ಗುರುವಾರ, ನವೆಂಬರ್ 21, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕರ್ನಾಟಕದ ಪುಟ್ಟ ಬಾಲಕಿ ಪಿಯಾನೋ ನುಡಿಸುವ ಪರಿಗೆ ಮನಸೋತ ಪ್ರಧಾನಿ ಮೋದಿ

Twitter
Facebook
LinkedIn
WhatsApp
pooja hegde on salman khan bhaijaan main 1

ಪಲ್ಲವಗಳ ಪಲ್ಲವಿಯಲಿ ಗರಿಗೆದರಿದೆ ಗೀತಾ, ತಂಬೆಲರಲಿ ಹಬ್ಬುತ್ತಿದೆ ಕೋಕಿಲ ಸಂಗೀತಾ ಎಂಬ ಕನ್ನಡ ಹಾಡಿಗೆ ಪಿಯಾನೋ ನುಡಿಸಿದ ಪುಟ್ಟ ಬಾಲಕಿಯ ಪ್ರತಿಭೆಗೆ ಪ್ರಧಾನಿ ನರೇಂದ್ರ ಮೋದಿ(Narendra Modi) ಮನಸೋತಿದ್ದಾರೆ. ಅಷ್ಟೇ ಅಲ್ಲದೆ, ಕನ್ನಡದಲ್ಲೇ ಟ್ವೀಟ್ ಮಾಡಿದ್ದು, ಈ ವಿಡಿಯೋ ಪ್ರತಿಯೊಬ್ಬರ ಮುಖದ ಮೇಲೆ ಮುಗುಳುನಗೆ ತರಿಸಬಹುದು. ಅನನ್ಯ ಪ್ರತಿಭೆ ಹಾಗೂ ಸೃಜನಶೀಲತೆ. ಶಾಲ್ಮಲಿಗೆ ಶುಭಹಾರೈಕೆಗಳು ಎಂದು ಬರೆದಿದ್ದಾರೆ.

ಆಕೆಯ ತಾಯಿ ಹಾಡಿನ ಸಾಲುಗಳನ್ನು ಹೇಳುತ್ತಿದ್ದಂತೆ ಬಾಲಕಿ ಕೂಡ ಪಿಯಾನೋದಲ್ಲಿ ಅದೇ ಹಾಡನ್ನು ನುಡಿಸುವ ಮೂಲಕ ಲಕ್ಷಾಂತರ ಮಂದಿಯ ಶ್ಲಾಘನೆಗೆ ಪಾತ್ರವಾಗಿದ್ದಾಳೆ. ಈ ಹಾಡನ್ನು ಕವಿ ಕೆಎಸ್​ ನರಸಿಂಹಸ್ವಾಮಿಯವರು ಬರೆದಿದ್ದಾರೆ.

ಈ ವಿಡಿಯೋದಲ್ಲಿರುವ ಬಾಲಕಿಯ ಹೆಸರು ಶಾಲ್ಮಲಿ. ಈ ವಿಡಿಯೋವನ್ನು ಟ್ವಿಟ್ಟರ್​ನಲ್ಲಿ ಅನಂತ್​ ಕುಮಾರ್ ಎಂಬುವವರು ಹಂಚಿಕೊಂಡಿದ್ದರು. ಇದನ್ನು ಪ್ರಧಾನಿ ನರೇಂದ್ರ ಮೋದಿಯವರು ಗಮನಿಸಿ ಮಗುವ ಪ್ರತಿಭೆಯನ್ನು ಶ್ಲಾಘಿಸಿ ಟ್ವೀಟ್ ಮಾಡಿದ್ದಾರೆ.

ಈ ಪುಟ್ಟ ಬಾಲಕಿಯ ಪ್ರತಿಭೆ ನಾಡಿನ ಜನತೆಯನ್ನು ಮಂತ್ರಮುಗ್ಧಗೊಳಿಸಿದೆ, ಕಾಮೆಂಟ್ ವಿಭಾಗವು ಹಾರ್ಟ್​ ಎಮೋಜಿಯಿಂದ ತುಂಬಿ ಹೋಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ