ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕುಂದಾಪುರ: ಪಿಯುಸಿ ಪರೀಕ್ಷೆಯಲ್ಲಿ ಟಾಪರ್-ಟ್ಯೂಷನ್ ಇಲ್ಲದೆ ಅನಿರೀಕ್ಷಿತ ಸಾಧನೆ

Twitter
Facebook
LinkedIn
WhatsApp
342209727 1587805555027553 6420748993116079768 n 4

 ಕುಂದಾಪುರ, ಏ.21 :ಕುಂದಾಪುರದ ವೆಂಕಟರಮಣ ಆಂಗ್ಲ ಮಾಧ್ಯಮ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ನೇಹಾ ಜೆ.ರಾವ್ ಪಿಯುಸಿ ಪರೀಕ್ಷೆಯಲ್ಲಿ 594 ಅಂಕಗಳನ್ನು ಪಡೆದಕೊಂಡಿದ್ದು ಆ ಮೂಲಕ ರಾಜ್ಯಕ್ಕೆ 3ನೇ ಸ್ಥಾನ ಪಡೆದುಕೊಂಡಿದ್ದಾರೆ.

600 ಅಂಕಗಳಲ್ಲಿ 594ಅಂಕಗಳನ್ನು ಪಡೆದುಕೊಂಡಿದ್ದಾರೆ. ಸಂಸ್ಕೃತ, ಕಂಪ್ಯೂಟರ್‌ನಲ್ಲಿ 100, ರಸಾಯನಶಾಸ್ತ್ರ, ಗಣಿತದಲ್ಲಿ 99, ಇಂಗ್ಲಿಷ್, ಭೌತಶಾಸ್ತ್ರದಲ್ಲಿ 98 ಅಂಕಗಳನ್ನು ಗಳಿಸಿದ್ದಾರೆ.

ಕುಂದಾಪುರ ನಗರದ ಮುಖ್ಯ ರಸ್ತೆಯಲ್ಲಿ ಆಶೀರ್ವಾದ ಚಿನ್ನದ ಆಭರಣ ತಯಾರಿಕಾ ಮಳಿಗೆ ಹೊಂದಿರುವ ಕುಂದಾಪುರ ಬಸ್ರೂರು ಮೂರುಕೈ ನಿವಾಸಿ ಜಗದೀಶ್ ರಾವ್ ಎಚ್. ಹಾಗೂ ಸ್ಮೀತಾ ದಂಪತಿಯ ಇಬ್ಬರು ಮಕ್ಕಳಲ್ಲಿ ನೇಹಾ ಮೊದಲನೇಯವರು. ಅವರಿಗೆ ಒಬ್ಬ ಕಿರಿಯ ಸಹೋದರ ಇದ್ದಾರೆ. ಎಲ್.ಕೆ.ಜಿ ಯಿಂದ ಪದವಿ ಪೂರ್ವದವರೆಗಿನ ಶಿಕ್ಷಣವನ್ನು ಅವರು ನಗರದ ಶ್ರೀ ವೆಂಕಟ ರಮಣ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಗಳಲ್ಲಿಯೇ ಪಡೆದುಕೊಂಡಿದ್ದಾರೆ.

ಈ ಬಗ್ಗೆ ಮಾತನಾಡಿದ ನೇಹಾ, ಪರೀಕ್ಷೆ ತುಂಬಾ ಸುಲಭವಾಗಿದ್ದರಿಂದ ಒಳ್ಳೆಯ ಅಂಕಗಳು ಬರುವ ನಿರೀಕ್ಷೆ ಇತ್ತು. ಆದರೆ ರಾಜ್ಯಕ್ಕೆ ರ್ಯಾಂಕ್ ಬರುತ್ತೆ ಎಂದುಕೊಂಡಿರಲಿಲ್ಲ. ಮೂರನೇಯ ರ್ಯಾಂಕ್ ಬಂದಿರುವುದು ತುಂಬಾ ಖುಷಿಯಾಗಿದೆ. ಇದಕ್ಕೆಲ್ಲ ಕಾರಣ ನಮ್ಮ ಕಾಲೇಜಿನ ಪ್ರಾಂಶುಪಾಲರು ಹಾಗೂ ಉಪನ್ಯಾಸಕರು. ದಿನನಿತ್ಯ ಬೆಳಿಗ್ಗೆ ಐದು ಗಂಟೆಗೆ ಎದ್ದು ಓದುವ ಪರಿಪಾಠ ಬೆಳೆಸಿಕೊಂಡಿದ್ದೆ. ಮತ್ತೆ ಸಂಜೆ ಮನೆಗೆ ವಾಪಾಸಾಗಿ ದಿನನಿತ್ಯದ ಪಾಠಗಳನ್ನು ಆಯಾಯ ದಿನಗಳಲ್ಲಿ ಓದುತ್ತಿದ್ದೆ. ಪರೀಕ್ಷಾ ಅವಧಿಯಲ್ಲಿ ವೇಳಾಪಟ್ಟಿ ತಯಾರಿಸಿ ಅದರಂತೆಯೇ ಓದುವ ಪರಿಪಾಠವನ್ನು ಬೆಳೆಸಿಕೊಂಡಿದ್ದೆ ಎಂದರು.

‘ಯಾವುದೇ ಟ್ಯೂಷನ್‌ಗೆ ಹೋಗಿರಲಿಲ್ಲ. ಕಾಲೇಜಿನ ಪಾಠ, ಪ್ರವಚನ ಹಾಗೂ ಕೋಚಿಂಗ್ ತರಗತಿಯ ತರಬೇತಿ ನನಗೆ ಅಂಕವನ್ನು ಪಡೆದು ಕೊಳ್ಳಲು ಸಹಾಯವಾಗಿದೆ. ನನಗೆ ಮುಂದೆ ಸಾಫ್ಟ್‌ವೇರ್ ಇಂಜಿನಿಯರ್ ಆಗಬೇಕು ಎಂಬ ಆಸೆ ಇದೆ ಎಂದು ಅವರು ತಿಳಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist