![ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್](https://urtv24.com/wp-content/uploads/2024/12/WhatsApp-Image-2024-12-12-at-22.37.00-6787e1d3-300x169.jpg)
ಬೆಂಗಳೂರು: ಸಚಿವ ಕೆ.ಎಸ್.ಈಶ್ವರಪ್ಪ ಅವರ ರಾಜೀನಾಮೆಗೆ ಪಟ್ಟು ಹಿಡಿದಿರುವ ಕಾಂಗ್ರೆಸ್, ಸೋಮವಾರದವರೆಗೂ ಅಹೋರಾತ್ರಿ ಧರಣಿ ನಡೆಸಲು ನಿರ್ಧರಿಸಿದೆ. ಶುಕ್ರವಾರ ಸದನ ಮುಂದೂಡಿಕೆ ಬಳಿಕ ಸಭೆ ನಡೆಸಿದ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ , ಬಿ.ಕೆ ಹರಿಪ್ರಸಾದ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಭೆ ನಡೆಸಿ ಧರಣಿ ಮುಂದುವರಿಸುವ ತೀರ್ಮಾನ ಕೈಗೊಂಡಿದ್ದಾರೆ. ಅಲ್ಲದೆ ಸದನ ಹೊರಗೆ ನಡೆಯುವ ಭಾಗವಾಗಿ ಫೆ.21ಕ್ಕೆ ರಾಜ್ಯದ ಎಲ್ಲಾ ತಾಲೂಕು , ಜಿಲ್ಲಾ ಕೇಂದ್ರಗಳಲ್ಲಿ ರಾಷ್ಟ್ರ ದ್ವಜ ಹಿಡಿದು ಹೋರಾಟ ನಡೆಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಿರ್ದೇಶನ ನೀಡಿದ್ದಾರೆ.
ಇನ್ನೊಂದೆಡೆ ಅಹೋರಾತ್ರಿ ಧರಣಿ ವಿಚಾರವಾಗಿ ಕಿಡಿ ಕಾರಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ , ಅನಗತ್ಯ ಧರಣಿ ಕಾಂಗ್ರೆಸ್ ಬೌದ್ಧಿಕ ದಿವಾಳಿಯಾಗಿರುವುದಕ್ಕೆ ಸಾಕ್ಷಿಎಂದಿದ್ದಾರೆ.
ಈ ಬಗ್ಗೆ ಸರಣಿ ಟ್ವಿಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿರುವ ಅವರು, ಜವಾಬ್ದಾರಿಯುತ ವಿಪಕ್ಷ ಯಾವ ವಿಷಯಕ್ಕೆ ಹೋರಾಡುತ್ತೆ ಎಂದು ರಾಜ್ಯದ ಪ್ರಜ್ಞಾವಂತ ನಾಗರಿಕರು ಗಮನಿಸುತ್ತಾರೆ. ವಿವಾದವೇ ಇಲ್ಲದ ವಿಷಯಗಳಿಗೆ ಸದನದಲ್ಲಿ ಮಲಗುವುದರಿಂದ ರಾಜ್ಯದ ಜನತೆಗೆ ಏನು ಪ್ರಯೋಜನವಾಗುತ್ತೆ ಎನ್ನುವುದಕ್ಕೆ ಕಾಂಗ್ರೆಸ್ ಮುಖಂಡರ ಬಳಿ ಉತ್ತರ ಇಲ್ಲ.
ಅನಗತ್ಯ ಧರಣಿ ಕಾಂಗ್ರೆಸ್ ಬೌದ್ಧಿಕ ದಿವಾಳಿಯಾಗಿರುವುದಕ್ಕೆ ಸಾಕ್ಷಿ ಎಂದು ಆರೋಪಿಸಿದ್ದಾರೆ.
ಜನರ ದಿಕ್ಕು ತಪ್ಪಿಸಲು ಅಹೋರಾತ್ರಿ ನಿದ್ರಾ ಧರಣಿಯ ಮೂಲಕ ಕಾಂಗ್ರೆಸ್ ಅನಗತ್ಯ ಕೆಲಸಕ್ಕೆ ಕೈ ಹಾಕಿದೆ. ಪಂಚರಾಜ್ಯಗಳ ಚುನಾವಣೆಯ ಫಲಿತಾಂಶದ ಬಳಿಕ ರಾಜ್ಯದಲ್ಲಿಯೂ ಕಾಂಗ್ರೆಸನ್ನು ಶಾಶ್ವತ ನಿದ್ರೆಗೆ ಕಳುಹಿಸಲು ನಾಗರಿಕರು ಸಜ್ಜಾಗಿದ್ದಾರೆ. ಜನರ ವಿಶ್ವಾಸವನ್ನು ಕಳೆದುಕೊಂಡ ಕಾಂಗ್ರೆಸ್ಸಿಗೆ ಈಗ ರಾಜ್ಯ ಸರಕಾರದ ವಿರುದ್ಧ ಯಾವುದೇ ವಿಷಯ ಇಲ್ಲ ಎಂದು ವ್ಯಂಗ್ಯವಾಡಿದ್ದಾರೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist