ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಪೊನ್ನಂಪೇಟೆ, ಜೂ.24: ಮುಂದಿನ ಸೆಪ್ಟೆಂಬರ್ 26 ರಿಂದ ಲಂಡನಿನ ಬರ್ಮಿಂಗ್ಹ್ಯಾಮ್ ನಲ್ಲಿ ನಡೆಯಲಿರುವ ಕಾಮನ್ವೆಲ್ತ್ ಕರಾಟೆ ಚಾಂಪಿಯನ್ ಶಿಪ್ ಗೆ ಭಾರತ ತಂಡವನ್ನು ಪ್ರತಿನಿಧಿಸಲು ಹಿರಿಯ ಕರಾಟೆಪಟು ಮತ್ತು ಮಾಜಿ ಶಾಸಕ ಸಿ. ಎಸ್. ಅರುಣ್ ಮಾಚಯ್ಯ ಆಯ್ಕೆಗೊಂಡಿದ್ದಾರೆ.
ದಕ್ಷಿಣ ಭಾರತ ಕರಾಟೆ ಫೆಡರೇಷನ್ ಅಧ್ಯಕ್ಷರು, ಕರಾಟೆ ಇಂಡಿಯಾ ಆರ್ಗನೈಜೇಷನ್ ಹಿರಿಯ ಉಪಾಧ್ಯಕ್ಷರು ಹಾಗೂ ಅಖಿಲ ಕರ್ನಾಟಕ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ಅಧ್ಯಕ್ಷರೂ ಆಗಿರುವ ಸಿ.ಎಸ್. ಅರುಣ್ ಮಾಚಯ್ಯ ಅವರು ಈ ಹಿಂದೆ ವಿಶ್ವದ ಹಲವೆಡೆ ನಡೆದ ಹಲವಾರು ಅಂತರರಾಷ್ಟ್ರೀಯ ಚಾಂಪಿಯನ್ಶಿಪ್ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದಾರೆ.
ಇತ್ತೀಚಿಗೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್ ಸಮಾರಂಭದಲ್ಲಿ ಕಾಮನ್ವೆಲ್ತ್ ಕರಾಟೆ ಚಾಂಪಿಯನ್ಶಿಪ್ ನಲ್ಲಿ ಪಾಲ್ಗೊಳ್ಳಲು ಆಯ್ಕೆಯಾಗಿರುವ ಅರುಣ್ ಮಾಚಯ್ಯ ಅವರನ್ನು ಅಭಿನಂದಿಸಿ ಬೀಳ್ಕೊಡಲಾಯಿತು.
ಅರುಣ್ ಮಾಚಯ್ಯ ಅವರನ್ನು ಅಭಿನಂದಿಸಿದ ಸಂದರ್ಭದಲ್ಲಿ ಕರಾಟೆ ಇಂಡಿಯಾ ಆರ್ಗನೈಸೇಶನ್ ಅಧ್ಯಕ್ಷರಾದ ಸಂಜೀವ್ ಕುಮಾರ್ ಜಾಗ್ರ, ವಿಶ್ವ ಕರಾಟೆ ಮಂಡಳಿಯ ತಾಂತ್ರಿಕ ಆಯೋಗದ ಸದಸ್ಯ ಭರತ್ ಶರ್ಮ, ಮಹಾರಾಷ್ಟ್ರ ಕರಾಟೆ ಅಸೋಸಿಯೇಷನ್ ಅಧ್ಯಕ್ಷ ಸಲಾಹುದ್ದೀನ್ ಅನ್ಸಾರಿ, ಮಹಾರಾಷ್ಟ್ರ ಕರಾಟೆ ಅಸೋಸಿಯೇಷನ್ ಕಾರ್ಯದರ್ಶಿ ಸಂದೀಪ್ ಘಾಡೆ ಮೊದಲಾದವರು ಉಪಸ್ಥಿತರಿದ್ದರು.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?