್ಟರ್ ಫೈನಲ್ ತಲುಪಿದ್ದ ಭಾರತದ ಅತನು ದಾಸ್, ಪ್ರವೀಣ್ ಜಾಧವ್ ಮತ್ತು ತರುಣ್ ದೀಪ್ ರೈ ದಕ್ಷಿಣ ಕೊರಿಯಾ ವಿರುದ್ಧ ಸೋಲುಕಂಡು ಪದಕದ ನಿರೀಕ್ಷೆಯನ್ನು ಹುಸಿ ಮಾಡಿದ್ದಾರೆ. ಇಂದು ಮುಂಜಾನೆ ಭಾರತದ ತ್ರಿಮೂರ್ತಿಗಳಾದ ಅತನು ದಾಸ್, ಪ್ರವೀಣ್ ಜಾಧವ್ ಮತ್ತು ತರುಣ್ ದೀಪ್ ರೈ ಕಜಕಿಸ್ತಾನದ ವಿರುದ್ಧ 6-2 ಅಂತರದಿಂದ ಜಯಭೇರಿ ಬಾರಿಸಿ ಕ್ವಾರ್ಟರ್ ಫೈನಲ್​ಗೆ ಲಗ್ಗೆಯಿಟ್ಟಿದ್ದರು. ಇವರಿಂದ ಪದಕದ ನಿರೀಕ್ಷೆಯಿತ್ತು.

ಆದರೆ, ಕ್ವಾರ್ಟರ್ ಫೈನಲ್​ನಲ್ಲಿ ದಕ್ಷಿಣ ಕೊರಿಯಾದ ಕಿಮ್ ವೂಜಿನ್, ಕಿಮ್ ಜೆ ಡೊಕ್ ಮತ್ತು ಒ ಜಿನ್ಹೆಕ್ ವಿರುದ್ಧ 0-6 ಅಂತರದಲ್ಲಿ ಹೀನಾಯ ಸೋಲು ಕಂಡರು. ದ. ಕೊರಿಯಾ ಸೆಮಿ ಫೈನಲ್​ಗೆ ಪ್ರವೇಶ ಪಡೆದಿದೆ.

ಇನ್ನೂ ಭಾರತದ ಸುತೀರ್ಥಾ ಮುಖರ್ಜಿ ಟೇಬಲ್ ಟೆನಿಸ್ ಎರಡನೇ ಸುತ್ತಿನಲ್ಲಿಯೇ ಸೋತು ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟದಿಂದ ಹೊರಬಿದ್ದಿದ್ದಾರೆ.
ಸ್ವೀಡನ್‌ನ ಆಟಗಾರ್ತಿ ಲಿಂಡಾ ಬರ್ಗ್ ಸ್ಟಾರ್ಮ್ ವಿರುದ್ಧ ರೋಚಕ ಜಯ ಗಳಿಸಿದ್ದ ಸುತೀರ್ಥ ಮುಖರ್ಜಿ ಭರವಸೆಯನ್ನು ಹುಟ್ಟುಹಾಕಿದ್ದರು.

ಆದರೆ, ಸುತೀರ್ಥಾ ಮುಖರ್ಜಿ ಎರಡನೇ ಸುತ್ತಿನಲ್ಲಿ ಮುಗ್ಗರಿಸಿದ್ದಾರೆ. ಪೋರ್ಚುಗಲ್ ದೇಶದ ಆಟಗಾರ್ತಿ ಫು ಯು ವಿರುದ್ಧ ಟೊಕಿಯೊ ಒಲಿಂಪಿಕ್ಸ್ ಮಹಿಳಾ ಸಿಂಗಲ್ಸ್ ಟೇಬಲ್ ಟೆನಿಸ್ ಎರಡನೇ ಸುತ್ತಿನಲ್ಲಿ ಭಾರತದ ಸುತೀರ್ಥಾ ಮುಖರ್ಜಿ 0-4 ಅಂತರದಿಂದ ಸೋಲುವುದರ ಮೂಲಕ ಒಲಿಂಪಿಕ್ಸ್‌ನಿಂದ ಹೊರಬಿದ್ದಿದ್ದಾರೆ.

ಇತ್ತ ಚೊಚ್ಚಲ ಬಾರಿಯ ಒಲಿಂಪಿಕ್​ನಲ್ಲಿ ಭವಾನಿ ದೇವಿ ಸೇಬರ್ ಫೆನ್ಸಿಂಗ್‍ನಲ್ಲಿ ತುನಿಶಿಯಾ ದೇಶದ ನಡಿಯ ಅಝೀಝಿ ಅವರನ್ನು 15-3 ಅಂತರದಿಂದ ಸೋಲಿಸುವುದರ ಮೂಲಕ ಪದಕದ ಭರವಸೆ ಮೂಡಿಸಿದ್ದರು. ಆದರೆ ಎರಡನೇ ಸುತ್ತಿನಲ್ಲಿ ಸೇಬರ್ ಫೆನ್ಸಿಂಗ್‍ನ ವಿಶ್ವದ ನಂ. 3 ಆಟಗಾರ್ತಿ ಮ್ಯಾನೊನ್ ಬ್ರುನೆಟ್ ವಿರುದ್ಧ 7-15 ಅಂತರದಲ್ಲಿ ಸೋಲು ಕಂಡಿದ್ದಾರೆ. ಈ ಮೂಲಕ ಟೋಕಿಯೋ ಒಲಿಂಪಿಕ್ಸ್‌ನಿಂದ ಹೊರಬಿದ್ದಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು