ಕಿನ್ನಿಗೋಳಿ: 10ನೇ ತರಗತಿ ವಿದ್ಯಾರ್ಥಿ ಜ್ವರಕ್ಕೆ ಬಲಿ
Twitter
Facebook
LinkedIn
WhatsApp
ಕಿನ್ನಿಗೋಳಿ, ಮಾ 31 : ಕಿನ್ನಿಗೋಳಿಯ ಪಕ್ಷಿಕೆರೆ ಎಂಬಲ್ಲಿ ಬಾಲಕನೋರ್ವ ತೀವ್ರ ಜ್ವರದಿಂದ ಮೃತಪಟ್ಟಿರುವ ಘಟನೆ ನಡೆದಿದೆ.
ಪಕ್ಷಿಕೆರೆ ಜುಮಾ ಮಸೀದಿ ಬಳಿಯ ನಿವಾಸಿ ಇಸ್ಮಾಯೀಲ್ ಅವರ ಪುತ್ರ 10ನೇ ತರಗತಿ ವಿದ್ಯಾರ್ಥಿ ಹಿಲಾಲ್(16 )ಮೃತ ಬಾಲಕ.
ಹಿಲಾಲ್ ಗೆ ಕೆಲದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿದ್ದು, ಆತನನ್ನು ಕಿನ್ನಿಗೋಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು ಎಂದು ತಿಳಿದು ಬಂದಿದೆ.
ಇನ್ನು ಚಿಕಿತ್ಸೆ ಫಲಕಾರಿಯಾಗದೆ ಹಿಲಾಲ್ ಇಂದು ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ತಿಳಿದು ಬಂದಿದೆ.