ಕಾಂಗ್ರೆಸ್ ಹಿರಿಯ ನಾಯಕ ಮಾಜಿ ರಕ್ಷಣಾ ಸಚಿವ ಎಕೆ ಆಂಟನಿ ಅವರ ಪುತ್ರ ಅನಿಲ್ ಆಂಟನಿ ಬಿಜೆಪಿಗೆ ಸೇರ್ಪಡೆ
Twitter
Facebook
LinkedIn
WhatsApp

ನವದೆಹಲಿ (ಏ.6): ಕಾಂಗ್ರೆಸ್ ಪಕ್ಷಕ್ಕೆ ಮತ್ತೊಮ್ಮೆ ಮುಗುಜರದ ಸ್ಥಿತಿ ನಿರ್ಮಾಣವಾಗಿದೆ. ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಯುಪಿಎ ಅವಧಿಯಲ್ಲಿ ರಕ್ಷಣಾ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಎಕೆ ಆಂಟನಿ ಅವರ ಪುತ್ರ ಅನಿಲ್ ಆಂಟನಿ ಗುರುವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಅದರೊಂದಿಗೆ ಕೇರಳ ಬಿಜೆಪಿಗೆ ಅತಿದೊಡ್ಡ ಬಲ ಸಿಕ್ಕಂತಾಗಿದೆ. ಕೇರಳ ಕಾಂಗ್ರೆಸ್‌ನ ಮಾಧ್ಯಮ ಸಂಯೋಜಕರಾಗಿದ್ದ ಅನಿಲ್ ಆಂಟನಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ಗುಜರಾತ್ ಗಲಭೆಯ ಕುರಿತಾಗಿ ಬಿಬಿಸಿ ಮಾಡಿದ್ದ ಸಾಕ್ಷ್ಯಚಿತ್ರವನ್ನು ಬಲವಾಗಿ ವಿರೋಧಿಸಿದ್ದರು. ಅದರ ಬೆನ್ನಲ್ಲಿಯೇ ಕಾಂಗ್ರೆಸ್ ಪಕ್ಷದಿಂದಲೇ ಅವರು ಟೀಕೆ ಎದುರಿಸಿದ್ದರು.
ಇದರಿಂದಾಗಿ ಬೇಸರಗೊಂಡು ಕಾಂಗ್ರೆಸ್ ಪಕ್ಷದ ಎಲ್ಲಾ ಸ್ಥಾನಕ್ಕೂ ರಾಜೀನಾಮೆ ನೀಡಿ ಹೊರಬಂದಿದ್ದ ಅನಿಲ್ ಆಂಟನಿ ಗುರುವಾರ ನವದೆಹಲಿಯಲ್ಲಿ ಕೇಂದ್ರ ಸಚಿವ ಪೀಯುಷ್ ಗೋಯೆಲ್ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದರು.