ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕರ್ನಾಟಕದ ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಬಿಜೆಪಿಯ ಡಬಲ್‌ ಎಂಜಿನ್‌ ಸರಕಾರ ಅಗತ್ಯ- ಮೋದಿ

Twitter
Facebook
LinkedIn
WhatsApp

ಬೀದರ್‌: ಕರ್ನಾಟಕದ ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಬಿಜೆಪಿಯ ಡಬಲ್‌ ಎಂಜಿನ್‌ ಸರಕಾರ ಅಗತ್ಯ ಮತ್ತು ಅನಿವಾರ್ಯವಾಗಿದೆ. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರಕಾರ ಇದ್ದರೆ ಕರ್ನಾಟಕ ದೇಶದ ನಂಬರ್‌ ಒನ್‌ ರಾಜ್ಯ ಆಗಲು ಸಾಧ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಹುಮನಾಬಾದ್‌ ತಾಲೂಕಿನ ಚಿನಕೇರಾ ಕ್ರಾಸ್‌ ಬಳಿ ಶನಿವಾರ ಆಯೋಜಿಸಿದ್ದ ಬಿಜೆಪಿಯ ಬೃಹತ್‌ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಡಬಲ್‌ ಎಂಜಿನ್‌ ಆಡಳಿತದಿಂದ ಪ್ರಗತಿಯ ವೇಗ ಹೆಚ್ಚುತ್ತದೆ. ಬಿಜೆಪಿ ಸರಕಾರದಿಂದ ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿದ್ದು, ಇದು ನಿಲ್ಲಬಾರದು. ಅದಕ್ಕಾಗಿ ಕರುನಾಡಿನ ಜನ ಬಿಜೆಪಿಗೆ ಪೂರ್ಣ ಬಹುಮತದ ಅ ಧಿಕಾರ ನೀಡಬೇಕು ಎಂದರು.

ಬಿಜೆಪಿ ಸರಕಾರದ ಆಡಳಿತದಿಂದಾಗಿ ರಾಜ್ಯದಲ್ಲಿ ವಿದೇಶಿ ಬಂಡವಾಳ ಹೂಡಿಕೆಯಲ್ಲಿ ಸಾಕಷ್ಟು ಪ್ರಗತಿಯಾಗಿದೆ. ಈ ಹಿಂದೆ ಪ್ರತಿ ವರ್ಷ 30 ಸಾವಿರ ಕೋಟಿ ರೂ. ಬರುತ್ತಿದ್ದ ಬಂಡವಾಳ ಈಗ 90 ಸಾವಿರ ಕೋಟಿ ರೂ.ಆಗಿದೆ. ಇದು ಕಾಂಗ್ರೆಸ್‌ ಸರಕಾರದ ಅವ ಧಿಗಿಂತ ಮೂರು ಪಟ್ಟು ಹೆಚ್ಚಾಗಿದೆ. ಕೋವಿಡ್‌ ಸಂಕಷ್ಟ, ಯುದ್ಧಗಳ ನಡುವೆಯೂ ಸಾಧನೆ ಆಗಿದೆ ಎಂದು ತಿಳಿಸಿದರು.

ಬಿಜೆಪಿ ಸರಕಾರ ಬಂದ ಮೇಲೆ ಲಕ್ಷಾಂತರ ರೈತರು ಕಿಸಾನ್‌ ಸಮ್ಮಾನ್‌ ಯೋಜನೆಯ ಸೌಲಭ್ಯ ಪಡೆಯುತ್ತಿದ್ದಾರೆ. ಕೇಂದ್ರದ 6 ಸಾವಿರ ರೂ.ಗಳ ಜತೆಗೆ ರಾಜ್ಯ ಸರಕಾರ 4 ಸಾವಿರ ರೂ. ಪ್ರೋತ್ಸಾಹಧನ ನೀಡುತ್ತಿರುವುದು ಖುಷಿಯ ಸಂಗತಿ. ಡಬಲ್‌ ಎಂಜಿನ್‌ ಸರಕಾರದಿಂದಾಗಿ ರಾಜ್ಯದಲ್ಲಿ ಇಂದು ಆಶ್ರಯ ಮನೆಗಳ ನಿರ್ಮಾಣದ ವೇಗವೂ ಹೆಚ್ಚಾಗಿದೆ. ಕುಡಿಯುವ ನೀರಿಗಾಗಿ ಮಹಿಳೆಯರು ಪಡುತ್ತಿದ್ದ ಕಷ್ಟಕ್ಕೆ ಇಂದು “ಹರ್‌ ಘರ್‌ ನಳ್‌’ ಕಾರ್ಯಕ್ರಮದಿಂದ ಮುಕ್ತಿ ಸಿಕ್ಕಿದೆ. ಕರ್ನಾಟಕದ 40 ಲಕ್ಷ ಒಳಗೊಂಡು ದೇಶದ 9 ಕೋಟಿ ಕುಟುಂಬಗಳಿಗೆ ಇಂದು ನಳ್ಳಿ ಮೂಲಕ ನೀರು ಸಿಗುವಂತಾಗಿದೆ ಎಂದರು.

ಮೋದಿ ಅವರನ್ನು ಪಕ್ಷದ ಜಿಲ್ಲಾ ಘಟಕದ ವತಿಯಿಂದ ಕಮಲದ ಹೂವುಗಳ ಹಾರ ಹಾಕಿ, ಬಿದ್ರಿ ಕಲೆಯ ಬಸವಣ್ಣನ ಭಾವಚಿತ್ರವನ್ನು ನೀಡಿ ಸಮ್ಮಾನಿಸಲಾಯಿತು. ಬೃಹತ್‌ ಸಭೆಯಲ್ಲಿ ಒಂದೂವರೆ ಲಕ್ಷಕ್ಕೂ ಅಧಿ ಕ ಜನರು ಭಾಗವಹಿಸಿದ್ದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಭಗವಂತ ಖೂಬ, ರಾಜ್ಯ ಸಚಿವ ಪ್ರಭು ಚೌವ್ಹಾಣ್‌, ವಿಧಾನಪರಿಷತ್‌ ಸದಸ್ಯ ರಘುನಾಥ ರಾವ್‌ ಮಲ್ಕಾಪುರೆ, ಬಿಜೆಪಿ ರಾಜ್ಯ ಕಾರ್ಯದರ್ಶಿ ಎನ್‌. ರವಿಕುಮಾರ್‌, ಪಕ್ಷದ ಅಭ್ಯರ್ಥಿಗಳಾದ ಶರಣು ಸಲಗರ, ಸಿದ್ದು ಪಾಟೀಲ್‌, ಈಶ್ವರ ಸಿಂಗ್‌ ಠಾಕೂರ್‌, ಡಾ| ಶೈಲೇಂದ್ರ ಬೆಲ್ದಾಳೆ ಮತ್ತು ಪ್ರಕಾಶ ಖಂಡ್ರೆ ಭಾಗವಹಿಸಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist