ಬಂಟ್ವಾಳ, ಜೂ 14: ಕಾಡಿನೊಳಗೆ ಶೆಡ್ ನಿರ್ಮಿಸಿ ಅಕ್ರಮವಾಗಿ ಗೋವುಗಳನ್ನು ಕಡಿದು ಮಾಂಸ ಮಾಡಿ ಮಾರಾಟ ಮಾಡುತ್ತಿದ್ದ ಅಡ್ಡೆಯೊಂದಕ್ಕೆ ಪುಂಜಾಲಕಟ್ಟೆ ಪೊಲೀಸರು ದಾಳಿ ನಡೆಸಿದ್ದಾರೆ. ಸುಮಾರು 2 ಕಿಂಟ್ವಾಲ್ ಗೂ ಅಧಿಕ ದನದ ಮಾಂಸವನ್ನು ವಶಕ್ಕೆ ಪಡೆದಿದ್ದಾರೆ.
ಪುಂಜಾಲಕಟ್ಟೆ ಪೋಲೀಸ್ ಠಾಣಾ ವ್ಯಾಪ್ತಿಯ ಪುತ್ತಿಲ ಗ್ರಾಮದಲ್ಲಿ ರುವ ಅರಣ್ಯ ಇಲಾಖೆಗೆ ಸೇರಿದ ದಟ್ಟ ಕಾಡಿನ ಮಧ್ಯೆ ಎರಡು ಶೆಡ್ ಗಳನ್ನು ಹಾಕಿ ಮಾಂಸ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇಲೆ ಪೋಲೀಸರು ದಾಳಿ ನಡೆಸಿದ ವೇಳೆ ಮಾಂಸ ಮಾಡುತ್ತಿದ್ದ ಆರೋಪಿಗಳು ಪರಾರಿಯಾಗಿದ್ದಾರೆ. ಸ್ಥಳದಲ್ಲಿ ಮೂರರಿಂದ ನಾಲ್ಕು ಜನ ಆರೋಪಿಗಳು ದನ ಕಡಿದು ವ್ಯಾಪಾರ ವಹಿವಾಟು ನಡೆಸುವ ಬಗ್ಗೆ ಪೋಲೀಸರಿಗೆ ಮಾಹಿತಿ ಇದ್ದು, ಆರೋಪಿಗಳ ಬಗ್ಗೆ ಸುಳಿವು ಕೂಡ ಇದೆ ಎನ್ನಲಾಗಿದೆ.
ಇದೊಂದು ದೊಡ್ಡ ಮಟ್ಟದ ಜಾಲವಾಗಿದ್ದು, ಕಾಡಿನ ಮಧ್ಯೆ ಯಾರು ಹೋಗದಂತಹ ಸ್ಥಳದಲ್ಲಿ ಅನೇಕ ವರ್ಷಗಳಿಂದ ಅಕ್ರಮದನ ಕಡಿಯುವ ಕೆಲಸಗಳು ನಡೆಯುತ್ತಿರಬಹುದು ಎಂಬ ಸಂಶಯ ವ್ಯಕ್ತಪಡಿಸಿದ್ದಾರೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist