ಉತ್ತರಕಾಶಿ(ಉತ್ತರಾಖಂಡ್), ಜೂನ್ 5: ಚಾರ್ ಧಾಮ್ ಯಾತ್ರೆಗೆ ತೆರಳುತ್ತಿದ್ದ ಪ್ರಯಾಣಿಕರು ದುರಂತ ಅಂತ್ಯ ಕಂಡಿದ್ದಾರೆ. ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ದಮ್ತಾ ಬಳಿ ಯಾತ್ರಾರ್ಥಿಗಳನ್ನು ಹೊಂದಿದ್ದ ಬಸ್ ಕಮರಿಯೊಂದಕ್ಕೆ ಬಿದ್ದಿದೆ. ಈ ಬಸ್ ನಲ್ಲಿದ್ದ ಸುಮಾರು 28 ಪೈಕಿ 22 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ.
ಈ ದುರ್ಘಟನೆಯಲ್ಲಿ ಆರು ಜನರು ಗಾಯಗೊಂಡಿದ್ದಾರೆ, ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.ಮಧ್ಯಪ್ರದೇಶದ ಪನ್ನಾ ಜಿಲ್ಲೆಯಿಂದ ಚಾರ್ ಧಾಮ್ ಯಾತ್ರೆಗೆ ತೆರಳುತ್ತಿದ್ದ ಬಸ್ ಇದಾಗಿತ್ತು. ಪನ್ನಾದಿಂದ ಯಮುನೋತ್ರಿಗೆ 28 ಪ್ರಯಾಣಿಕರು ತೆರಳುತ್ತಿದ್ದರು ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಉತ್ತರಕಾಶಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಭಿಷೇಕ್ ರುಹೇಲಾ ಸೇರಿದಂತೆ ಹಿರಿಯ ಅಧಿಕಾರಿಗಳು ದೌಡಾಯಿಸಿದ್ದಾರೆ.
ಈ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಘಟನೆ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ. ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರೊಂದಿಗೆ ಘಟನೆ ಬಗ್ಗೆ ಮಾತನಾಡಿರುವುದಾಗಿ ಹೇಳಿದ್ದಾರೆ. “ಸ್ಥಳೀಯ ಅಡ್ಮಿನ್ ಮತ್ತು ಎಸ್ಡಿಆರ್ಎಫ್ ತಂಡಗಳು ರಕ್ಷಣಾ ಕಾರ್ಯದಲ್ಲಿ ತೊಡಗಿವೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದೆ. ಎನ್ಡಿಆರ್ಎಫ್ ಶೀಘ್ರದಲ್ಲೇ ತಲುಪಲಿದೆ” ಎಂದು ಟ್ವೀಟ್ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.
ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ
ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.! Twitter Facebook LinkedIn WhatsApp ಮಂಗಳೂರು: ಕಾರು ಚಾಲಕನ ನಿರ್ಲಕ್ಷದ ಚಾಲನೆಗೆ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?