ಸೋಮವಾರ, ಮೇ 6, 2024
ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!-ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!-ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಖಾಸಗಿ ಲೇವಾದೇವಿದಾರರಿಂದ ಹಣ ಪಡೆದು ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡ ರೈತರಿಗೂ ಪರಿಹಾರ ನೀಡಲು ಸರಕಾರಕ್ಕೆ ಹೈಕೋರ್ಟ್ ಸೂಚನೆ.

Twitter
Facebook
LinkedIn
WhatsApp
ಖಾಸಗಿ ಲೇವಾದೇವಿದಾರರಿಂದ ಹಣ ಪಡೆದು ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡ ರೈತರಿಗೂ ಪರಿಹಾರ ನೀಡಲು ಸರಕಾರಕ್ಕೆ ಹೈಕೋರ್ಟ್ ಸೂಚನೆ.

ಬೆಂಗಳೂರು: ಖಾಸಗಿ ಲೇವಾದೇವಿದಾರರಿಂದ ಸಾಲ ಪಡೆದು ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡ ರೈತರಿಗೆ ಪರಿಹಾರ ನೀಡಬೇಕೆಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಂಗಳವಾರ ಸೂಚನೆ ನೀಡಿದೆ.
ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ರೈತರಿಗೆ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ 2016ರಿಂದ ಬೆಳೆ ನಷ್ಟ ವಿಮೆ ಪರಿಹಾರ ವಿತರಿಸಿಲ್ಲ ಎಂದು ಆಕ್ಷೇಪಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನಿನ್ನೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ವಿಚಾರಣೆಗೆ ಹಾಜರಾಗಿದ್ದ ಅರ್ಜಿದಾರರ ಪರ ವಕೀಲರು ಈ ಹಿಂದೆ ರಾಜ್ಯ ಸರ್ಕಾರ ಹೊರಡಿಸಿದ್ದ ರೈತರು ಖಾಸಗಿ ಲೇವಾದೇವಿದಾರರಿಂದ ಸಾಲ ಪಡೆದು ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡರೆ ಅಂತಹ ಕುಟುಂಬಗಳಿಗೆ ಪರಿಹಾರ ನೀಡಲು ಸಾಧ್ಯವಿಲ್ಲ ಎಂಬ ಆದೇಶಕ್ಕೆ ವಿರೋಧ ವ್ಯಕ್ತಪಡಿಸಿ, ಸರ್ಕಾರದ ಆದೇಶ ಅಸಮಾನತೆಯಿಂದ ಕೂಡಿದೆ ಎಂದು ಹೇಳಿದರು

ರೈತರು ಖಾಸಗಿ ಲೇವಾದೇವಿಗಾರರಿಂದ ಸಾಲ ಪಡೆಯುವ ವೇಳೆ ಅವರು ಲೈಸೆನ್ಸ್ ಪಡೆದಿದ್ದಾರೋ ಇಲ್ಲವೋ ಎಂಬುದನ್ನು ತಿಳಿದಿರುವುದಿಲ್ಲ. ಹೀಗಾಗಿ, ಪರವಾನಿಗೆ ಪಡೆದ ಲೇವಾದೇವಿದಾರರಿಂದ ಸಾಲ ಪಡೆದು ತೀರಿಸಲಾಗದೆ ಮೃತಪಟ್ಟ ರೈತರಿಗೆ ಪರಿಹಾರ ನೀಡಿ, ಉಳಿದವರಿಗೆ ಪರಿಹಾರ ನೀಡದೆ ಇರುವುದು ಸರಿಯಲ್ಲ ಎಂದು ಹೇಳಿದರು.
ಇದಕ್ಕೆ ಪ್ರತಿಕ್ರಿಯಿಸಿರುವ ಹೈಕೋರ್ಟ್, ಸರ್ಕಾರದ ಆದೇಶವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲು ಅರ್ಜಿದಾರರು ಸ್ವತಂತ್ರರಿದ್ದಾರೆ ಎಂದು ಹೇಳಿತು.
ಬಳಿಕ ಸರ್ಕಾರದ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ಪರವಾನಿಗೆ ಪಡೆದ ಖಾಸಗಿ ಲೇವಾದೇವಿಗಾರರಿಂದ ಪಡೆದ ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿರುವ ರೈತರ ಕುಟುಂಬಗಳಿಗೆ ಪರಿಹಾರ ನೀಡಲು ನಿರ್ಧರಿಸಿದ್ದು, ಈ ಕುರಿತು ಜುಲೈ 8ರಂದು ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು