ಬುಧವಾರ, ಮೇ 8, 2024
ಕೋವಿಶೀಲ್ಡ್‌ ಅಡ್ಡ ಪರಿಣಾಮ ಬಹಿರಂಗ ಆದ ಬೆನ್ನಲ್ಲೇ ಉತ್ಪಾದನೆ ಸ್ಥಗಿತಗೊಂಡಿದೆ ಎಂದ ಕಂಪೆನಿ..!-ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ..!-ಶಾಕಿಂಗ್ ನ್ಯೂಸ್; ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು..!-ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!-ಮದುವೆ ಆಗಲ್ಲ, ಆದರೆ ರಾಜಕೀಯಕ್ಕೆ ಹೋಗುವ ಆಸೆ ಇದೆ; ಸೋನು ಶ್ರೀನಿವಾಸ್ ಗೌಡ-ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!-ರೋಹಿಣಿ ಸಿಂಧೂರಿ ಮತ್ತು ರೂಪ ಮೌದ್ಗಿಲ್ ಗೆ ನ್ಯಾಯಾಲಯ ಮಹತ್ವದ ಸಲಹೆ ; ಏನದು?-ಕೋವಿಶೀಲ್ಡ್ ಲಸಿಕೆ ಹಿಂಪಡೆದ ತಯಾರಕ ಕಂಪನಿ ಆಸ್ಟ್ರಾಜೆನಿಕಾ..!-ಹೆಚ್ ಡಿ ರೇವಣ್ಣಗೆ ಮೇ 14 ರವರೆಗೆ ನ್ಯಾಯಾಂಗ ಬಂಧನ ಮುಂದೂಡಿಕೆ..!-ಮಂಗಳೂರು: 21 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ...!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ದುರಂತ – ಏರ್ ಇಂಡಿಯಾ, ನೇಪಾಳ ಏರ್‌ಲೈನ್ಸ್ ಡಿಕ್ಕಿ ಜಸ್ಟ್ ಮಿಸ್

Twitter
Facebook
LinkedIn
WhatsApp
Scholarship Application on a t 2

ಕಠ್ಮಂಡು: ಏರ್ ಇಂಡಿಯಾ (Air India) ಹಾಗೂ ನೇಪಾಳ ಏರ್‌ಲೈನ್ಸ್ (Nepal Airlines) ವಿಮಾನಗಳ (Flight) ನಡುವೆ ಸಂಭವಿಸಬಹುದಾಗಿದ್ದ ಭಾರೀ ಅನಾಹುತ ಕೂದಲೆಳೆ ಅಂತರದಲ್ಲಿ ತಪ್ಪಿರುವ ಘಟನೆ ತಡವಾಗಿ ವರದಿಯಾಗಿದೆ. ಎರಡೂ ವಿಮಾನಗಳ ನಡುವೆ ಡಿಕ್ಕಿ ಸಂಭವಿಸುವ ಸಾಧ್ಯತೆಯಿದ್ದು, ವಿಮಾನದ ಎಚ್ಚರಿಕೆ ವ್ಯವಸ್ಥೆ ಪೈಲಟ್‌ಗಳಿಗೆ ಅಪಾಯದ ಸೂಚನೆಯನ್ನು ನೀಡಿದ್ದರಿಂದ ದೊಡ್ಡ ಅನಾಹುತವನ್ನು ತಪ್ಪಿಸಲಾಗಿದೆ.

ವರದಿಗಳ ಪ್ರಕಾರ ಮಲೇಷ್ಯಾದ ಕೌಲಾಲಂಪುರದಿಂದ ಕಠ್ಮಂಡುಗೆ (Kathmandu) ತೆರಳುತ್ತಿದ್ದ ನೇಪಾಳ ಏರ್‌ಲೈನ್ಸ್ ವಿಮಾನ ಹಾಗೂ ದೆಹಲಿಯಿಂದ ಕಠ್ಮಂಡುಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಶುಕ್ರವಾರ ಪರಸ್ಪರ ಡಿಕ್ಕಿ ಹೊಡೆಯಲು ಅತ್ಯಂತ ಹತ್ತಿರದಲ್ಲಿತ್ತು ಎನ್ನಲಾಗಿದೆ.

ಏರ್ ಇಂಡಿಯಾ ವಿಮಾನ ಭೂಮಿಯಿಂದ 19,000 ಅಡಿ ಎತ್ತರದಿಂದ ಕೆಳಗಿಳಿಯುತ್ತಿದ್ದರೆ, ನೇಪಾಳ ಏರ್‌ಲೈನ್ಸ್ ವಿಮಾನ ಅದೇ ಸ್ಥಳದಲ್ಲಿ 15,000 ಅಡಿ ಎತ್ತರದಲ್ಲಿ ಹಾರಾಟ ನಡೆಸುತ್ತಿತ್ತು. ಎರಡು ವಿಮಾನಗಳು ಅತ್ಯಂತ ಸಮೀಪದಲ್ಲಿದೆ ಎಂದು ರಾಡಾರ್‌ನಲ್ಲಿ ತೋರಿಸಿದ್ದರಿಂದ ನೇಪಾಳ ಏರ್‌ಲೈನ್ಸ್ ವಿಮಾನ 7,000 ಅಡಿಗಳಿಗೆ ಇಳಿದಿದೆ ಎಂದು ನೇಪಾಳದ ನಾಗರಿಕ ವಿಮಾನಯಾನ ಪ್ರಾಧಿಕಾರ (ಸಿಎಎಎನ್) ವಕ್ತಾರರು ತಿಳಿಸಿದ್ದಾರೆ.

ಸದ್ಯ ಎರಡು ವಿಮಾನಗಳ ನಡುವೆ ಸಂಭವಿಸಬಹುದಾಗಿದ್ದ ಭಾರೀ ಅನಾಹುತ ಕೂದಲೆಳೆ ಅಂತರದಲ್ಲಿ ತಪ್ಪಿದೆ. ನಾಗರಿಕ ವಿಮಾನಯಾನ ಪ್ರಾಧಿಕಾರ ಅಜಾಗರೂಕತೆ ವಹಿಸಿದ ಹಿನ್ನೆಲೆ ಏರ್ ಟ್ರಾಫಿಕ್ ಕಂಟ್ರೋಲ್ ವಿಭಾಗದ ಮೂವರು ಉದ್ಯೋಗಿಗಳನ್ನು ಅಮಾನತುಗೊಳಿಸಿದೆ. ಘಟನೆಯ ತನಿಖೆಗಾಗಿ 3 ಸದಸ್ಯರ ಸಮಿತಿಯನ್ನು ರಚಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ