ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕಂಗನಾಗೆ ಕಪಾಳಮೋಕ್ಷ ಮಾಡಿದ್ದ ಕುಲ್ವಿಂದರ್‌ ಕೌರ್‌ ಅರೆಸ್ಟ್‌

Twitter
Facebook
LinkedIn
WhatsApp
ಕಂಗನಾಗೆ ಕಪಾಳಮೋಕ್ಷ ಮಾಡಿದ್ದ ಕುಲ್ವಿಂದರ್‌ ಕೌರ್‌ ಅರೆಸ್ಟ್‌

ನವದೆಹಲಿ: ಲೋಕಸಭಾ ಚುನಾವಣೆ(Lok Sabha Election 2024)ಯಲ್ಲಿ ಹಿಮಾಚಲಪ್ರದೇಶದ ಮಂಡಿಯಿಂದ ಸಂಸದರಾಗಿ ಆಯ್ಕೆಯಾದ ಕಂಗನಾ ರಣಾವತ್​ (Kangana Ranaut)ಗೆ ಕಪಾಳಮೋಕ್ಷ ಮಾಡಿದ್ದ ಕಾನ್‌ಸ್ಟೇಬಲ್‌ ಕುಲ್ವಿಂದರ್‌ ಕೌರ್‌ರನ್ನು ಅರೆಸ್ಟ್‌ ಮಾಡಲಾಗಿದೆ. ಚಂಡೀಗಢ ವಿಮಾನ ನಿಲ್ದಾಣದಲ್ಲಿ ಗುರುವಾರ ಕಂಗನಾ ಮೇಲೆ CISF ಸಿಬ್ಬಂದಿ ಕೌರ್‌ ಹಲ್ಲೆ ನಡೆಸಿದ್ದರು. ಇದಾದ ಬಳಿಕ ಆಕೆಯನ್ನು ಕೆಲಸದಿಂದ ವಜಾಗೊಳಿಸಲಾಗಿತ್ತು.

ನಿನ್ನೆ ಚಂಢೀಗಡದಿಂದ ದಿಲ್ಲಿಗೆ ವಿಮಾನ ಹತ್ತುವ ವೇಳೆ ಈ ಘಟನೆ ನಡೆದಿದ್ದು, ಇನ್ನು ಕೌರ್‌ ವಿರುದ್ಧ ಕೇಸ್‌ ದಾಖಲಿಸಲಾಗಿದೆ. ಈ ನಿಟ್ಟಿನಲ್ಲಿ ಆಕೆಯನ್ನು ಅರೆಸ್ಟ್‌ ಮಾಡಲಾಗಿದೆ. ನರೇಂದ್ರ ಮೋದಿ ಸರ್ಕಾರವು ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ಮೂರು ಕಾನೂನುಗಳನ್ನ ಜಾರಿಗೆ ತರಲು ಮುಂದಾದಾಗ ಅದರ ವಿರುದ್ಧ ಆಂದೋಲನ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ‘ಖಲಿಸ್ತಾನಿ ಬೆಂಬಲಿಗರು’ ಎಂದು ಒಂದು ಗುಂಪು ಕರೆದಿತ್ತು. ಈ ವಿವಾದಕ್ಕೆ ಈಡಾದಾಗ ಕಂಗಾನಾ ಆ ಗಾಯಕ್ಕೆ ಉಪ್ಪು ಸವರುವಂಥ ಹೇಳಿಕೆ ನೀಡಿದ್ದರು.

2020 ರಲ್ಲಿ, ಕಂಗನಾ ರನೌತ್ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದ ಪಂಜಾಬ್​ನ ಮಹಿಳೆಯೊಬ್ಬರನ್ನು ತಪ್ಪಾಗಿ ಅಂದಾಜಿಸಿದ್ದರು. ಅದಕ್ಕಿಂತ ಹಿಂದೆ ಶಾಹೀನ್ ಬಾಗ್​ನಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾನೂನು (ಸಿಎಎ) ವಿರೋಧಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಬಿಲ್ಕಿಸ್ ಬಾನೊ ಅವರು ಎಂದುಕೊಂಡಿದ್ದರು. ಪ್ರತಿಭಟನೆಗೆ ಬರುವ ಮಹಿಳೆಯರೆಲ್ಲರೂ 100 ರೂಪಾಯಿಗೆ ಸಿಗುತ್ತಾರೆ ಎಂದು ಹೇಳಿದ್ದರು. ಇದು ದೊಡ್ಡ ವಿವಾದ ಸೃಷ್ಟಿಸಿತ್ತು. ಅಂದ ಹಾಗೆ ಕಂಗನಾಗೆ ಹೊಡೆದ ಕಾನ್​ಸ್ಟೇಬಲ್​ ಕುಲ್ವಿಂದರ್ ಕೌರ್​ ತಾಯಿಯೂ ಆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಕಂಗನಾ ಹೇಳಿಕೆಯಿಂದ ಕೋಪಗೊಂಡಿದ್ದ ಅವರು ಪ್ರತಿಕಾರ ತೀರಿಸಲು ಕಾದಿದ್ದರು. ಅಂತೆಯೇ ಚಂಡಿಗಢದಲ್ಲಿ ತಪಾಸಣಾ ಕೇಂದ್ರಕ್ಕೆ ಬರುತ್ತಿದ್ದಂತೆ ಕಪಾಳ ಮೋಕ್ಷ ಮಾಡಿದ್ದಾರೆ.

 
 

100 ರೂಪಾಯಿಗೆ ಸಿಗುವ ಮಹಿಳೆಯರು ಎಂದು ಕಂಗನಾ ಕೊಟ್ಟಿರುವ ಹೇಳಿಕೆಯು ಎಕ್ಸ್ ನಲ್ಲಿ(ಟ್ವಿಟರ್​) ಕಂಗನಾ ಮತ್ತು ಗಾಯಕ-ನಟ ದಿಲ್ಜೀತ್ ದೋಸಾಂಜ್ ನಡುವೆ ಗಲಾಟೆಗೆ ಕಾರಣವಾಗಿತ್ತು. ಫೆಬ್ರವರಿ 2021 ರಲ್ಲಿ, ಅಂತರರಾಷ್ಟ್ರೀಯ ಪಾಪ್ ಸೆನ್ಸೇಷನ್ ರಿಹಾನ್ನಾ ಅವರು ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ್ದ ಕಂಗನಾ ರನೌತ್ ಪ್ರತಿಭಟನಾಕಾರರನ್ನು “ಭಯೋತ್ಪಾದಕರು” ಎಂದು ಕರೆದಿದ್ದರು ಮತ್ತು ಅವರು ಭಾರತವನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದರು.

ಕಂಗನಾಗೆ ಕಪಾಳಮೋಕ್ಷ ಮಾಡಿದ ಸಿಐಎಸ್ಎಫ್ ಸಿಬ್ಬಂದಿ ರೈತರ ಚಳವಳಿ ಕುರಿತು ನೀಡಿದ್ದ ಹೇಳಿಕೆಯಿಂದ ನನಗೆ ನೋವಾಗಿತ್ತು ಎಂದು ವಿಚಾರಣೆ ವೇಳೆ ಹೇಳಿದ್ದಾರೆ. ಕಂಗನಾ ರನೌತ್ ಹಿಮಾಚಲ ಪ್ರದೇಶದ ಮಂಡಿಯಿಂದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಸ್ಪರ್ಧಿಸಿದ್ದರು. ನಟಿಯ ಮುಂದೆ ಕಾಂಗ್ರೆಸ್ ಪಕ್ಷದ ನಾಯಕ ವಿಕ್ರಮಾದಿತ್ಯ ಸಿಂಗ್ ಇದ್ದರು. ಕಂಗನಾ ಅವರನ್ನು 74,755 ಮತಗಳಿಂದ ಸೋಲಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist