ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕಡಿಮೆ ಬೆಲೆಯ ಗೂಗಲ್- ಜಿಯೋ ಸ್ಮಾರ್ಟ್ ಫೋನ್ ಸೆಪ್ಟೆಂಬರ್ ನಲ್ಲಿ ಬಿಡುಗಡೆ ಮಾಡುವುದಾಗಿ ಘೋಷಿಸಿದ ಮುಕೇಶ್ ಅಂಬಾನಿ.

Twitter
Facebook
LinkedIn
WhatsApp
ಕಡಿಮೆ ಬೆಲೆಯ ಗೂಗಲ್- ಜಿಯೋ ಸ್ಮಾರ್ಟ್ ಫೋನ್ ಸೆಪ್ಟೆಂಬರ್ ನಲ್ಲಿ ಬಿಡುಗಡೆ ಮಾಡುವುದಾಗಿ ಘೋಷಿಸಿದ ಮುಕೇಶ್ ಅಂಬಾನಿ.

ಮುಂಬೈ:ಕೋವಿಡ್ ಸಂಕಷ್ಟದ ನಡುವೆಯೂ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಉತ್ತಮ ನಿರ್ವಹಣೆ ಪ್ರದರ್ಶಿಸಿದ್ದು, ಕಳೆದ ವರ್ಷದಲ್ಲಿ 540,000 ಕೋಟಿ ರೂ.ಗಳ ಒಟ್ಟು ಆದಾಯ ಗಳಿಸಿದೆ. ಬಡ್ಡಿ, ತೆರಿಗೆ, ಡಿಪ್ರಿಸಿಯೇಶನ್ ಹಾಗೂ ಅಮಾರ್ಟೈಸೇಶನ್‌ಗಳ ಮೊದಲಿನ ಆದಾಯವು (EBITDA) ಸುಮಾರು 98,000 ಕೋಟಿ ರೂ.ಗಳಷ್ಟಿದ್ದು, ಈ ಪೈಕಿ ಸುಮಾರು ಅರ್ಧದಷ್ಟು ಗ್ರಾಹಕ ವಹಿವಾಟುಗಳಿಂದಲೇ ಬಂದಿದೆ ಎಂದು ರಿಲಯನ್ಸ್ ಇಂಡಸ್ಟ್ರೀಸ್‌ನ ಮುಖ್ಯಸ್ಥ ಮುಖೇಶ್ ಅಂಬಾನಿ ತಿಳಿಸಿದ್ದಾರೆ. ಇಂದು ನಡೆದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ ಕಳೆದ ವರ್ಷದಲ್ಲಿ 53,739 ಕೋಟಿ ರೂ.ಗಳ ನಿವ್ವಳ ಲಾಭ ಗಳಿಸಿದೆ. ಇದು ಹಿಂದಿನ ವರ್ಷಕ್ಕಿಂತ ಶೇ. 34.8ರಷ್ಟು ಹೆಚ್ಚಾಗಿದೆ ಎಂದು ತಿಳಿಸಿದ್ದಾರೆ.

ಸೌದಿ ಅರಾಮ್‌ಕೋ ಹಾಗೂ ಪಬ್ಲಿಕ್ ಇನ್‌ವೆಸ್ಟ್‌ಮೆಂಟ್ ಫಂಡ್‌ನ ಮುಖ್ಯಸ್ಥ ಯಾಸಿರ್ ಅಲ್-ರುಮಯ್ಯನ್, ಸ್ವತಂತ್ರ ನಿರ್ದೇಶಕರಾಗಿ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ನಿರ್ದೇಶಕ ಮಂಡಲಿಯನ್ನು ಸೇರಲಿದ್ದಾರೆ ಎಂದು ಮುಖೇಶ್ ಅಂಬಾನಿ ಇದೇ ಸಂದರ್ಭದಲ್ಲಿ ತಿಳಿಸಿದ್ದು, ನಿರ್ದೇಶಕ ಮಂಡಲಿಗೆ ಅವರ ಸೇರ್ಪಡೆ, ರಿಲಯನ್ಸ್‌ನ ಅಂತಾರಾಷ್ಟ್ರೀಕರಣದ ಪ್ರಾರಂಭದ ದ್ಯೋತಕವೂ ಆಗಿದೆ ಎಂದು ಹೇಳಿದ್ದಾರೆ.

ಗಣೇಶ ಚತುರ್ಥಿಗೆ ‘ಜಿಯೋಫೋನ್ ನೆಕ್ಸ್ಟ್: ಅತ್ಯಂತ ಕಡಿಮೆ ಬೆಲೆಯಲ್ಲಿ ಅತ್ಯುತ್ತಮ ಗುಣಮಟ್ಟದ 4G ಬ್ರಾಡ್‌ಬ್ಯಾಂಡ್ ಸೇವೆಗಳನ್ನು ಒದಗಿಸುವ ಮೂಲಕ ಭಾರತದಲ್ಲಿ ಡಿಜಿಟಲ್ ಸಂಪರ್ಕ ಕ್ರಾಂತಿಯನ್ನೇ ಉಂಟುಮಾಡಿರುವ ಜಿಯೋ, ಇದೀಗ ಭಾರತವನ್ನು ‘2G-ಮುಕ್ತ’ವಾಗಿಸುವ ಉದ್ದೇಶದೊಂದಿಗೆ ಕೈಗೆಟುಕುವ ಬೆಲೆಯ 4G ಸ್ಮಾರ್ಟ್‌ಫೋನ್ ಅನ್ನು ಪರಿಚಯಿಸುತ್ತಿದೆ. ‘ಜಿಯೋಫೋನ್ ನೆಕ್ಸ್ಟ್’ ಎಂಬ ಹೆಸರಿನ ಈ ಆಂಡ್ರಾಯ್ಡ್ ಸ್ಮಾರ್ಟ್‌ಫೋನ್ ಅನ್ನು ಜಿಯೋ ಹಾಗೂ ಗೂಗಲ್ ತಂಡಗಳು ಜಂಟಿಯಾಗಿ ಅಭಿವೃದ್ಧಿಪಡಿಸಿದ್ದು, ಸೆಪ್ಟೆಂಬರ್ 10ರ ಗಣೇಶ ಚತುರ್ಥಿಯ ದಿನದಿಂದ ಅದು ಮಾರುಕಟ್ಟೆಯಲ್ಲಿ ಲಭ್ಯವಾಗಲಿದೆ. ವಾಯ್ಸ್ ಅಸಿಸ್ಟೆಂಟ್, ಪರದೆಯ ಮೇಲಿನ ಪಠ್ಯವನ್ನು ಓದಿ ಹೇಳುವ ಸೌಲಭ್ಯ, ಅನುವಾದ ಸೌಲಭ್ಯ, ಆಗ್ಮೆಂಟೆಡ್ ರಿಯಾಲಿಟಿ ಫಿಲ್ಟರ್‌ಗಳಿರುವ ಸ್ಮಾರ್ಟ್ ಕ್ಯಾಮೆರಾ ಸೇರಿದಂತೆ ಈ ಸ್ಮಾರ್ಟ್‌ಫೋನಿನಲ್ಲಿ ಅನೇಕ ವಿಶಿಷ್ಟ ಸೌಲಭ್ಯಗಳಿರಲಿದ್ದು, ಗೂಗಲ್ ಹಾಗೂ ಜಿಯೋ ಆಪ್‌ಗಳಷ್ಟೇ ಅಲ್ಲದೆ ಆಂಡ್ರಾಯ್ಡ್ ಪ್ಲೇ ಸ್ಟೋರ್‌ನಲ್ಲಿರುವ ಆಪ್‌ಗಳನ್ನೂ ಬಳಸುವುದು ಸಾಧ್ಯವಾಗಲಿದೆ. ಇದು ಭಾರತದಲ್ಲಿ ಮಾತ್ರವೇ ಅಲ್ಲದೆ ಇಡೀ ವಿಶ್ವದಲ್ಲೇ ಅತ್ಯಂತ ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್ ಆಗಿರಲಿದೆ ಎಂದು ಮುಖೇಶ್ ಅಂಬಾನಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಗೂಗಲ್ ಸಿಇಒ ಸುಂದರ್ ಪಿಚೈ, “ಈ ಸ್ಮಾರ್ಟ್‌ಫೋನ್ ಅನ್ನು ಭಾರತಕ್ಕೆಂದೇ ನಿರ್ಮಿಸಲಾಗಿದ್ದು, ಮೊತ್ತಮೊದಲ ಬಾರಿಗೆ ಅಂತರ್ಜಾಲ ಬಳಸುವ ಲಕ್ಷಾಂತರ ಹೊಸ ಬಳಕೆದಾರರಿಗೆ ಅದು ಹೊಸ ಸಾಧ್ಯತೆಗಳನ್ನು ತೆರೆದಿಡಲಿದೆ” ಎಂದು ಹೇಳಿದ್ದಾರೆ.
2G-ಮುಕ್ತ, 5G-ಯುಕ್ತ ಭಾರತದತ್ತ: ದೇಶೀಯ ನಿರ್ಮಿತ 5G ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಜಿಯೋ ಗಮನಾರ್ಹ ಸಾಧನೆಗಳನ್ನು ಮಾಡಿದ್ದು, ಪರೀಕ್ಷಾರ್ಥ ಚಟುವಟಿಕೆಗಳು ಮುಂದುವರೆದಿವೆ ಎಂದು ಮುಖೇಶ್ ಅಂಬಾನಿ ಹೇಳಿದ್ದಾರೆ. ಶಿಕ್ಷಣ, ಆರೋಗ್ಯ ರಕ್ಷಣೆ ಸೇರಿದಂತೆ ವಿವಿಧ ಉದ್ದೇಶಗಳಿಗಾಗಿ 5G ತಂತ್ರಜ್ಞಾನದ ಬಳಕೆಯನ್ನು ಪರೀಕ್ಷಿಸಲಾಗುತ್ತಿದ್ದು, ಭಾರತ ಶೀಘ್ರವೇ ‘2G-ಮುಕ್ತ’ವಾಗುವುದರ ಜೊತೆಗೆ ‘5G-ಯುಕ್ತ’ವೂ ಆಗುತ್ತದೆ. ಭಾರತದಾದ್ಯಂತ 5G ಪರಿಚಯಿಸುವುದರ ಜೊತೆಗೆ ನಮ್ಮ ತಂತ್ರಜ್ಞಾನವನ್ನು ಇನ್ನಿತರ ದೇಶಗಳೂ ಬಳಸಲಿವೆ ಎಂದು ಅವರು ಹೇಳಿದ್ದಾರೆ.

ದೇಶದೆಲ್ಲೆಡೆ 5G ಅನುಷ್ಠಾನಕ್ಕಾಗಿ ಜಿಯೋ ಹಾಗೂ ಗೂಗಲ್ ನಡುವೆ ಒಪ್ಪಂದ ಮಾಡಿಕೊಳ್ಳಲಾಗಿದ್ದು, ಜಿಯೋದ 5G ಜಾಲ ಹಾಗೂ ಸೇವೆಗಳು ಗೂಗಲ್ ಕ್ಲೌಡ್ ವೇದಿಕೆಯನ್ನು ಬಳಸಿಕೊಳ್ಳಲಿವೆ. ಈ ಒಪ್ಪಂದದ ಅಂಗವಾಗಿ ರಿಲಯನ್ಸ್‌ನ ರೀಟೇಲ್ ವಹಿವಾಟು ಗೂಗಲ್ ಕ್ಲೌಡ್‌ ಅನ್ನು ವ್ಯಾಪಕವಾಗಿ ಬಳಸಲಿದೆ. ಗೂಗಲ್ ಮಾತ್ರವೇ ಅಲ್ಲದೆ ಫೇಸ್‌ಬುಕ್ ಹಾಗೂ ಮೈಕ್ರೋಸಾಫ್ಟ್‌ ಸಂಸ್ಥೆಗಳ ಜೊತೆಗೂ ರಿಲಯನ್ಸ್ ಸಹಭಾಗಿತ್ವ ಮುಂದುವರೆದಿದೆ. ಜಿಯೋಮಾರ್ಟ್ ಸೇವೆಗಳನ್ನು ವಾಟ್ಸ್‌ಆಪ್ ಮೂಲಕ ಒದಗಿಸುವ ಪ್ರಯೋಗ ಮುಂದುವರೆದಿದ್ದು, ಇದಕ್ಕೆ ಜಿಯೋಮಾರ್ಟ್ ಹಾಗೂ ವಾಟ್ಸ್‌ಆಪ್ ಎರಡೂ ಸೌಲಭ್ಯಗಳ ಗ್ರಾಹಕರಿಂದ ದೊರೆತಿರುವ ಆರಂಭಿಕ ಪ್ರತಿಕ್ರಿಯೆ ಉತ್ತಮವಾಗಿದೆ. ಜಾಮನಗರ ಹಾಗೂ ನಾಗಪುರಗಳಲ್ಲಿ ಮೈಕ್ರೋಸಾಫ್ಟ್ ಸಹಯೋಗದೊಂದಿಗೆ ಎರಡು ಜಿಯೋ-ಅಜ಼್ಯೂರ್ ಕ್ಲೌಡ್ ಡೇಟಾ ಸೆಂಟರುಗಳನ್ನು ಕಾರ್ಯರಂಭಗೊಳಿಸಿದ್ದೇವ ಎಂದು ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಜಿಯೋಫೈಬರ್ ಕುರಿತು ಮಾತನಾಡಿದ ಮುಖೇಶ್ ಅಂಬಾನಿ, ಕಳೆದ ಒಂದು ವರ್ಷದಲ್ಲಿ ಅದು ಇಪ್ಪತ್ತು ಲಕ್ಷಕ್ಕೂ ಹೆಚ್ಚಿನ ಹೊಸ ತಾಣಗಳಲ್ಲಿ ಲಭ್ಯವಾಗಿದೆ. ಒಟ್ಟಾರೆ ಮೂವತ್ತು ಲಕ್ಷಕ್ಕೂ ಹೆಚ್ಚಿನ ಬಳಕೆದಾರರೊಂದಿಗೆ, ಜಿಯೋಫೈಬರ್ ಭಾರತದ ಅತಿದೊಡ್ಡ ಹಾಗೂ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಫಿಕ್ಸೆಡ್ ಬ್ರಾಡ್‌ಬ್ಯಾಂಡ್ ಸೇವಾದಾರ ಸಂಸ್ಥೆಯಾಗಿ ರೂಪುಗೊಂಡಿದೆ ಎಂದು ಅವರು ಹೇಳಿದ್ದಾರೆ.
ಪರಿಸರ ಸ್ನೇಹಿ ಯೋಜನೆಗಳಿಗಾಗಿ ನಾಲ್ಕು ಬೃಹತ್ ಕಾರ್ಖಾನೆ: 2035ರ ವೇಳೆಗೆ ನಿವ್ವಳ ‘ಕಾರ್ಬನ್ ಜ಼ೀರೋ’ ಸಾಧನೆ ಮಾಡುವ ನಿಟ್ಟಿನಲ್ಲಿ ರಿಲಯನ್ಸ್ ಸಂಸ್ಥೆ ಹಲವು ಮಹತ್ವಾಕಾಂಕ್ಷಿ ಯೋಜನೆಗಳನ್ನು ಪ್ರಕಟಿಸಿದೆ. ರಿಲಯನ್ಸ್‌ನ ಈಗಿನ ವಹಿವಾಟಿನ ಆರಂಭಿಕ ಕೇಂದ್ರವಾಗಿದ್ದ ಜಾಮನಗರದಲ್ಲಿ 5,000 ಎಕರೆ ವಿಸ್ತೀರ್ಣದ ‘ಧೀರೂಭಾಯಿ ಅಂಬಾನಿ ಗ್ರೀನ್ ಎನರ್ಜಿ ಗಿಗಾ ಕಾಂಪ್ಲೆಕ್ಸ್’ ಅನ್ನು ಪ್ರಾರಂಭಿಸುವ ಮೂಲಕ ಅದನ್ನು ತಮ್ಮ ಹೊಸ ವಹಿವಾಟಿನ ಕೇಂದ್ರವನ್ನಾಗಿಯೂ ಮಾಡಿಕೊಳ್ಳುವುದಾಗಿ ಮುಖೇಶ್ ಅಂಬಾನಿ ತಿಳಿಸಿದ್ದಾರೆ.

ಹೊಸ ಮಟೀರಿಯಲ್‌ಗಳು ಹಾಗೂ ಪರಿಸರ ಸ್ನೇಹಿ ರಾಸಾಯನಿಕಗಳನ್ನು ಉತ್ಪಾದಿಸುವ ನಿಟ್ಟಿನಲ್ಲೂ ರಿಲಯನ್ಸ್ ಅನೇಕ ಕಾರ್ಯಕ್ರಮಗಳನ್ನು ರೂಪಿಸಿದೆ. ಈ ಕಾರ್ಯಕ್ರಮಗಳ ಅಂಗವಾಗಿ ಭಾರತದ ಮೊತ್ತಮೊದಲ ವಿಶ್ವದರ್ಜೆಯ ಕಾರ್ಬನ್ ಫೈಬರ್ ಘಟಕದಲ್ಲಿ ಹೂಡಿಕೆ ಮಾಡುತ್ತಿದೆ. ತಮ್ಮ ಹೊಸ ಯೋಜನೆಗಳ ಮೂಲಕ ರಿಲಯನ್ಸ್‌ನ ಸಾಂಪ್ರದಾಯಿಕ ಇಂಧನಗಳ ವಹಿವಾಟನ್ನು ತಾಳಿಕೆಯ, ಸರ್ಕ್ಯುಲರ್ ಮತ್ತು ನಿವ್ವಳ ಜ಼ೀರೋ ಕಾರ್ಬನ್ ಮಟೀರಿಯಲ್‌ಗಳ ವಹಿವಾಟಾಗಿ ಬದಲಿಸುವುದಾಗಿ ಅವರು ತಿಳಿಸಿದ್ದಾರೆ. ಇದು ನಮಗೆ ಕೇವಲ ಹೊಸದೊಂದು ವಹಿವಾಟು ಮಾತ್ರವೇ ಅಲ್ಲ, ಇದು ಪರಿಸರಕ್ಕೆ ಉಂಟಾಗಿರುವ ಹಾನಿಯನ್ನು ಗುಣಪಡಿಸುವ ತಮ್ಮ ಉದ್ದಿಷ್ಟಕಾರ್ಯ ಎಂದು ಮುಖೇಶ್ ಅಂಬಾನಿ ತಿಳಿಸಿದ್ದಾರೆ.

 ಕಳೆದ ವರ್ಷದಲ್ಲಿ 1,500 ಹೊಸ ಮಳಿಗೆಗಳ ಸೇರ್ಪಡೆಯೊಂದಿಗೆ, ಇದೀಗ ಭಾರತದ ಪ್ರತಿ ಎಂಟು ಗ್ರಾಹಕರಲ್ಲಿ ಒಬ್ಬರು ರಿಲಯನ್ಸ್ ರೀಟೇಲ್‌ನೊಂದಿಗೆ ವ್ಯವಹರಿಸುತ್ತಿದ್ದಾರೆ. ಕೋವಿಡ್ ಸಂಕಷ್ಟದ ಸಂದರ್ಭದಲ್ಲೂ ರಿಲಯನ್ಸ್ ರೀಟೇಲ್‌ ಗಮನಾರ್ಹ ಸಾಧನೆ ತೋರಿದ್ದು, 65,000ಕ್ಕೂ ಹೆಚ್ಚಿನ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸಿದೆ. ಜಿಯೋಮಾರ್ಟ್‌ ಸೇವೆಗಳಿಗೂ ಉತ್ತಮ ಪ್ರತಿಕ್ರಿಯೆ ಲಭ್ಯವಾಗುತ್ತಿದ್ದು, ಒಂದೇ ದಿನದಲ್ಲಿ 6.5 ಲಕ್ಷ ಆರ್ಡರುಗಳನ್ನು ದಾಖಲಿಸುವ ಮೂಲಕ ಅದು ದಾಖಲೆ ನಿರ್ಮಿಸಿದೆ ಎಂದು ಮುಖೇಶ್ ಅಂಬಾನಿ ತಿಳಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು