ಶುಕ್ರವಾರ, ಮೇ 3, 2024
ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಖಡ್ಗ ಹಿಡಿದು ಶ್ರದ್ಧಾ ಹಂತಕ ಅಫ್ತಾಬ್ ಮೇಲೆ ದಾಳಿಗೆ ಯತ್ನ; ಪೊಲೀಸ್‌ ವಾಹನದ ಮೇಲೆ ಮುಗಿಬಿದ್ದ ಗುಂಪು!

Twitter
Facebook
LinkedIn
WhatsApp
ಖಡ್ಗ ಹಿಡಿದು ಶ್ರದ್ಧಾ ಹಂತಕ ಅಫ್ತಾಬ್ ಮೇಲೆ ದಾಳಿಗೆ ಯತ್ನ; ಪೊಲೀಸ್‌ ವಾಹನದ ಮೇಲೆ ಮುಗಿಬಿದ್ದ ಗುಂಪು!

ಹೊಸದಿಲ್ಲಿ: ಶ್ರದ್ಧಾ ವಾಕರ್ ಹತ್ಯೆ ಆರೋಪಿ ಅಫ್ತಾಬ್ ಪೂನಾವಾಲಾನನ್ನು ಕರೆದೊಯ್ಯುತ್ತಿದ್ದ ಪೊಲೀಸ್‌ ವಾಹನದ ಮೇಲೆ ಗುಂಪೊಂದು ದಾಳಿ ನಡೆಸಿದೆ. ಸೋಮವಾರ ಸಂಜೆ ಕತ್ತಿಗಳನ್ನು ಹಿಡಿದ ಜನರ ಗುಂಪೊಂದು ವಿಧಿ ವಿಜ್ಞಾನ ಪ್ರಯೋಗಾಲಯದಿಂದ ಜೈಲಿಗೆ ವಾಪಸ್‌ ಕರೆದೊಯ್ಯುತ್ತಿರುವಾಗ ಪೊಲೀಸ್‌ ವಾಹನದ ಮೇಲೆ ದಾಳಿ ನಡೆಸಿದ್ದು, ಅಫ್ತಾಬ್‌ನ ರಕ್ಷಣೆಗಾಗಿ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ.

ಶ್ರದ್ಧಾ ವಾಕರ್‌ ಹತ್ಯೆ ಪ್ರಕರಣಕ್ಕೆ ಸಂಬಂದಿಸಿದಂತೆ ಅಫ್ತಾಬ್‌ ಪೂನಾವಾಲಾಗೆ ಎರಡನೇ ಬಾರಿ ಪಾಲಿಗ್ರಾಫ್‌ ಪರೀಕ್ಷೆಯನ್ನು ಸೋಮವಾರ ನಡೆಸಲಾಯಿತು. ಅದಕ್ಕಾಗಿ ಆರೋಪಿ ಅಫ್ತಾಬ್‌ ಅನ್ನು ಪಶ್ಚಿಮ ದಿಲ್ಲಿಯಲ್ಲಿರುವ ರೋಹಿಣಿಯ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕರೆದುಕೊಂಡು ಬರಲಾಗಿತ್ತು. ಪರೀಕ್ಷೆಯ ಬಳಿಕ ಅಫ್ತಾಬ್‌ ಅನ್ನು ಜೈಲಿಗೆ ಕರೆದೊಯ್ಯುವ ವೇಳೆ ಎಫ್‌ಎಸ್‌ಎಲ್‌ ಕಟ್ಟಡದ ಹೊರಗಡೆ ಪೊಲೀಸರ ವಾಹನ ಬರುತ್ತಿದ್ದಂತೆ ಕತ್ತಿಯಿಡಿದ ಜನರ ಗುಂಪು ದಾಳಿ ನಡೆಸಿದೆ.

ಕತ್ತಿ ಹಿಡಿದಿದ್ದ ಹದಿನೈದು ಮಂದಿಯ ಗುಂಪು ಪೊಲೀಸ್‌ ವಾಹನದ ಮೇಲೆ ಹತ್ತಿತ್ತು. ಆ ವ್ಯಕ್ತಿಗಳು ಅಫ್ತಾಬ್‌ನನ್ನು ಹುಡುಕುತ್ತಿದ್ದರು, ಅವರೆಲ್ಲಾ ಬಲಪಂಥೀಯ ಗುಂಪಿನ ಭಾಗವಾಗಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಲು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ ಎನ್ನಲಾಗಿದ್ದು, ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಅಫ್ತಾಬ್ ಪೂನಾವಾಲಾ ಸುರಕ್ಷಿತವಾಗಿದ್ದಾರೆ. ಘಟನೆಯಲ್ಲಿ ಕೆಲವು ದಾಳಿಕೋರರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಬಗ್ಗೆ ಎಎನ್‌ಐ ಸುದ್ದಿಸಂಸ್ಥೆ ವಿಡಿಯೋ ಒಂದನ್ನು ಟ್ವೀಟ್‌ ಮಾಡಿದ್ದು, ಅದರಲ್ಲಿ ಪೊಲೀಸ್ ಸಿಬ್ಬಂದಿ ಒಬ್ಬರು ದಾಳಿಕೋರರನ್ನು ಓಡಿಸಲು ವಾಹನದಿಂದ ಹೊರಬಂದಿರುವುದನ್ನು ಕಾಣಬಹುದು. ಆದರೆ, ದಾಳಿಕೋರರು ವಾಹನದ ಮೇಲೆ ದಾಳಿ ಮುಂದುವರಿಸಿದಾಗ ಪೊಲೀಸ್‌ ತಮ್ಮ ಪಿಸ್ತೂಲ್‌ ಅನ್ನು ಹೊರಗೆ ತೆಗೆದು ವಾಹನ ಮುಂದೆ ಸಾಗುವಂತೆ ಮಾಡಿದ್ದಾರೆ. ಈ ವೇಳೆ ಪೊಲೀಸ್‌ ಸಿಬ್ಬಂದಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ ಎನ್ನಲಾಗಿದ್ದು, ಈ ಬಗ್ಗೆ ಪೊಲೀಸರು ಖಚಿತಪಡಿಸಿಲ್ಲ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ