ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಂತಾರ: ಬಾಲಿವುಡ್ ನಲ್ಲಿ ಧೂಳ್, ತಮಿಳಿನ ಟ್ರೇಲರ್ ಗೂ ಸಖತ್ ರೆಸ್ಪಾನ್ಸ್

Twitter
Facebook
LinkedIn
WhatsApp
ಕಾಂತಾರ: ಬಾಲಿವುಡ್ ನಲ್ಲಿ ಧೂಳ್, ತಮಿಳಿನ ಟ್ರೇಲರ್ ಗೂ ಸಖತ್ ರೆಸ್ಪಾನ್ಸ್

ರಿಷಬ್ ಶೆಟ್ಟಿ (Rishabh Shetty) ನಿರ್ದೇಶಿಸಿ, ನಟಿಸಿರುವ ‘ಕಾಂತಾರ’ (Kantara) ಸಿನಿಮಾ ಇಂದಿನಿಂದ ಹಿಂದಿಯಲ್ಲಿ (Hindi) ರಿಲೀಸ್ ಆಗಿದೆ. ನಾಳೆ ತೆಲುಗು ಮತ್ತು ತಮಿಳಿನಲ್ಲೂ ಬಿಡುಗಡೆ ಆಗಲಿದೆ. ಅದಕ್ಕೂ ಮುನ್ನ ತಮಿಳಿನಲ್ಲಿ ಟ್ರೇಲರ್ ರಿಲೀಸ್ ಆಗಿದ್ದು, ಸಖತ್ ರೆಸ್ಪಾನ್ಸ್ ಸಿಕ್ಕಿದೆ. ಹಿಂದಿಯಲ್ಲಿ 2500ಕ್ಕೂ ಹೆಚ್ಚು ಥಿಯೇಟರ್ ನಲ್ಲಿ ಕಾಂತಾರ ಪ್ರದರ್ಶನ ಕಾಣುತ್ತಿದ್ದು, ತೆಲುಗು ಮತ್ತು ತಮಿಳಿನಲ್ಲೂ ನೂರಾರು ಚಿತ್ರಮಂದಿರಗಳು ಕಾಂತಾರಗಾಗಿ ಕಾಯುತ್ತಿವೆ.

ಕೆಜಿಎಫ್ ನಂತರ ಕನ್ನಡ ಮತ್ತೊಂದು ಸಿನಿಮಾ ಈ ಪ್ರಮಾಣದ ಸಂಖ್ಯೆಯಲ್ಲಿ ರಿಲೀಸ್ ಆಗುತ್ತಿರುವುದು ಸಹಜವಾಗಿಯೇ ಬಿಟೌನ್ ನಿದ್ದೆ ಕೆಡಿಸಿದೆ. ಸತತ ಸೋಲಿನಿಂದ ಕಂಗೆಟ್ಟಿರುವ ಬಾಲಿವುಡ್ (Bollywood), ದಕ್ಷಿಣದ ಸಿನಿಮಾಗಳ ಆರ್ಭಟಕ್ಕೆ ಸುಸ್ತಾಗಿದೆ. ಈಗಾಗಲೇ ಕೆಜಿಎಫ್ ಸಿನಿಮಾದ ಮೂಲಕ ಗೆಲುವಿನ ರುಚಿಕಂಡಿರುವ ಹೊಂಬಾಳೆ ಫಿಲ್ಮಸ್, ಕಾಂತಾರದ ಮೂಲಕ ಮತ್ತೊಂದು ಗೆಲುವಿಗೆ ಸಿದ್ಧತೆ ಮಾಡಿಕೊಂಡಿದೆ. 

ಕನ್ನಡದಲ್ಲಿ ಕಾಂತಾರ ನಿರೀಕ್ಷೆಗೂ ಮೀರಿ ಯಶಸ್ಸು ಗಳಿಸಿದೆ. ಸಿನಿಮಾ ಬಿಡುಗಡೆಯಾಗಿ ಎರಡು ವಾರಗಳು ಕಳೆಯುತ್ತಿದ್ದರೂ, ಇವತ್ತಿಗೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಸದ್ಯದಲ್ಲೇ ನೂರು ಕೋಟಿ ಕ್ಲಬ್ ಸೇರುವ ಸಿನಿಮಾವಾಗಿಯೂ ಹೊರ ಹೊಮ್ಮಲಿದೆ. ಈ ಹೊತ್ತಿನಲ್ಲಿ ಇಂದು ಹಿಂದಿಯಲ್ಲಿ, ನಾಳೆ ತಮಿಳು ಮತ್ತು ತೆಲುಗಿನಲ್ಲಿ ಈ ಸಿನಿಮಾ ರಿಲೀಸ್ (Release) ಆಗುತ್ತಿದೆ. ತಮಿಳು ಮತ್ತು ತೆಲುಗಿಗಿಂತ ಹಿಂದಿಯಲ್ಲೇ ಅಧಿಕ ಸಂಖ್ಯೆಯಲ್ಲಿ ಚಿತ್ರಮಂದಿರಗಳು ಸಿಕ್ಕಿವೆ.

ತನ್ನ ಇಡೀ ಟೀಮ್ ಕಟ್ಟಿಕೊಂಡು ರಿಷಬ್ ಶೆಟ್ಟಿ ಬಾಲಿವುಡ್ ಮತ್ತು ತೆಲುಗು ಸಿನಿಮಾ ರಂಗದಲ್ಲಿ ಭರ್ಜರಿ ಪ್ರಚಾರ ನಡೆಸಿದ್ದಾರೆ. ಈಗಾಗಲೇ ಭಾರತೀಯ ಸಿನಿಮಾ ರಂಗದ ಬಹುತೇಕ ನಟರು ಕಾಂತಾರದ ಬಗ್ಗೆ ಮಾತನಾಡುತ್ತಿರುವುದರಿಂದ ದಕ್ಷಿಣದ ಅಷ್ಟೂ ಭಾಷೆಗಳಲ್ಲೂ ಸಿನಿಮಾ ಗೆಲ್ಲಲಿದೆ ಎನ್ನುವುದು ಸದ್ಯಕ್ಕಿರುವ ಲೆಕ್ಕಾಚಾರ. ಅದರಲ್ಲೂ ಮಲಯಾಳಂನಲ್ಲಿ ದೈವಾರಾಧನೆ, ಭೂತಕೋಲ ಸೇರಿದಂತೆ ಇತರ ಆಚರಣೆಗಳು ಇರುವುದರಿಂದ ಅಲ್ಲಿಗೆ ಈ ಸಿನಿಮಾ ಇನ್ನೂ ಹತ್ತಿರವಾಗಲಿದೆ.

ನಿರ್ಮಾಪಕ ವಿಜಯ್ ಕಿರಗಂದೂರು ಕನ್ನಡ, ತೆಲುಗು (Telugu), ತಮಿಳು (Tamil) ಮತ್ತು ಮಲಯಾಳಂನಲ್ಲಿ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಹಿಂದಿಯಲ್ಲೂ ಚಿತ್ರ ಮಾಡುವ ಇಂಗಿತವನ್ನು ವ್ಯಕ್ತ ಪಡಿಸಿದ್ದಾರೆ. ಈ ಎಲ್ಲ ಸಿನಿಮಾಗಳಿಗೆ ಕೆಜಿಎಫ್ ಯಶಸ್ಸು ಮುನ್ನುಡಿ ಬರೆದಿತ್ತು. ಕಾಂತಾರದ ಮೂಲಕ ಆ ನಂಬಿಕೆ ಇನ್ನಷ್ಟು ಗಟ್ಟಿಯಾಗಲಿದೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ