ಮಂಗಳವಾರ, ಮೇ 21, 2024
ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಖ್ಯಾತ ಕಬಡ್ಡಿ ಆಟಗಾರ ಉದಯ ಚೌಟ ಇನ್ನಿಲ್ಲ..!

Twitter
Facebook
LinkedIn
WhatsApp
ಖ್ಯಾತ ಕಬಡ್ಡಿ ಆಟಗಾರ ಉದಯ ಚೌಟ ಇನ್ನಿಲ್ಲ..!

ಬಂಟ್ವಾಳ: ಅನಾರೋಗ್ಯದಿಂದ ಬಳಲುತ್ತಿದ್ದ ಖ್ಯಾತ ಕಬಡ್ಡಿ ಆಟಗಾರ ಉದಯ ಚೌಟ ಅನಾರೋಗ್ಯದಿಂದಾಗಿ ಶನಿವಾರ ನಿಧನರಾಗಿದ್ದಾರೆ.

ದೇಶದ ಪ್ರಮುಖ ಕಬಡ್ಡಿ ಆಟಗಾರರಲ್ಲಿ ಒಬ್ಬರಾದ ಉದಯ ಚೌಟರವರು ಬಂಟ್ವಾಳ ತಾಲೂಕಿನ ಮಾಣಿಯ ಬದಿಗುಡ್ಡೆ ನಿವಾಸಿ. 2007ರ ದ್ವಿತೀಯ ವಿಶ್ವಕಪ್ ಕಬಡ್ಡಿ ಪಂದ್ಯಾಟದಲ್ಲಿ ಗೆಲುವು ಸಾಧಿಸಿರುವ ತಂಡದಲ್ಲಿ ಅತ್ಯುತ್ತಮ ಆಟಗಾರ ಪ್ರಶಸ್ತಿಯನ್ನು ಪಡೆದಿದ್ದರು.
ಪ್ರಸಕ್ತ ಬ್ಯಾಂಕ್ ಆಫ್ ಬರೋಡದ ಸುರತ್ಕಲ್ ಕಚೇರಿಯಲ್ಲಿ ಉಪ ಪ್ರಬಂಧಕರಾಗಿರುವ ಉದಯ ಚೌಟ, ಕ್ರೀಡಾ ಕೋಟದಲ್ಲಿ 8 ತಿಂಗಳ ಕಾಲ ಏರ್ ಇಂಡಿಯಾ ಮತ್ತು 10 ತಿಂಗಳ ಕಾಲ ಕೆಪಿಟಿಸಿಎಲ್ ಉದ್ಯೋಗದಲ್ಲಿದ್ದರು.
ಮಾಣಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ಪುತ್ತೂರು ಸರ್ಕಾರಿ ಕಾಲೇಜಿನಲ್ಲಿ ಪಿಯುಸಿ, ಪುತ್ತೂರು ಸಂತ ಫಿಲೋಮಿನ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡಿರುವ ಇವರು ವಿದ್ಯಾರ್ಥಿ ದೆಸೆಯಿಂದಲೂ ಕ್ರೀಡಾಕ್ಷೇತ್ರದಲ್ಲಿ ಅಪಾರ ಆಸಕ್ತಿಯನ್ನು ಹೊಂದಿದ್ದರು. ಪಿಯುಸಿಯಲ್ಲಿ ವಾಲಿಬಾಲ್, ಕಬಡ್ಡಿಯಲ್ಲಿ ಆಸಕ್ತಿ ಹೊಂದಿದ್ದರು.
ವಿದ್ಯಾಭ್ಯಾಸ ಮಾಡುತ್ತಿದ್ದಾಗಲೇ ನಾಲ್ಕು ವರ್ಷ ಅಂತರ್ ಕಾಲೇಜು ಕಬಡ್ಡಿ ಪಂದ್ಯಾಟದಲ್ಲಿ ಜಯಗಳಿಸಿದ್ದ ಉದಯ್ ಚೌಟರವರು ಅಂತರ್ ವಿಶ್ವವಿದ್ಯಾನಿಲಯಕ್ಕೆ ಸೌತ್‌ರೆನ್‌ಗೆ ಮಂಗಳೂರು ವಿವಿಯನ್ನು ಮೂರು ವರ್ಷ ಪ್ರತಿನಿಧಿಸಿದ್ದರು. 1993ರಲ್ಲಿ ಜೂನಿಯರ್ ನ್ಯಾಷನಲ್‌ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ಇವರು 2000ದಿಂದ 2008ರವರೆಗೆ ರಾಷ್ಟ್ರೀಯ ತಂಡದಲ್ಲಿದ್ದರು. ಬ್ಯಾಂಕ್ ಒಲಿಂಪಿಯಾಡ್ ತಂಡದ ನಾಯಕನಾಗಿ, ಬ್ಯಾಂಕ್ ಸ್ಪೋರ್ಟ್ಸ್ ಬೋರ್ಡ್ ತಂಡದ ನಾಯಕನಾಗಿ ಕಾರ್ಯನಿರ್ವಹಿಸಿದ ಇವರು ಇದರಲ್ಲಿ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ. ದ.ಕ ಜಿಲ್ಲೆಯ ಅಮೆಚ್ಯೂರ್ ಕಬಡ್ಡಿ ಅಸೋಸಿಯೇಶನ್‌ನ ಸಂಘಟನಾ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.
ಏಕಲವ್ಯ ಪ್ರಶಸ್ತಿ ಪಡೆದ ಜಿಲ್ಲೆಯ ಪ್ರಥಮ ಕಬಡ್ಡಿ ಆಟಗಾರ:
2004ರಲ್ಲಿ ಭಾರತ-ಬಾಂಗ್ಲಾ ಟೆಸ್ಟ್ ಕಬಡ್ಡಿ ಪಂದ್ಯಾಟದಲ್ಲಿ 5 ಪಂದ್ಯಗಳನ್ನು ಜಯಿಸಿ ಚಿನ್ನದ ಪದಕವನ್ನು ಪಡೆದಿದ್ದರು. ಕ್ರೀಡೆಯಲ್ಲಿ ಅತ್ಯುತ್ತಮ ಸಾಧನೆಗೆ ಕರ್ನಾಟಕ ಸರಕಾರ ನೀಡುವ ಏಕಲವ್ಯ ಪ್ರಶಸ್ತಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಪ್ರಥಮ ಬಾರಿಗೆ ಪಡೆದ ಹೆಗ್ಗಳಿಕೆ ಇವರದ್ದು. 20 ವರ್ಷಗಳ ಕಾಲ ಕಬಡ್ಡಿ ಜೀವನದಲ್ಲಿ ಅಖಿಲ ಭಾರತ ಮಟ್ಟದಲ್ಲಿ 100ಕ್ಕೂ ಅಧಿಕ, ರಾಜ್ಯಮಟ್ಟದಲ್ಲಿ 300 ಕ್ಕೂ ಅಧಿಕ ಪಂದ್ಯಾಟಗಳನ್ನು ಆಡಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.! Twitter Facebook LinkedIn WhatsApp ಮಂಗಳೂರು: ಕಾರು ಚಾಲಕನ ನಿರ್ಲಕ್ಷದ ಚಾಲನೆಗೆ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ

ಅಂಕಣ