ಕಂದಕಕ್ಕೆ ಬಿದ್ದ ಬಸ್ 7 ಮಂದಿ ಮೃತ್ಯು, 25ಕ್ಕೂ ಹೆಚ್ಚು ಮಂದಿಗೆ ಗಾಯ
ಮಹಾರಾಷ್ಟ್ರ: ಖಾಸಗಿ ಬಸ್ಸೊಂದು ಕಂದಕಕ್ಕೆ ಬಿದ್ದ ಪರಿಣಾಮ ಕನಿಷ್ಠ 7 ಜನರು ಸಾವನ್ನಪ್ಪಿದ್ದು 25ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ದುರ್ಘಟನೆ ರಾಯಗಢದ ಪುಣೆ-ಮುಂಬಯಿ ಹೆದ್ದಾರಿಯಲ್ಲಿ ಶನಿವಾರ (ಎ.15)ಬೆಳಗ್ಗೆ ನಡೆದಿದೆ.
ಬಸ್ ನಲ್ಲಿ 41 ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.ಸದ್ಯ ರಕ್ಷಣಾ ಕಾರ್ಯಚರಣೆ ನಡೆಯುತ್ತಿದೆ.
Maharashtra| 7 people died & more than 25 injured after a bus fell into a ditch in Raigad's Khopoli area. Rescue operations underway: Raigad SP pic.twitter.com/kneqn5M4A5
— ANI (@ANI) April 15, 2023
ಅಪಘಾತದ ಬಗ್ಗೆ ಮಾಹಿತಿ ಪಡೆದ ಕೂಡಲೇ ಪೊಲೀಸರು ಮತ್ತು ರಕ್ಷಣಾ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ.
ರಾಯಗಡ ಎಸ್ಪಿ ಸೋಮನಾಥ್ ಘರ್ಗೆ ಈ ಘಟನೆಯ ಬಗ್ಗೆ ಪ್ರತಿಕ್ರಿಯೆಸಿದ್ದು, ರಾಯಗಢದ ಖೋಪೋಲಿ ಪ್ರದೇಶದಲ್ಲಿ ಬಸ್ ಕಂದಕಕ್ಕೆ ಬಿದ್ದ ಪರಿಣಾಮ 7 ಜನರು ಸಾವನ್ನಪ್ಪಿದ್ದಾರೆ ಮತ್ತು 25 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ .ರಕ್ಷಣಾ ಕಾರ್ಯಚರಣೆ ನಡೆಯುತ್ತಿದೆ ಎಂದು ಹೇಳಿದ್ದಾರೆ.
ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕ್ಸಿತೆ ನೀಡಲಾಗುತ್ತಿದೆ.
ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ…