ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕನಸಿನ ಬೆನ್ನಟ್ಟುವಿಕೆ ಮುಂದುವರೆಯುತ್ತದೆ; ನಮ್ಮೊಂದಿಗೆ ನಿಂತ ಎಲ್ಲಾ ಅಭಿಮಾನಿಗಳಿಗೆ ಧನ್ಯವಾದಗಳು - ದಿನೇಶ್ ಕಾರ್ತಿಕ್

Twitter
Facebook
LinkedIn
WhatsApp
WhatsApp Image 2023 05 24 at 8.54.05 PM

IPL 2023: ಪ್ರತಿ ಸೀಸನ್​ನಂತೆ ಈ ಬಾರಿ ಕೂಡ ಆರ್​ಸಿಬಿ ತಂಡ ಕಪ್ ಗೆಲ್ಲುವಲ್ಲಿ ವಿಫಲವಾಗಿದೆ. ಆಡಿದ 14 ಪಂದ್ಯಗಳಲ್ಲಿ ಕೇವಲ 7 ರಲ್ಲಿ ಮಾತ್ರ ಜಯ ಸಾಧಿಸಿದ ಫಾಫ್ ಡುಪ್ಲೆಸಿಸ್ ಪಡೆ ಲೀಗ್ ಹಂತದಲ್ಲೇ ಹೊರಬಿದ್ದಿದೆ.

ಒಂದು ತಂಡವಾಗಿ ಆಡುವಲ್ಲಿ ಸಂಪೂರ್ಣ ವಿಫಲರಾಗಿದ್ದ ಆರ್​ಸಿಬಿ ಪರ ನಾಯಕ ಫಾಫ್ ಡುಪ್ಲೆಸಿಸ್, ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಮೊಹಮ್ಮದ್ ಸಿರಾಜ್ ಪ್ರಚಂಡ ಪ್ರದರ್ಶನ ನೀಡಿದ್ದರು.

ಈ ನಾಲ್ವರ ಸಾಂಘಿಕ ಹೋರಾಟದಿಂದಲೇ ಆರ್​ಸಿಬಿ ಕಪ್ ಗೆಲ್ಲುವ ಕನಸನ್ನು ಬಿತ್ತಿದ್ದರು. ಆದರೆ ಉಳಿದ ಆಟಗಾರರ ಕಳಪೆ ಪ್ರದರ್ಶನವು ಆರ್​ಸಿಬಿ ಪಾಲಿಗೆ ಮುಳುವಾಯಿತು. ಇದುವೇ ಕೆಲ ಪಂದ್ಯಗಳಲ್ಲಿ ಸೋಲಿಗೂ ಪ್ರಮುಖ ಕಾರಣವಾಯಿತು.

ಅದರಲ್ಲೂ ತಂಡದಲ್ಲಿ ಮ್ಯಾಚ್ ಫಿನಿಶರ್ ಆಗಿ ಗುರುತಿಸಿಕೊಂಡಿದ್ದ ದಿನೇಶ್ ಕಾರ್ತಿಕ್ ಮ್ಯಾಚ್ ಫಿನಿಶ್ ಆಗುವ ಮುನ್ನವೇ ಔಟ್ ಆಗಿ ಪೆವಿಲಿಯನ್ ಸೇರುತ್ತಿದ್ದರು. ಇದು ಕೂಡ ಆರ್​ಸಿಬಿ ಫಲಿತಾಂಶದ ಮೇಲೆ ನೇರ ಪರಿಣಾಮ ಬೀರಿತು.

ಇದೀಗ ಟೂರ್ನಿಯಿಂದ ಹೊರಬಿದ್ದ ನೋವಿನಲ್ಲಿರುವ ಆರ್​ಸಿಬಿ ಅಭಿಮಾನಿಗಳಿಗೆ ದಿನೇಶ್ ಕಾರ್ತಿಕ್ ಭಾವನಾತ್ಮಕ ಸಂದೇಶ ರವಾನಿಸಿದ್ದಾರೆ. ಅಲ್ಲದೆ ಬೆಂಬಲಿಸಿದ ಎಲ್ಲಾ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ.

ಈ ಕುರಿತು ಟ್ವಿಟರ್​ನಲ್ಲಿ ಬರೆದುಕೊಂಡಿರುವ ಡಿಕೆ, ನಮಗೆ ನಿರೀಕ್ಷೆಗೆ ತಕ್ಕಂತೆ ಆಡಲು ಸಾಧ್ಯವಾಗಿಲ್ಲ. ಹೀಗಾಗಿ ಫಲಿತಾಂಶ ಕೂಡ ನಮ್ಮ ಪರವಾಗಿರಲಿಲ್ಲ. ಇದಾಗ್ಯೂ ನಮ್ಮ ಕನಸನ್ನು ಬೆನ್ನತ್ತುವುದು ಮುಂದುವರೆಯಲಿದೆ. ನಮ್ಮೆಲ್ಲಾ ಏಳು-ಬೀಳುಗಳಲ್ಲಿ ಜೊತೆಗಿದ್ದ ಎಲ್ಲಾ ಅಭಿಮಾನಿಗಳಿಗೆ ಧನ್ಯವಾದಗಳು. ನಮಗೆ ನೀವೇ ಸರ್ವಸ್ವ ಎಂದು ದಿನೇಶ್ ಕಾರ್ತಿಕ್ ಬರೆದುಕೊಂಡಿದ್ದಾರೆ.

ಅಂದಹಾಗೆ ಈ ಬಾರಿ 13 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ದಿನೇಶ್ ಕಾರ್ತಿಕ್ ಕಲೆಹಾಕಿದ್ದು ಕೇವಲ 140 ರನ್ ಮಾತ್ರ. ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದ ಡಿಕೆಯನ್ನು ಮುಂದಿನ ಸೀಸನ್​ಗಾಗಿ ಆರ್​ಸಿಬಿ ಉಳಿಸಿಕೊಳ್ಳುವುದು ಅನುಮಾನ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ