ಜೂನ್ 1ರಿಂದ ಮಳೆ ಅಬ್ಬರ ಮತ್ತೆ ಶುರುವಾಗುವ ನಿರೀಕ್ಷೆ ಇತ್ತು. ಆ ನಿರೀಕ್ಷೆಗೆ ತಕ್ಕಂತೆ ಇದೀಗ ಮಳೆ ಬಿದ್ದಿದೆ ಬೆಂಗಳೂರು ಸೇರಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಸೇರಿ ಕೊಡಗು & ಚಿಕ್ಕಮಗಳೂರು, ಉತ್ತರ ಕನ್ನಡದಲ್ಲಿ ಮಳೆ ಮುನ್ಸೂಚನೆ ಇತ್ತು. ಬೆಂಗಳೂರು ಸುತ್ತಮುತ್ತಲ ಪ್ರದೇಶದಲ್ಲಿ ಕೂಡ ಮಳೆಯಾಗುವ ನಿರೀಕ್ಷೆ ಇತ್ತು. ಅದೇ ರೀತಿ ನಿನ್ನೆಯಿಂದ ಈ ರೀತಿ ಭರ್ಜರಿ ಮಳೆ ಬರುತ್ತಿದೆ. ಮತ್ತೊಂದು ಕಡೆ ಮುಂದಿನ 5 ದಿನಗಳ ಕಾಲ ಹೀಗೆಯೇ ಮಳೆ ಬೀಳಲಿದೆ
ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಒಂದು ವಾರ ಭಾರಿ ಮಳೆ ಸಾಧ್ಯತೆ..!
ನಿರೀಕ್ಷೆಗೂ ಮೊದಲೇ ಭಾರತದ ದಕ್ಷಿಣ ರಾಜ್ಯವಾದ ಕೇರವಳವನ್ನು ನೈಋತ್ಯ ಮಾನ್ಸೂನ್ ಪ್ರವೇಶ ಮಾಡಿದೆ. ಇದರ ಬೆನ್ನಲ್ಲೇ ಇವತ್ತು ಕರ್ನಾಟಕ ಗಡಿಗೆ ನೈಋತ್ಯ ಮಾನ್ಸೂನ್ ಪ್ರವೇಶ ಮಾಡಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಭಾಗದಲ್ಲಿ ಮಾನ್ಸೂನ್ ಪ್ರವೇಶವಾಗಲಿದೆ. ಹೀಗಾಗಿ ಇವತ್ತಿನಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಂಡಿದೆ. ಇಂದಿನಿಂದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಒಂದು ವಾರ ಭಾರೀ ಮಳೆ ಸಾಧ್ಯತೆ ಇದೆ
ಇನ್ನು ಉತ್ತರ ಒಳನಾಡಿನಲ್ಲೂ ಜೂನ್ 4 – 5 ರಿಂದ ಭಾರೀ ಮಳೆ ಸಾಧ್ಯತೆ ಇದ್ದು, ಜೂನ್ 7 ರಂದು ಇಡೀ ರಾಜ್ಯಾದ್ಯಂತ ಮುಂಗಾರು ಮಳೆ ವ್ಯಾಪಿಸಲಿದೆ. ತುಮಕೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲೂ 30-40 ಗಾಳಿಯೊಂದಿಗೆ ಗುಡುಗು ಸಹಿತ ಮಳೆ ಸಾಧ್ಯತೆ ಇದೆ. ಇನ್ನು ನೈಋತ್ಯ ಮಾನ್ಸೂನ್ ಹಿನ್ನೆಲೆ ಇವತ್ತು ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಯಚೂರು, ಕೊಪ್ಪಳ ಮಂಡ್ಯ, ಮೈಸೂರು ಸೇರಿದಂತೆ ಗುಡುಗು ಸಹಿತ ಭಾರೀ ಮಳೆ ಮೂನ್ಸುಚನೆ ನೀಡಲಾಗಿದೆ. 40-50 ಕಿಮೀ ವೇಗದ ಗಾಳಿಯೊಂದಿಗೆ ಮಳೆ ಸಾಧ್ಯತೆ ಇದೆ.
ಜೂನ್ 3 ರಂದು ಉತ್ತರ ಕರ್ನಾಟಕದ ವಿಜಯಪುರ, ಕಲಬುರಗಿ & ರಾಯಚೂರು ಸೇರಿದಂತೆ ಯಾದಗಿರಿ, ಬೀದರ್, ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಕೊಪ್ಪಳ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಮಳೆ ಅಬ್ಬರಿಸಲಿದೆ ಎಂದು ಮುನ್ನೆಚ್ಚರಿಕೆ ನೀಡಲಾಗಿದೆ. ಈ ಮೂಲಕ ಕರ್ನಾಟಕ ಪೂರ್ತಿ ಮಳೆ ಆವರಿಸಿ ಅಬ್ಬರಿಸಲಿದೆ. ಉತ್ತರ ಕನ್ನಡ, ತುಮಕೂರು, ಹಾಸನ, ಚಿತ್ರದುರ್ಗ, ಬೆಳಗಾವಿ, ದಾವಣಗೆರೆ, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೇರಿ ಚಿಕ್ಕಬಳ್ಳಾಪುರ, ಕೋಲಾರ, ವಿಜಯಪುರ ಜಿಲ್ಲೆಗಳಲ್ಲಿ ಕೂಡ ಭಾರಿ ಮಳೆ ಬೀಳಲಿದೆ ಎಂದು ತಿಳಿಸಲಾಗಿದೆ. ಈ ಮೂಲಕ ಕರ್ನಾಟಕದ ಬಹುತೇಕ ಎಲ್ಲಾ ಜಿಲ್ಲೆಯಲ್ಲಿ ಕೂಡ, ಮುಂಗಾರು ಮಳೆ ಭಾರಿ ಆರ್ಭಟ ತೋರಿಸಲಿದ್ದು ಈ ಸುದ್ದಿ ರೈತರಿಗೆ ಖುಷಿ ಕೊಟ್ಟಿದೆ.