ಮಂಗಳವಾರ, ಮೇ 7, 2024
ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!-ತಮ್ಮ ಭಾವಚಿತ್ರವನ್ನು ಅಳವಡಿಸಿ ಮತ ಹಾಕುವಂತೆ ಪೋಸ್ಟ್ ; ಆಪ್ತನ ವಿರುದ್ಧ ಅನಂತ್ ಕುಮಾರ್ ಹೆಗ್ಡೆ ದೂರು ದಾಖಲು.!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಇಂದಿನ ಚಿನ್ನ ಬೆಳ್ಳಿಯ ದರದ ವಿವರ-ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕರಾವಳಿ ಜಿಲ್ಲೆಗಳಲ್ಲಿ ಗರಿಷ್ಟ ಉಷ್ಣಾಂಶ ಮತ್ತು ಬಿಸಿ ಗಾಳಿ ಸಾಧ್ಯತೆ ; ದೇಶದಲ್ಲಿ ಹಲವೆಡೆ ಮಳೆಯಾಗುವ ಲಕ್ಷಣ!

Twitter
Facebook
LinkedIn
WhatsApp
814557 temperaturesthinkstockphotos

ಮುಂದಿನ 48 ಗಂಟೆಗಳಲ್ಲಿ ಕರಾವಳಿ ಕರ್ನಾಟಕ ಭಾಗಗಳಲ್ಲಿ ಉಷ್ಣಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 5.1ಡಿಗ್ರಿ ಸೆಲ್ಸಿಯಸ್​ಗಿಂತಲೂ ಹೆಚ್ಚಾಗಲಿದೆ. ಪಣಂಬೂರಿನಲ್ಲಿ 38.8 ಡಿಗ್ರಿ ಸೆಲ್ಸಿಯಸ್​ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ಬಾಗಲಕೋಟೆಯಲ್ಲಿ 13.4 ಡಿಗ್ರಿ ಸೆಲ್ಸಿಯಸ್​ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನ ಎಚ್​ಎಎಲ್​ನಲ್ಲಿ 30.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ. ಕೆಐಎಎಲ್​ನಲ್ಲಿ 30.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ. 17.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ಪ್ರಕಾರ, ಇಂದಿನಿಂದ ಮಾರ್ಚ್ 9-12ರವರೆಗೆ ದೇಶದ ವಿವಿಧೆಡೆ ಗುಡುಗು ಸಹಿತ ಮಳೆ ಬೀಳಲಿದೆ.

ಅಸ್ಸಾಂ, ಅರುಣಾಚಲ ಪ್ರದೇಶ, ಮೇಘಾಲಯ ರಾಜ್ಯಗಳಲ್ಲಿ ಲಘು ಮಳೆ ಇಲ್ಲವೇ ಗುಡುಗು ಸಹಿತ ಹಗುರ ಮಳೆಯಾಗುವ ಲಕ್ಷಣಗಳು ಇವೆ. ಈ ವೇಳೆ ಎಲ್ಲೆಡೆ ಮೋಡ ಕವಿದ ವಾತಾವರಣ ಸೃಷ್ಟಿಯಾಗಲಿದೆ.

ದೆಹಲಿಯಲ್ಲಿ ಶುಕ್ರವಾರ ಮಾರ್ಚ್ 10ರಂದು ಕೂಡ ಕೆಲವು ಕಡೆಗಳಲ್ಲಿ ಹಗುರು ಮಳೆಯಾಗುವ ನಿರೀಕ್ಷೆ ಇದೆ. ಅಷ್ಟೇ ಅಲ್ಲದೇ ಹಿಮಾಚಲ ಪ್ರದೇಶ, ಉತ್ತರಾಖಂಡ, ದಕ್ಷಿಣ ಹರ್ಯಾಣ, ರಾಜಸ್ಥಾನ, ಪಶ್ಚಿಮ ಮಧ್ಯಪ್ರದೇಶ, ಪಶ್ಚಿಮ ಬಂಗಾಳ, ಸಿಕ್ಕಿಂ ಸೇರಿದಂತೆ ಕೆಲವು ರಾಜ್ಯಗಳ ಒಂದೆರಡು ಕಡೆಗಳಲ್ಲಿ ಶುಕ್ರವಾರದವರೆಗೆ ಅಲ್ಲಲ್ಲಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ