ಶುಕ್ರವಾರ, ಮೇ 17, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗಂಡು ಮಗು, ವರದಕ್ಷಿಣೆಗೆ 8 ವರ್ಷ ಕಿರುಕುಳ-ನ್ಯೂಯಾರ್ಕ್‌ನಲ್ಲಿ ಭಾರತದ ಮಹಿಳೆ ಆತ್ಮಹತ್ಯೆ

Twitter
Facebook
LinkedIn
WhatsApp
ಗಂಡು ಮಗು, ವರದಕ್ಷಿಣೆಗೆ  8 ವರ್ಷ ಕಿರುಕುಳ-ನ್ಯೂಯಾರ್ಕ್‌ನಲ್ಲಿ ಭಾರತದ ಮಹಿಳೆ ಆತ್ಮಹತ್ಯೆ

ನ್ಯೂಯಾರ್ಕ್​, ಆ 07 : ಗಂಡು ಮಗುವಾಗಲಿಲ್ಲವೆಂದು ಪತಿ ಮತ್ತು ಕುಟುಂಬ ಸದಸ್ಯರು ನೀಡುತ್ತಿದ್ದ ಕಿರುಕುಳದಿಂದ ಬೇಸತ್ತು ಭಾರತೀಯ ಮಹಿಳೆಯೊಬ್ಬರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಉತ್ತರ ಪ್ರದೇಶದ ಬಿಜ್ನೋರ್​ನ ಮಹಿಳೆ ಆತ್ಮಹತ್ಯೆಗೂ ಮುನ್ನ ವಿಡಿಯೋ ರೆಕಾರ್ಡ್ ಮಾಡಿದ್ದು, ಪತಿ ಹಾಗೂ ಅತ್ತೆಯಂದಿರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಮಂದೀಪ್ ಕೌರ್ ಅವರ ಅತ್ತೆ ಮೊಮ್ಮಗನಾಗಬೇಕೆಂದು ಬಯಸಿದ್ದರು ಆದರೆ ಅವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದರು. ಪತಿ ಹಾಗೂ ಅತ್ತೆ 8 ವರ್ಷಗಳಿಂದ ಮನದೀಪ್‌ಗೆ ಚಿತ್ರಹಿಂಸೆ ನೀಡುತ್ತಿದ್ದರು.

ಅಲ್ಲದೆ ಅತ್ತೆ-ಮಾವ 50 ಲಕ್ಷ ರೂ. ವರದಕ್ಷಿಣೆಗಾಗಿ ಬೇಡಿಕೆ ಇಟ್ಟಿದ್ದರು. ಅಲ್ಲದೆ ಇದು ಅಸಾಧ್ಯವಾದಾಗ ಆಕೆಯ ಮೇಲೆ ಹಲ್ಲೆ ನಡೆಸಿ ಸಾಯುವಂತೆ ಹೇಳುತ್ತಿದ್ದರು ಎಂದು ಮಂದೀಪ್ ಕೌರ್‍ ಸಹೋದರಿ ಕುಲದೀಪ್ ಕೌರ್‌ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮಂದೀಪ್ ಫೆಬ್ರವರಿ 2015ರಲ್ಲಿ ವಿವಾಹವಾಗಿದ್ದು, ಬಳಿಕ ನ್ಯೂಯಾರ್ಕ್‌ಗೆ ತೆರಳಿದ್ದರು ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.

ಮನದೀಪ್ ಕೌರ್ ಅವರ ತಂದೆ ಜಸ್ಪಾಲ್ ಸಿಂಗ್ ಅವರು ಮಂದೀಪ್ ಕೌರ್ ಅವರ ಪತಿ ರಂಜೋತ್ವೀರ್ ಸಿಂಗ್ ಸಂಧು, ರಂಜೋತ್ವೀರ್ ಅವರ ತಂದೆ ಮುಖ್ತಾರ್ ಸಿಂಗ್, ತಾಯಿ ಕುಲದೀಪ್ ರಾಜ್ ಕೌರ್ ಮತ್ತು ಸಹೋದರ ಜಸ್ವೀರ್ ಸಿಂಗ್ ಅವರು ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿ ಎಫ್‌ಐಆರ್ ದಾಖಲಿಸಿದ್ದಾರೆ. ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯ ನಜಿಬಾಬಾದ್ ಪೊಲೀಸ್ ಠಾಣೆಯ ಪೊಲೀಸರು ಸೆಕ್ಷನ್ 306 (ಆತ್ಮಹತ್ಯೆಗೆ ಪ್ರಚೋದನೆ), 498-ಎ (ಕೌಟುಂಬಿಕ ಹಿಂಸೆ), 323, 342 (ಶಿಕ್ಷೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯೂಯಾರ್ಕ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೃತದೇಹವನ್ನು ಭಾರತಕ್ಕೆ ತರುವ ಪ್ರಯತ್ನ ನಡೆದಿದ್ದು, ನ್ಯೂಯಾರ್ಕ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯ ಅಧಿಕಾರಿಗಳು ಕುಟುಂಬ ಸದಸ್ಯರಿಗೆ ಎಲ್ಲ ರೀತಿಯ ನೆರವು ನೀಡಲಾಗುವುದು ಎಂದು ತಿಳಿಸಿದ್ದಾರೆಂದು ವರದಿಯಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ