ಸೋಮವಾರ, ಮೇ 13, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಟ್ಟಡ ನಿರ್ಮಾಣದ ವಿಚಾರದಲ್ಲಿ ರಾಜಕೀಯ ದುರುದ್ದೇಶದ ಆರೋಪ : ಕುಂದಚೇರಿ ಗ್ರಾ.ಪಂ ಅಸಮಾಧಾನ

Twitter
Facebook
LinkedIn
WhatsApp
ಕಟ್ಟಡ ನಿರ್ಮಾಣದ ವಿಚಾರದಲ್ಲಿ ರಾಜಕೀಯ ದುರುದ್ದೇಶದ ಆರೋಪ : ಕುಂದಚೇರಿ ಗ್ರಾ.ಪಂ ಅಸಮಾಧಾನ

ಮಡಿಕೇರಿ:ಕುಂದಚೇರಿ ಗ್ರಾ.ಪಂ ನೂತನ ಕಟ್ಟಡವನ್ನು ನಿರ್ಮಿಸಲು ಯೋಜನೆಯನ್ನು ರೂಪಿಸಿದ್ದು, ಇದಕ್ಕೆ ಗ್ರಾಮಸಭೆಯಲ್ಲಿ ಅನುಮೋದನೆ ಪಡೆಯಲಾಗಿದೆ. ಆದರೆ ಕೆಲವರು ರಾಜಕೀಯ ದುರುದ್ದೇಶದಿಂದ ಕಟ್ಟಡ ನಿರ್ಮಾಣದ ಕುರಿತು ಇಲ್ಲಸಲ್ಲದ ಆರೋಪ ಮಾಡಿದ್ದಾರೆ ಎಂದು ಗ್ರಾ.ಪಂ ಅಧ್ಯಕ್ಷೆ ಸಿ.ಯು.ಸವಿತ ಹಾಗೂ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಚುನಾವಣೆಯಲ್ಲಿ ಹಲವು ಬಾರಿ ಸೋತಿರುವ ನಾಲ್ವರು ಜನಪರವಾದ ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದಾರೆ, ಇವರುಗಳ ಆರೋಪ ದುರುದ್ದೇಶಪೂರಿತವೆಂದು ತಿಳಿಸಿದರು.

ಸುಮಾರು 42 ವರ್ಷಗಳ ಹಿಂದಿನ ಕಟ್ಟಡ ಶಿಥಿಲಾವಸ್ಥೆಯಲ್ಲಿದೆ, ನೂತನ ಕಟ್ಟಡ ನಿರ್ಮಾಣಕ್ಕೆ ವಿವಿಧ ಹಣಕಾಸು ಕ್ರಿಯಾ ಯೋಜನೆಯಡಿ 34.62 ಲಕ್ಷ ರೂ. ಲಭ್ಯವಿದೆ. ಕಟ್ಟಡ ಕಾಮಗಾರಿಗೆ ಸಂಬoಧಿಸಿದoತೆ ಹಲವು ಇಲಾಖೆಗಳ ಅನುಮತಿ ಪಡೆಯಲಾಗಿದೆ ಮತ್ತು ಹಿರಿಯ ಅಧಿಕಾರಿಗಳ ಗಮನಕ್ಕೂ ತರಲಾಗಿದೆ. ಅಂದಾಜು ಪಟ್ಟಿಯನ್ನು ಕೂಡ ತಯಾರಿಸಲಾಗಿದ್ದು, ಕಟ್ಟಡ ನಿರ್ಮಾಣ ಕಾರ್ಯ ಕಾನೂನುಬದ್ಧವಾಗಿ ನಡೆಯಲಿದೆ ಎಂದು ಸ್ಪಷ್ಟಪಡಿಸಿದರು. ರಾಜಕೀಯ ದುರುದ್ದೇಶದ ಹೇಳಿಕೆಗಳನ್ನು ನೀಡುವುದನ್ನು ಬಿಟ್ಟು ಗ್ರಾಮದ ಅಭಿವೃದ್ಧಿಗೆ ಸಹಕಾರ ನೀಡಲಿ ಎಂದರು.
ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ಕೆ.ವಿ.ಪ್ರವೀಣ್ ಕುಮಾರ್ (ವಿಶು), ಸದಸ್ಯರುಗಳಾದ ಕೆ.ಯು.ಹ್ಯಾರಿಸ್, ಪಿ.ಬಿ.ದಿನೇಶ್ ಹಾಗೂ ಬೇಬಿ ಪೊನ್ನಪ್ಪ ಉಪಸ್ಥಿತರಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು