ಗುರುವಾರ, ಮೇ 2, 2024
ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ-ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!-ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ-ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!-Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ-ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೋವಿಡ್ ನಿಯಂತ್ರಣಕ್ಕೆ ಕರ್ನಾಟಕ ಬಿಗಿ ಕ್ರಮ ಸಿಎಂ ನೇತೃತ್ವದ ಅಧಿಕಾರಿಗಳ ಸಭೆಯ 12 ತೀರ್ಮಾನಗಳು

Twitter
Facebook
LinkedIn
WhatsApp
ಕೋವಿಡ್ ನಿಯಂತ್ರಣಕ್ಕೆ ಕರ್ನಾಟಕ ಬಿಗಿ ಕ್ರಮ ಸಿಎಂ ನೇತೃತ್ವದ ಅಧಿಕಾರಿಗಳ ಸಭೆಯ 12 ತೀರ್ಮಾನಗಳು

ಬೆಂಗಳೂರು: ಕೋವಿಡ್ 19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಬಿಬಿಎಂಪಿ ಸಹಿತ ಬೆಂಗಳೂರು ನಗರ ಜಿಲ್ಲೆ, ಧಾರವಾಡ, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ , ಕೊಡಗು, ಮೈಸೂರು ಸೇರಿ ಏಳು ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೊ ಸಂವಾದ ನಡೆಸಿದರು.

ಸಚಿವರಾದ ಆರ್.ಅಶೋಕ್, ಡಾ. ಸಿ.ಎನ್.ಅಶ್ವತ್ಥನಾರಾಯಣ್, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್, ಆರೋಗ್ಯ ಇಲಾಖೆ ಕಾರ್ಯದರ್ಶಿ ಟಿ.ಕೆ.ಅನಿಲ್ ಕುಮಾರ್, ಆಯುಕ್ತ ರಂದೀಪ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಕೋವಿಡ್ 19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಭೆಯಲ್ಲಿ ಕೈಗೊಂಡ ಪ್ರಮುಖ ತೀರ್ಮಾನಗಳು

ಕೇರಳ ಮತ್ತು ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ.

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬಿಗಿ ವಿಚಕ್ಷಣೆ ಕೈಗೊಳ್ಳುವುದು

ಕೇರಳ ಮತ್ತು ಮಹಾರಾಷ್ಟ್ರದಿಂದ ರಾಜ್ಯ ಪ್ರವೇಶಿಸುವವರಿಗೆ ಆರ್.ಟಿ.ಪಿ.ಸಿ.ಆರ್. ನೆಗೆಟಿವ್ ರಿಪೋರ್ಟ್ ಕಡ್ಡಾಯ.
ಗಡಿ ಜಿಲ್ಲೆಗಳಲ್ಲಿ ಮೂರು ಶಿಫ್ಟ್ ಗಳಲ್ಲಿ ಕೆಲಸ ಮಾಡುವಂತೆ ಡಿಸಿಗಳಿಗೆ ಸೂಚನೆ. ಇದಕ್ಕೆ ಎಲ್ಲ ಇಲಾಖೆಗಳ ಸಹಕಾರ ಪಡೆಯುವುದು.

16 ದಿನಗಳ ಹಿಂದೆ ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಆರ್.ಟಿ.ಪಿ.ಸಿ.ಆರ್. ಪರೀಕ್ಷೆ ಮಾಡಿಸಬೇಕು.
ಹಾಸ್ಟೆಲ್ ಗಳಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿಗಳಿಗೆ ನೆಗಟಿವ್ ರಿಪೋರ್ಟ್ ಬಂದ ನಂತರದ 7ನೇ ದಿನಕ್ಕೆ ಮತ್ತೊಮ್ಮೆ ಆರ್.ಟಿ.ಪಿ.ಸಿ.ಆರ್. ಪರೀಕ್ಷೆ ಮಾಡುವುದು.

ಕೇರಳ ಮತ್ತು ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವವರನ್ನು ಕಡ್ಡಾಯವಾಗಿ ಪರೀಕ್ಷೆಗೊಳಪಡಿಸಬೇಕು.

ಹೊಟೇಲ್, ರೆಸ್ಟೋರೆಂಟ್‌ಗಳು, ಸಿನಿಮಾ ಹಾಲ್‌ಗಳು, ಈಜುಗೊಳ, ಸಾರ್ವಜನಿಕ ಗ್ರಂಥಾಲಯ, ಮೃಗಾಲಯಗಳು ಮತ್ತು ಜೈವಿಕ ಉದ್ಯಾನವನಗಳು, ಕೆಲಸ ಮಾಡುವವರು ಕಡ್ಡಾಯವಾಗಿ ಎರಡು ಡೋಸ್ ಪಡೆದಿರಬೇಕು.

ವೈದ್ಯಕೀಯ ಕಾಲೇಜು ಮತ್ತು ನರ್ಸಿಂಗ್ ಕಾಲೇಜುಗಳ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿಸುವುದು.
ಸರಕಾರಿ ಕಚೇರಿಗಳಲ್ಲಿ ಹಾಗೂ ಮಾಲ್‌ಗಳಲ್ಲಿ ಕೆಲಸ ಮಾಡುವವರು ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಪಡೆಯಬೇಕು. ಸರಕಾರಿ ಕಚೇರಿ ಹಾಗೂ ಮಾಲ್‌ಗಳಲ್ಲಿಯೇ ಲಸಿಕೆ ನೀಡಲು ವ್ಯವಸ್ಥೆ ಕಲ್ಪಿಸುವುದು.

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಪಾಸಣೆಗಳನ್ನು ತೀವ್ರಗೊಳಿಸುವುದು. ನೆಗಟಿವ್ ಇದ್ದವರಿಗೆ ನಗರ ಪ್ರವೇಶಕ್ಕೆ ಅನುಮತಿ.

ಕೋವಿಡ್ ಪಾಸಿಟಿವ್ ಇದ್ದವರಿಗೆ ಚಿಕಿತ್ಸೆಗೆ ಆಸ್ಪತ್ರೆಗೆ ಕಳುಹಿಸುವುದು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು